ಧರ್ಮಸ್ಥಳ ಪ್ರಕರಣ | ಷಡ್ಯಂತ್ರ ಮಾಡಿದವರನ್ನು ಮುಟ್ಟದಂತೆ ಎಸ್‌ಐಟಿ ಮೇಲೆ ಒತ್ತಡ: ಸಂಸದ ಬೊಮ್ಮಾಯಿ

Date:

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿಗೆ ಷಡ್ಯಂತ್ರ ಮಾಡಿದವರನ್ನು ಮುಟ್ಟದಂತೆ ರಾಜಕೀಯ ಒತ್ತಡ ಇದೆ. ನಿರೀಕ್ಷೆಗೆ ತಕ್ಕಂತೆ ಎಸ್ಐಟಿ ತನಿಖೆ ನಡೆಯುತಿಲ್ಲ. ಪೊಲೀಸ್ ಪದ್ಧತಿ ಪ್ರಕಾರ ತನಿಖೆ ನಡೆಯುತ್ತಿಲ್ಲ ಎಂದು ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮಾಸ್ಕ್ ಮ್ಯಾನ್‌ನ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗುತ್ತಿವೆ. ಎಸ್ಐಟಿಗೆ ಉತ್ತರದಾಯಿತ್ವ ಇದೆ, ಜವಾಬ್ದಾರಿ ಇದೆ. ಶೀಘ್ರದಲ್ಲೇ ವರದಿ ಕೊಡಲಿ, ಇದುವರೆಗೆ ಆಗಿರುವ ತ‌ನಿಖೆ ಬಗ್ಗೆ ವರದಿ ಕೊಡಲಿ” ಎಂದು ಆಗ್ರಹಿಸಿದರು.

“ಎಸ್ಐಟಿಯವರು ಷಡ್ಯಂತ್ರ ಮಾಡಿದ ಮುಖ್ಯ ವ್ಯಕ್ತಿಗಳನ್ನೇ ಇನ್ನೂ ಮುಟ್ಟಿಲ್ಲ. ಎಸ್ಐಟಿಯವರು ನಮ್ಮನ್ನು ಮುಟ್ಟಲ್ಲ ಅಂತ ಅವರಿಗೂ ಖಾತ್ರಿ ಆಗಿದೆ, ಅದಕ್ಕಾಗಿಯೇ ಅವರು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಹೊಸ ಹೊಸ ದೂರುಗಳು ಬರುತ್ತಿವೆ.ಅವುಗಳನ್ನೂ ತ‌ನಿಖೆ ಮಾಡುತ್ತಿದ್ದಾರೆ. ಎಸ್ ಐಟಿಗೆ ಷಡ್ಯಂತ್ರ ಮಾಡಿದವರನ್ನು ಮುಟ್ಟಬೇಡಿ ಅನ್ನುವ
ರಾಜಕೀಯ ಒತ್ತಡ ಇದೆ. ಅದಕ್ಕಾಗಿ ಇನ್ನೂ ಯಾರನ್ನೂ ಬಂಧಿಸದೇ ವಿಚಾರಣೆ ಮಾತ್ರ ಮಾಡುತ್ತಿದೆ. ಎಸ್ಐಟಿ ಇಲ್ಲಿವರೆಗೆ ಆಗಿರುವ ತನಿಖೆ ಬಗ್ಗೆ ವರದಿಯನ್ನು ಎಸ್ಐಟಿ ಕೊಡಲಿ” ಎಂದು ಬೊಮ್ಮಾಯಿ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂವಿಧಾನ ಬಾಹಿರ

ಜಾತಿ ಜನಗಣತಿ ಮೂಲಕ ಕ್ರೈಸ್ತ ಧರ್ಮಕ್ಕೆ ಮತಾಂತರದ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಸಂವಿಧಾನದಲ್ಲಿ ಕೇವಲ ಆರು ಧರ್ಮಗಳು ಇವೆ, ಅಷ್ಟೇ ಧರ್ಮಗಳ ಹೆಸರು ಬರೆಯಬೇಕು. ರಾಜ್ಯದಲ್ಲಿ ಮತಾತಂತರಗೊಂಡ ಕ್ರೈಸ್ತರು ಅನ್ನುವ ಹೊಸ ಕಾಲಂ ಮಾಡಿದ್ದಾರೆ. ಇದೊಂದು ಧರ್ಮದ ರೀತಿ ಕಾಲಂ ಮಾಡಿದ್ದಾರೆ. ಇದು ಕಾನೂನು ಬಾಹಿರ, ಸಂವಿಧಾನ ಬಾಹಿರ, ರಾಜಕೀಯ ಪ್ರೇರಿತವಾಗಿದೆ. ಎರಡೂ ಕಡೆಯೂ ಮತಾಂತರ ಆಗಿರುತ್ತದೆ. ಆದರೆ, ಸಿಎಂ ಕ್ರೈಸ್ತ ಧರ್ಮದ ಮತಾಂತರಕ್ಕೆ ಮಾತ್ರ ಮನ್ನಣೆ ಕೊಟ್ಟಿರೋದೇಕೆ? ಸಿಎಂ ಅವರು ಒಂದು ಹೆಜ್ಜೆ ಮುಂದೆ ಹೋಗಿ ಮತಾಂತರ ಅವರ ಹಕ್ಕು ಅಂದಿದ್ದಾರೆ. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಹಿಂದೂ ಧರ್ಮದಲ್ಲಿ ಸಮಾನತೆ ಇಲ್ಲ ಅಂತ ಸಿಎಂ‌ ಹೇಳಿದ್ದಾರೆ” ಎಂದು ಆಕ್ಷೇಪಿಸಿದರು.

“ಇದು ಸಮಾನತೆ ಪ್ರಶ್ನೆ ಅಲ್ಲ, ಆಸೆ ಆಮಿಷ ಒಡ್ಡಿ ಮತಾಂತರ ಆಗಿದ್ದಾರೆ. ಅವರ ಬಡತನ, ಶಿಕ್ಷಣ ಇಲ್ಲದಿರುವುದನ್ನು ದುರುಪಯೋಗ ಪಡಿಸಿಕೊಂಡು ಮತಾಂತರ ಮಾಡಲಾಗಿದೆ. ಹಲವರು ಕ್ರೈಸ್ತಧರ್ಮದಿಂದ ವಾಪಸ್ ಬಂದಿದ್ದಾರೆ. ಈ ಮತಾತಂತರ ಬಗ್ಗೆಯೇ ಹಲವು ಅನುಮಾನಗಳಿವೆ. ಇವರಿಗೆ ಜಾತಿ ಕಾಲಂನಲ್ಲಿ ಮತಾತಂತರಗೊಂಡವರಿಗೆ ಹೊಸ ಕಾಲಂ ಮಾಡಲು ಯಾರು ಅಧಿಕಾರ ಕೊಟ್ಟರು? ಯಾವ ಕಾನೂನಿನಲ್ಲಿದೆ? ತಮ್ಮ ಅಕ್ಕಪಕ್ಕ‌ಹಿಂದೆ ಮುಂದೆ ಇರುವವರು ಸಲಹೆ ಪಡೆದು ಅದನ್ನು ಸೇರಿಸಿದ್ದಾರೆ. ಇದು ಧರ್ಮ ಧರ್ಮಗಳ‌ ನಡುವೆ, ವಿಷ ಬೀಜ ಬಿತ್ತುವ, ಗಲಭೆ ಮಾಡಿಸುವ ಕೆಲಸ ಈಗಾಗಲೇ 350 ಕೋಟಿ ರೂ ಪೋಲು ಮಾಡಿದ್ದರು, ಈಗ 420 ಕೋಟಿ ಮತ್ತೆ ಪೋಲು ಮಾಡಲು ಹೊರಟಿದ್ದಾರೆ” ಎಂದು ಕಿಡಿಕಾರಿದರು.

ಮಹಾಸಭೆಯಿಂದ ಗೊಂದಲ ಸೃಷ್ಟಿ

“ವೀರಶೈವ ಲಿಂಗಾಯತ ಮಹಾಸಭೆ ಸಂಪೂರ್ಣವಾಗಿ ಕಾಂಗ್ರೆಸ್ ಮಯ ಆಗಿದೆ. ಮಹಾಸಭೆಗೆ ನನ್ನ ವಿನಂತಿ, ಕಾನೂನು, ಸಂವಿಧಾನ ಪ್ರಕಾರ ಸಲಹೆ ಮಾಡಬೇಕು. ಮಹಾಸಭೆ ಗೊಂದಲ ಸೃಷ್ಟಿಸಬಾರದು. ಒಂದು ಕಡೆ ಹೊಸ ಧರ್ಮ ಅಂತಾರೆ, ಇನ್ನೊಂದು ಕಡೆ ವೀರಶೈವ ಅಂತಾರೆ, ಲಿಂಗಾಯತ ಅಂತಾರೆ, ವೀರಶೈವ ಲಿಂಗಾಯತ ಅಂತಾರೆ. ಈ ಗೊಂದಲ ನಿವಾರಣೆ ಆಗಬೇಕು. ಇಲ್ಲದಿದ್ದರೆ ಜನ ತಮ್ಮ ತೀರ್ಮಾನ ಮಾಡುತ್ತಾರೆ. ನಾವೂ ಕೂಡಾ ಈ ವಿಚಾರದಲ್ಲಿ ಪಕ್ಷದ ಹಿರಿಯರು ಚರ್ಚೆ ಮಾಡುತ್ತಿದ್ದೇವೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...