ಧರ್ಮಸ್ಥಳ | ಎಸ್‌ಐಟಿ ತಮ್ಮ ಪರವಾದ ವರದಿ ನೀಡಲು ಪ್ರಗತಿಪರ ಸಂಘಟನೆಗಳು ಬಯಸುತ್ತವೆ: ಆರ್‌ ಅಶೋಕ್

Date:

ಧರ್ಮಸ್ಥಳದಲ್ಲಿ ಆಗಿರುವ ಮರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಪ್ರಗತಿಪರ ಸಂಘಟನೆಗಳ ಮುಖಂಡರು ಅವರ ಪರವಾದ ವರದಿಯನ್ನೇ ಎಸ್‌ಐಟಿ ನೀಡಬೇಕು ಎಂದು ಬಯಸುತ್ತಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ತಪ್ಪಿತಸ್ಥರು ಯಾರೆಂದು ಗೊತ್ತಾಗಲಿ. ಅದಕ್ಕೆ ಮುನ್ನವೇ ಕೆಟ್ಟ ಸುದ್ದಿಗಳನ್ನು ಹರಡುವುದು ಬೇಡ. ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುವುದು ಬೇಡ” ಎಂದರು.

ಮೈಸೂರಿನಲ್ಲಿ ಡ್ರಗ್‌ ಮಾಫಿಯಾ ತಲೆ ಎತ್ತಿರುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊಡುಗೆ. ಮೈಸೂರಿನಲ್ಲಿ ಡ್ರಗ್‌ ಮಾಫಿಯಾ ತಲೆ ಎತ್ತಿದೆ. ಇವರನ್ನು ಯತೀಂದ್ರ ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಹೋಲಿಸಿದ್ದಾರೆ. ಮೈಸೂರಿನಲ್ಲಿ ಮಾದಕ ವಸ್ತುಗಳ ಫ್ಯಾಕ್ಟರಿಯೇ ಇರುವಾಗ ಗೃಹ ಇಲಾಖೆ ಏನು ಮಾಡುತ್ತಿದೆ? ಸರ್ಕಾರ ಇದುವರೆಗೂ ಎಚ್ಚೆತ್ತುಕೊಂಡಿಲ್ಲ. ಇದಕ್ಕೆ ಮಾಲೀಕ ಯಾರು? ಜಮೀನು ಕೊಟ್ಟವರು ಯಾರು? ನೂರಾರು ಕೋಟಿಯ ದಂಧೆಗೆ ಅವಕಾಶ ನೀಡಿದವರು ಯಾರು? ಸರ್ಕಾರ ಈ ವಿಚಾರದಲ್ಲಿ ಮೈ ಮರೆತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೆಡಿಎಸ್‌ನಿಂದ ಬಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಆದರೆ ಕಾಂಗ್ರೆಸ್‌ನಲ್ಲೇ ಇದ್ದ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಲಿಲ್ಲ. ಆದ್ದರಿಂದಲೇ ಖರ್ಗೆ ಸಿಎಂ ಆಗದಿರುವ ಬಗ್ಗೆ ಹೇಳಿದ್ದಾರೆ. ಈಗಲಾದರೂ ನನ್ನನ್ನು ಸಿಎಂ ಮಾಡಿ ಋಣ ತೀರಿಸಿ ಎಂದು ಅವರು ಹೇಳಿದ್ದಾರೆ. ಸಚಿವ ರಾಜಣ್ಣ ಈಗಾಗಲೇ ಕ್ರಾಂತಿಯ ಬಗ್ಗೆ ಹೇಳಿದ್ದಾರೆ. ಖರ್ಗೆಯವರಯು ಸರಿಯಾದ ಸಮಯಕ್ಕೆ ಮಾವಿನ ಹಣ್ಣಿಗೆ ಕಲ್ಲು ಹೊಡೆದಿದ್ದಾರೆ. ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ” ಎಂದು ಹೇಳಿದರು.

“ಎಸ್‌.ಎಂ.ಕೃಷ್ಣ ಸತ್ತ ನಂತರ ಅವರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತಾಡುತ್ತಿದ್ದಾರೆ. ಎಸ್‌.ಎಂ.ಕೃಷ್ಣ ಐಟಿ ಬಿಟಿಗೆ ನೋಡಿದ ಕೊಡುಗೆಯಿಂದಲೇ ಇಷ್ಟು ಆದಾಯ ರಾಜ್ಯಕ್ಕೆ ಬರುತ್ತಿದೆ. ನಾನು ಜ್ಯೋತಿಷ್ಯ ಹೇಳಲ್ಲ. ಆದರೆ ಖಚಿತವಾಗಿ ಒಪ್ಪಂದ ಆಗಿದೆ ಎಂದು ಶಾಸಕರೇ ಹೇಳಿದ್ದಾರೆ. ಎಲ್ಲ ಜಿಲ್ಲೆಗಳ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್‌ ಅವರಿಗೆ ದೇವರೇ ಗತಿ” ಎಂದರು.

“ಸಿಎಂ ಸಿದ್ದರಾಮಯ್ಯ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಲ್ಲ. ಸಿದ್ದರಾಮಯ್ಯ ಮೈಸೂರಿನಲ್ಲಿ ಒಂದೇ ಒಂದು ಕೆರೆ ಕಟ್ಟಿಸಿಲ್ಲ. ಆದರೂ ಅವರನ್ನು ಮಹಾರಾಜರಿಗೆ ಹೋಲಿಕೆ ಮಾಡುತ್ತಾರೆ. ಶಾಸಕರ ಜೊತೆ ಇವರು ಅಭಿವೃದ್ಧಿ ಬಗ್ಗೆ ಚರ್ಚೆಯೇ ಮಾಡಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...