ಧರ್ಮಸ್ಥಳ | ಬಂಗ್ಲೆಗುಡ್ಡೆ ಸ್ಥಳದಲ್ಲಿ ಎಸ್‌ಐಟಿ ಶೋಧ, 9 ಕಡೆ ಮಾನವನ ಮೂಳೆಗಳು ಪತ್ತೆ!

Date:

ಧರ್ಮಸ್ಥಳ ಗ್ರಾಮಕ್ಕೆ ಅಂಟಿಕೊಂಡ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎನ್ನುವ ಪ್ರಕರಣಕ್ಕೆ ಮತ್ತಷ್ಟು ಜೀವ ಬಂದಿದೆ.

ಎಸ್‌ಐಟಿಯಿಂದ ಬುಧವಾರ ನಡೆದ ಬಂಗ್ಲೆಗುಡ್ಡೆ ಕಾಡಿನೊಳಗಿನ ಸ್ಥಳ ಮಹಜರು ವೇಳೆ ಒಂಬತ್ತು ಕಡೆ ಮಾನವನ ಮೂಳೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಈ ಹಿಂದೆ ಸಾಕ್ಷಿ ದೂರುದಾರ ಗುರುತಿಸಿದ ಸ್ಥಳದ 11ನೇ ಪಾಯಿಂಟ್ ಬಳಿಯಲ್ಲಿ ಅಸ್ಥಿಪಂಜರಗಳು ಪತ್ತೆಯಾಗಿವೆ. ಅಸ್ಥಿಪಂಜರಗಳನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಸಾಕ್ಷಿದಾರ ವಿಠಲಗೌಡರನ್ನು ಎಸ್ಐಟಿ ಅಧಿಕಾರಿಗಳು ಕರೆದುಕೊಂಡು ‌ಬಂದು ಎರಡು ಸಲಾ ಇದೇ ಜಾಗದ ಬಳಿ ಸ್ಥಳ ಮಹಜರು ನಡೆಸಿದ್ದರು. ಆ ಸಂದರ್ಭದಲ್ಲಿ ವಿಠಲಗೌಡರು ಅಧಿಕಾರಿಗಳಿಗೆ ಅಸ್ಥಿಪಂಜರ ಇರುವ ಬಗ್ಗೆ ‌ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಎರಡನೇ ಹಂತದಲ್ಲಿ ಶೋಧ ಕಾರ್ಯ ಪ್ರಾರಂಭಿಸಿದ್ದಾರೆ.

ಬಂಗ್ಲೆಗುಡ್ಡೆಯಲ್ಲಿ ರಾಶಿ ರಾಶಿ ಮೂಳೆಗಳು, ಮೂರ್ನಾಲ್ಕು ತಲೆಬುರುಡೆಯನ್ನು ಸ್ಥಳ ಮಹಜರು ವೇಳೆ ನೋಡಿದ್ದೆ ಎಂದು ವಿಡಿಯೋ ಮಾಡಿ ವಿಠಲಗೌಡ ಹರಿಬಿಟ್ಟಿದ್ದರು. ಎಸ್‌ಐಟಿ ಅಧಿಕಾರಿಗಳ ಸಮ್ಮುಖದಲ್ಲೇ ನೋಡಿದ್ದಾಗಿಯೂ ಹೇಳಿರುವುದರಿಂದ ಬಂಗ್ಲೆಗುಡ್ಡೆ ಸ್ಥಳ ಮಹಜರು ಮಾಡಲು ಎಸ್ಐಟಿ ತಂಡ ಆಗಮಿಸಿದೆ.

ಎಸ್ಐಟಿ ತಂಡದೊಂದಿಗೆ ಧರ್ಮಸ್ಥಳ ಗ್ರಾಮ ಪಂಚಾಯತಿ, soco ತಂಡ, ತಂಡದ ಎಸ್‌ಪಿಗಳಾದ ಜಿತೇಂದ್ರ ಕುಮಾರ್‌ ದಯಾಮ, ಸಿ.ಎ ಸೈಮನ್ ನೇತೃತ್ವದಲ್ಲಿ ಮೂಳೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ತಂಡದಲ್ಲಿ 40 ಜನರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...