ಧಾರವಾಡ ಪ್ರತಿಭಟನೆಯ ಬಿಸಿ: ಎಚ್ಚೆತ್ತ ಸರ್ಕಾರದಿಂದ ಬಜೆಟ್‌ನಲ್ಲಿ ಉದ್ಯೋಗ ನೇಮಕಾತಿ ನೀಲನಕ್ಷೆ ಘೋಷಣೆಗೆ ಮುಂದು

Date:

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಬೃಹತ್ ಪ್ರತಿಭಟನೆಯ ಬಿಸಿ ರಾಜ್ಯ ಸರ್ಕಾರಕ್ಕೆ ತಟ್ಟಿದೆ. ತಕ್ಷಣವೇ ಕಾರ್ಯಪ್ರವೃತ್ತರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದ ಸಮಗ್ರ ಕ್ರಿಯಾಯೋಜನೆಯನ್ನು ಮುಂಬರುವ ಬಜೆಟ್‌ನಲ್ಲಿ ಅಧಿಕೃತವಾಗಿ ಪ್ರಕಟಿಸುವುದಾಗಿ ಭರವಸೆ ನೀಡಿದ್ದಾರೆ.

ಬುಧವಾರ ಮಂಗಳೂರಿನಲ್ಲಿ ಮಾತನಾಡಿದ ಅವರು, ಯುವಜನರಿಗೆ ಉದ್ಯೋಗ ಒದಗಿಸುವುದು ಸರ್ಕಾರದ ಬದ್ಧತೆಯಾಗಿದ್ದು, ಹಂತ ಹಂತವಾಗಿ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸ್ಪಷ್ಟಪಡಿಸುವ ಮೂಲಕ ಪ್ರತಿಭಟನಾಕಾರರ ಆಕ್ರೋಶವನ್ನು ಶಮನ ಮಾಡುವ ಪ್ರಯತ್ನ ಮಾಡಿದ್ದಾರೆ.

​ಉದ್ಯೋಗಾಕಾಂಕ್ಷಿಗಳ ಆಕ್ರೋಶದ ನಡುವೆಯೂ ಈ ಬೃಹತ್ ಪ್ರಮಾಣದ ಖಾಲಿ ಹುದ್ದೆಗಳ ಸಮಸ್ಯೆಗೆ ಹಿಂದಿನ ಬಿಜೆಪಿ ಸರ್ಕಾರದ ನಿಷ್ಕ್ರಿಯತೆಯೇ ಕಾರಣ ಎಂದು ಮುಖ್ಯಮಂತ್ರಿಗಳು ಆರೋಪಿಸಿದ್ದಾರೆ. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ 2.6 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದವು, ಇದು ರಾತ್ರೋರಾತ್ರಿ ಸೃಷ್ಟಿಯಾದದ್ದಲ್ಲ ಎಂದಿದ್ದಾರೆ. ಕಳೆದ ಎರಡೂವರೆ ವರ್ಷಗಳಲ್ಲಿ ತಮ್ಮ ಸರ್ಕಾರವು ವಿವಿಧ ಇಲಾಖೆಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ಪೂರ್ಣಗೊಳಿಸಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ, ನೇಮಕಾತಿ ಪ್ರಕ್ರಿಯೆಯಲ್ಲಿನ ವ್ಯವಸ್ಥಿತ ವಿಳಂಬದಿಂದಾಗಿ ಯಾವುದೇ ಅಭ್ಯರ್ಥಿಗೆ ಅನ್ಯಾಯವಾಗಬಾರದು ಎಂಬ ಕಾಳಜಿಯಿಂದ ಈಗಾಗಲೇ ಗರಿಷ್ಠ ವಯೋಮಿತಿಯನ್ನು ಸಡಿಲಿಸಲಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? Breaking News | ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಗೀಕಾರ

​ಬೆಂಗಳೂರಿನಲ್ಲಿ ಇದೇ ವಿಚಾರವಾಗಿ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಯುವಜನರ ನೋವು ಮತ್ತು ಆತಂಕ ತಮಗೆ ಅರ್ಥವಾಗುತ್ತಿದೆ ಎಂದಿದ್ದಾರೆ. ಯಾವುದೇ ಹಗರಣಗಳಿಲ್ಲದೆ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮೂಲಕ ಅತ್ಯಂತ ಪಾರದರ್ಶಕವಾಗಿ ಭರ್ತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ನೇಮಕಾತಿ ವಿಳಂಬಕ್ಕೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ನೇಮಕಾತಿ ಹಗರಣಗಳೇ ಕಾರಣ ಎಂದು ಆರೋಪಿಸಿದ ಅವರು, ಸದ್ಯ ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಿಂದಾಗಿ ಕೆಲವು ತಾಂತ್ರಿಕ ಅಡೆತಡೆಗಳು ಎದುರಾಗಿವೆ ಎಂದು ಡಿಸಿಎಂ ವಿವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...