ಬಿಜೆಪಿಯೊಳಗಿನ ಸರ್ವಾಧಿಕಾರಿ ಧೋರಣೆ ಕೊನೆಯಾಗಲಿ: ಬಿಎಲ್ ಸಂತೋಷ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

Date:

  • ಬಿಎಲ್ ಸಂತೋಷ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ‌
  • ‘ಯಡಿಯೂರಪ್ಪರಂತಹ ಸಮರ್ಥ ನಾಯಕ ಬಿಜೆಪಿಗೆ ಬೇಕು’

ರಾಜ್ಯ ಬಿಜೆಪಿಯಲ್ಲಿರುವ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು ಎಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು ಪರೋಕ್ಷವಾಗಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ವಾಗ್ದಾಳಿ‌ ನಡೆಸಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, “ನಾವು ಮಾತನಾಡಿದರೆ ಪಕ್ಷವಿರೋಧಿ, ಅವರು ಮಾತನಾಡಿದರೆ ಪಕ್ಷ ಸಂಘಟನೆ. ಎಂಎಲ್​ಸಿ ಹಾಗೂ ರಾಜ್ಯಸಭಾ ಸ್ಥಾನ ಅವರು ಹೇಳಿದವರಿಗೆ ನೀಡಲಾಗುತ್ತಿದೆ. ಅವರ ಒಳ ಹೊಡೆತಗಳು ಹೇಳತೀರದು” ಎಂದು ಅಸಮಾಧಾನ ಹೊರಹಾಕಿದರು.

“ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ರಾಜ್ಯಕ್ಕೆ ಅವರಂತಹ ಜಾತ್ಯತೀತ ಹಾಗೂ ಸಮರ್ಥ ನಾಯಕ ಬೇಕು. ವಿಜಯದಶಮಿ ದಿನ ಒಂದು ಮಾತು ಹೇಳುತ್ತಿದ್ದೇನೆ; ರಾಜ್ಯದಲ್ಲಿ ಬಿಎಸ್​ವೈ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಸೂಕ್ತ. ಬಿಎಸ್​ವೈ ಹೊರಟರೆ ಲಕ್ಷಾಂತರ ಕಾರ್ಯಕರ್ತರು ಹಿಂದೆ ನಿಲ್ಲುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡೋದು ಬೇಡ ಅಂತ ಒತ್ತಡ ಹಾಕಿದ್ದೆವು. ಕೆಲ ನಾಯಕರು ಯಡಿಯೂರಪ್ಪರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದರು” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೆದ್ದ ಗ್ಯಾರಂಟಿಯನ್ನು ಗೆಲುವನ್ನಾಗಿ ಮಾಡಿಕೊಳ್ಳದ ಮೂರ್ಖರು

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತಾದ ಸುದ್ದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡೋಣ. ಒಟ್ಟಾರೆ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು” ಎಂದು ತಿಳಿಸಿದರು.

“ನಾನು ಸಹ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದೆ. ಮೊನ್ನೆ ಚುನಾವಣೆ ವೇಳೆ ಹೊಸ ಮುಖಗಳಿಗೆ ಟಿಕೆಟ್ ನೀಡಲಾಯಿತು. ಹಳಬರ ಕಾಲು ಏನಾದರೂ ಬಿದ್ದು ಹೋಗಿದ್ದವಾ? ಚುನಾವಣೆ ವೇಳೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಆಗಬೇಕಿತ್ತು. ಆದರೆ, ಅದು ಆಗಲಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...