2026ಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವ ಸುಳಿವು ನೀಡಿದ್ರಾ ಡಿಸಿಎಂ ಡಿ ಕೆ ಶಿವಕುಮಾರ್?

Date:

ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಶಾಶ್ವತವಾಗಿ ಇರಲು ಸಾಧ್ಯವಿಲ್ಲ. ಈಗಾಗಲೇ ಐದೂವರೆ ವರ್ಷವಾಗಿದೆ, ಮಾರ್ಚ್ ಬಂದರೆ ಆರು ವರ್ಷವಾಗಲಿದೆ. ಬೇರೆಯವರಿಗೆ ಅವಕಾಶ ನೀಡಬೇಕು. ನಾನು ನಾಯಕತ್ವದಲ್ಲಿ ಇರುತ್ತೇನೆ, ತಲೆಕೆಡಿಸಿಕೊಳ್ಳಬೇಡಿ ಎನ್ನುವ ಮೂಲಕ ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಸುಳಿವು ನೀಡಿದ್ರಾ ಎನ್ನುವ ಕುತೂಹಲ ಮೂಡಿದೆ.

ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಬುಧವಾರ ನಡೆದ ಇಂದಿರಾ ಗಾಂಧಿ ಜನ್ಮದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, “ನಾನು ಉಪಮುಖ್ಯಮಂತ್ರಿಯಾದ ದಿನವೇ ಈ ಹುದ್ದೆ ಬಿಡಬೇಕು ಎಂದು ನಿರ್ಧರಿಸಿದ್ದೆ. ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರು ಇನ್ನು ಸ್ವಲ್ಪ ದಿನ ಮುಂದುವರಿಯಲು ಹೇಳಿದ್ದಾರೆ. ನಾನು ನನ್ನ ಕರ್ತವ್ಯ ನಿಭಾಯಿಸುತ್ತಿದ್ದೇನೆ” ಎಂದು ತಿಳಿಸಿದರು.

“ಪಕ್ಷ ಏನು ಹೇಳುತ್ತದೆಯೋ ಅದನ್ನು ನಾನು ಪಾಲಿಸುತ್ತೇನೆ. ಪಕ್ಷದ ಅದ್ಯಕ್ಷರಾದವರು ಹೇಗೆ ಕೆಲಸ ಮಾಡಬೇಕು ಎಂದು ನಾನು ಉದಾಹರಣೆಯಾಗಬೇಕು, ಪಕ್ಷದಲ್ಲಿ ನಮ್ಮ ಗುರುತು ಬಿಟ್ಟುಹೋಗಬೇಕು. ನಾನು ಈ ವಿಚಾರವಾಗಿ ಮಾತನಾಡುತ್ತಿದ್ದೇನೆ ಹೊರತು, ತ್ಯಾಗ ಅಥವಾ ಓಡಿ ಹೋಗುವ ಬಗ್ಗೆ ಮಾತನಾಡುತ್ತಿಲ್ಲ. ನಾನು ಓಡಿ ಹೋಗುವ ಮನುಷ್ಯನಲ್ಲ. ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ಅಧ್ಯಕ್ಷರು ಎಲ್ಲಿಯವರೆಗೂ ಜವಾಬ್ದಾರಿ ನಿಭಾಯಿಸಲು ಸೂಚಿಸುತ್ತಾರೋ ಅಲ್ಲಿಯವರೆಗೂ ನಾನು ಕರ್ತವ್ಯ ನಿಭಾಯಿಸುತ್ತೇನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನ ಕಚೇರಿಗಳ ಶಂಕುಸ್ಥಾಪನೆ ವಿಚಾರ ಬಗ್ಗೆ ಮಾತನಾಡಿ “ನಾನು ಎಐಸಿಸಿ ನಾಯಕರ ಬಳಿ ದಿನಾಂಕ ಕೇಳಿದ್ದೇನೆ. ಆದಷ್ಟು ಬೇಗ ನೀಡುವುದಾಗಿ ಹೇಳಿದ್ದು, ನಾನು ಅದಕ್ಕಾಗಿ ಕಾಯುತ್ತಿರುವೆ” ಎಂದು ಹೇಳಿದರು.

ದೇಶದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ

“ಇಂದಿರಾ ಗಾಂಧಿ ಅವರು ದೇಶದ ಮಹಿಳಾ ಶಕ್ತಿಯ ಚಿಹ್ನೆ. ದೇಶ ಪ್ರೇಮ, ದೃಢ ನಿಶ್ಚಯ, ಧೈರ್ಯದ ಪ್ರತೀಕವಾಗಿದ್ದಾರೆ. ದೇಶದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಜನ್ಮದಿನ ಆಚರಿಸುತ್ತಿದ್ದೇವೆ. ಇಂದು ಬೆಳಗ್ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಇಂದಿರಾ ಗಾಂಧಿ ಅವರ ಸಮಾಧಿಗೆ ಹೋಗಿ ಗೌರವ ಸಲ್ಲಿಸಿದ್ದಾರೆ. ಸೋನಿಯಾ ಗಾಂಧಿ ಅವರು ನನನ್ನು ಕರೆದು ಅವರ ಸಮಾಧಿ ಸುತ್ತಮುತ್ತಲ ಜಾಗ ಅಭಿವೃದ್ಧಿ ಪಡಿಸಲು ಸೂಚಿಸಿದ್ದರು. ಜೊತೆಗೆ ಪೆರಂಬೂರಿನಲ್ಲಿರುವ ರಾಜೀವ್ ಗಾಂಧಿ ಅವರ ಸಮಾಧಿಗೆ ಗ್ರಾನೈಟ್ ಹಾಕುವ ಭಾಗ್ಯ ನನಗೆ ಸಿಕ್ಕಿದೆ. ನಾನು ಹಾಗೂ ನನ್ನ ಸಹೋದರ ನಮ್ಮದೇ ಕ್ವಾರೆಯಿಂದ ಗ್ರಾನೈಟ್ ಕಲ್ಲನ್ನು ತೆಗೆದುಕೊಂಡು ಹೋಗಿ ಅಲ್ಲಿ ಹಾಕಿ ನಮ್ಮ ಕೈಲಾದ ಸೇವೆ ಮಾಡುವ ಭಾಗ್ಯ ಸಿಕ್ಕಿತು” ಎಂದು ಸ್ಮರಿಸಿದರು.

“ಇಂದಿರಾ ಗಾಂಧಿ ಅವರ ಹತ್ಯೆಯಾದ ದಿನ ನಾವು ಯೂಥ್ ಕಾಂಗ್ರೆಸ್ ಸಮ್ಮೇಳನಕ್ಕಾಗಿ ರೈಲಿನಲ್ಲಿ ಪ್ರಯಾಣ ಬೆಳೆಸುತ್ತಿದ್ದೆವು. ಇಂದಿರಾ ಗಾಂಧಿ ಅವರ ಹತ್ಯೆ ಹಿನ್ನೆಲೆಯಲ್ಲಿ ರೈಲು ಅರ್ಧದಾರಿಯಲ್ಲೇ ನಿಂತಿತು. ಆಗ ನಾನು ಪ್ರವಾಸಿ ಚಿತ್ರಮಂದಿರ ಆರಂಭಿಸಲು ಅರ್ಜಿ ಹಾಕಿದ್ದೆ. ಅದಕ್ಕೆ ನಾನು ಇಂದಿರಾ ಜೀ ಚಿತ್ರಮಂದಿರ ಎಂದು ಹೆಸರಿಟ್ಟೆ. ಇಂದಿರಾ ಗಾಂಧಿ ಅವರ ನಿಧನದ ನಂತರ ರಾಜೀವ್ ಗಾಂಧಿ ಅವರು ನಾಯಕತ್ವ ವಹಿಸಿದರು. ನನಗೆ ಹಾಗೂ ವಿನಯ್ ಕುಮಾರ್ ಸೊರಕೆ ಅವರು ವಿದ್ಯಾರ್ಥಿ ನಾಯಕರಾಗಿದ್ದೆವು” ಎಂದು ಮೆಲುಕು ಹಾಕಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...