ಆರೋಗ್ಯ ಇಲಾಖೆಯಲ್ಲಿ ಅಸಮಾಧಾನ; ಮಾ.11ರಿಂದ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ!

Date:

ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಸಮಾಧಾನ ಉಲ್ಬಣಗೊಂಡಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಘೋಷಿಸಿದೆ.

ಈ ಬಗ್ಗೆ ನಿನ್ನೆ (ಮಾ.5) ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ/ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದು, ಅನಿವಾರ್ಯವಾಗಿ ಅನಿರ್ಧಿಷ್ಟಾವಧಿ ಮುಷ್ಕರವನ್ನು ಕೈಗೊಳ್ಳುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

1009896147

ರಾಜ್ಯದ ಸುಮಾರು 6 ಕೋಟಿ ಜನತೆಗೆ ಆರೋಗ್ಯ ಸೇವೆ ನೀಡುವ ಜವಾಬ್ದಾರಿ ಹೊತ್ತಿರುವ ಇಲಾಖೆಯಲ್ಲಿ ಒಟ್ಟು 36,397 ಅಧಿಕಾರಿ-ನೌಕರರು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ವಯೋನಿವೃತ್ತಿ, ಖಾಲಿ ಹುದ್ದೆಗಳ ಭರ್ತಿಯಿಲ್ಲದಿರುವುದು ಮತ್ತು ಹುದ್ದೆಗಳ ಹೆಚ್ಚಳವಾಗದಿರುವುದು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಮೇಲೆ ಅತಿಯಾದ ಕೆಲಸದ ಒತ್ತಡ ಉಂಟುಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1998ರ ಅಂಕಿ-ಅಂಶಗಳ ಆಧಾರದ ಮೇಲೆ ಸೃಜಿಸಲಾದ ಹುದ್ದೆಗಳಲ್ಲೇ ಶೇಕಡ 47% ಹುದ್ದೆಗಳು ಖಾಲಿ ಇದ್ದು, ಜನಸಂಖ್ಯೆ ಏರಿಕೆಗೆ ಅನುಗುಣವಾಗಿ ಹೊಸ ಹುದ್ದೆಗಳು ಸೃಜಿಸಲ್ಪಟ್ಟಿಲ್ಲ ಎನ್ನಲಾಗಿದೆ.

ಈದಿನ.ಕಾಮ್ ಜೊತೆ ಮಾತನಾಡಿದ ಸಂಘದ ನಿಯೋಜಿತ ಅಧ್ಯಕ್ಷ ಡಾ. ನಿಕಿನ್ ಶೆಟ್ಟಿ ಅವರು, ಕಳೆದ ಎರಡು ವರ್ಷಗಳಿಂದ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸರ್ಕಾರ, ಇಲಾಖೆ ಹಾಗೂ ಇಲಾಖೆ ಮುಖ್ಯಸ್ಥರನ್ನು ಹಲವು ಬಾರಿ ಭೇಟಿಯಾಗಿದ್ದೇವೆ ಎಂದು ಹೇಳಿದರು. ಇಲಾಖೆಯವರಿಂದ ಸಮರ್ಪಕ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಮುಷ್ಕರಕ್ಕೆ ಮುಂದಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದರು.

1009896145

ನಮ್ಮ ಬೇಡಿಕೆಗಳಲ್ಲಿ ಯಾವುದೂ ಸರ್ಕಾರಕ್ಕೆ ಹೆಚ್ಚುವರಿ ಆರ್ಥಿಕ ಹೊರೆ ಆಗುವಂತದ್ದಲ್ಲ. ಬದಲಾಗಿ ಸಾಮಾನ್ಯ ಆಡಳಿತಾತ್ಮಕವಾಗಿ ಪರಿಹರಿಸಬಹುದಾದ ವಿಚಾರಗಳೇ ಆಗಿವೆ. ಸರ್ಕಾರದಿಂದ ಔಷಧಿ (ಡ್ರಗ್ಸ್) ಸರಬರಾಜು, ಪ್ರಮೋಶನ್ ಸಂಬಂಧಿತ ವಿಷಯಗಳು ಹಾಗೂ ವರ್ಗಾವಣೆ (ಟ್ರಾನ್ಸ್‌ಫರ್) ಸಂಬಂಧಿತ ಸಮಸ್ಯೆಗಳ ಬಗ್ಗೆ ನಾವು ಮನವಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಆದರೆ ಸರ್ಕಾರ ನಮ್ಮ ನ್ಯಾಯಸಮ್ಮತ ಬೇಡಿಕೆಗಳಿಗೆ ಸ್ಪಂದಿಸದ ಕಾರಣ ಅನಿವಾರ್ಯವಾಗಿ ಮುಷ್ಕರಕ್ಕೆ ಮುಂದಾಗಬೇಕಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಸರ್ಕಾರದ ನಿರ್ಲಕ್ಷ್ಯದಿಂದಲೇ ಆರೋಗ್ಯ ವ್ಯವಸ್ಥೆ ಸಂಕಷ್ಟದ ಅಂಚಿಗೆ ತಲುಪಿದೆ ಎಂದು ಕೂಡ ಆರೋಪಿಸಿದರು.

1009896139

ಔಷಧಿ ಕೊರತೆ: ಆಸ್ಪತ್ರೆಗಳಲ್ಲಿ ರೋಗಿಗಳ ಪರದಾಟ

ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿ ಮತ್ತು ವೈದ್ಯಕೀಯ ಉಪಕರಣಗಳನ್ನು ಪೂರೈಸುವ ಜವಾಬ್ದಾರಿ ಹೊಂದಿರುವ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ ಸಮರ್ಪಕವಾಗಿ ಔಷಧಿಗಳನ್ನು ಪೂರೈಸಲು ವಿಫಲವಾಗಿದೆ ಎಂದು ಸಂಘ ದೂರಿದೆ.

ಇದರಿಂದ ಹಲವಾರು ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಉಂಟಾಗಿ, ರೋಗಿಗಳಿಗೆ ಸಮಯೋಚಿತ ಚಿಕಿತ್ಸೆ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ.

AB-ArK ಅನುದಾನವನ್ನು ತುರ್ತು ಪರಿಸ್ಥಿತಿಗೆ ಮಾತ್ರ ಬಳಸಲು ಅವಕಾಶವಿದ್ದರೂ, ನಿರಂತರವಾಗಿ ಔಷಧಿ ಖರೀದಿಗೆ ಬಳಸಬೇಕಾದ ಪರಿಸ್ಥಿತಿ ಉಂಟಾಗಿದೆ. ಇದರಿಂದ ಆಸ್ಪತ್ರೆಗಳ ಅಭಿವೃದ್ಧಿ ಕಾಮಗಾರಿಗಳು ಹಾಗೂ ನಿರ್ವಹಣಾ ಕಾರ್ಯಗಳು ಕುಂಠಿತಗೊಂಡಿವೆ.

1009896140

5 ವರ್ಷಗಳಿಂದ ಮುಂಬಡ್ತಿ ಇಲ್ಲ – ಜೇಷ್ಠತಾ ಪಟ್ಟಿ ಪ್ರಕಟಣೆ ಬಾಕಿ

ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ ಮೂರು ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಬೇಕೆಂಬ ಆದೇಶವಿದ್ದರೂ, 1973ರಿಂದ ಸಮಗ್ರ ತಿದ್ದುಪಡಿ ನಡೆದಿಲ್ಲ ಎಂಬುದು ಸಂಘದ ಆರೋಪ.

ಕಳೆದ ಐದು ವರ್ಷಗಳಿಂದ ಯಾವುದೇ ವೃಂದದ ಸಿಬ್ಬಂದಿಗಳಿಗೆ ಮುಂಬಡ್ತಿ ನೀಡಲಾಗಿಲ್ಲ. ಜೇಷ್ಠತಾ ಪಟ್ಟಿಗಳನ್ನು ನಿಯಮಾನುಸಾರ ಪ್ರಕಟಿಸದಿರುವುದರಿಂದ ಅರ್ಹರು ಪದೋನ್ನತಿಯಿಂದ ವಂಚಿತರಾಗಿದ್ದಾರೆ.

1009896138 1

ಉನ್ನತ ವ್ಯಾಸಂಗಕ್ಕೆ ಅವಕಾಶ ಕಡಿತ

ಸೇವಾನಿರತ ವೈದ್ಯರು ಮತ್ತು ಸಿಬ್ಬಂದಿಗಳಿಗೆ ಉನ್ನತ ವ್ಯಾಸಂಗ, ಸ್ನಾತಕೋತ್ತರ ಅಧ್ಯಯನಕ್ಕೆ ವೇತನ ಹಾಗೂ ಭತ್ಯೆಗಳೊಂದಿಗೆ ನಿಯೋಜನೆ ನೀಡುವ ಪದ್ಧತಿಯನ್ನು ಈ ಸಾಲಿನಲ್ಲಿ ಸ್ಥಗಿತಗೊಳಿಸಲಾಗಿದೆ. ಇತರೆ ಸ್ವಾಯತ್ತ ಆರೋಗ್ಯ ಸಂಸ್ಥೆಗಳಲ್ಲಿ ಸೌಲಭ್ಯ ಮುಂದುವರಿದಿದ್ದರೂ, ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಮಾತ್ರ ಅವಕಾಶ ಇಲ್ಲದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ಗುತ್ತಿಗೆ ವೈದ್ಯರು – ಸೇವಾ ಭದ್ರತೆ ಪ್ರಶ್ನೆ

ಗುತ್ತಿಗೆ ವೈದ್ಯರು ಮತ್ತು ನೌಕರರನ್ನು 3 ವರ್ಷ ಸೇವೆಯ ಬಳಿಕ ಖಾಯಂಗೊಳಿಸುವ ಪ್ರಕ್ರಿಯೆ ಸ್ಥಗಿತಗೊಂಡಿದೆ. ಎನ್.ಹೆಚ್.ಎಂ ಹಾಗೂ ಕೇಂದ್ರ ಪುರಸ್ಕೃತ ಯೋಜನೆ ಅಡಿಯಲ್ಲಿ ಕಾರ್ಯನಿರತ ಸುಮಾರು 6 ಸಾವಿರ ಸಿಬ್ಬಂದಿಗೆ 3-4 ತಿಂಗಳಿಗೊಮ್ಮೆ ಮಾತ್ರ ವೇತನ ಸಿಗುತ್ತಿದೆ ಎಂಬುದು ಗಂಭೀರ ಆರೋಪವಾಗಿದೆ.

ಸೇವಾ ಭದ್ರತೆ, ಕೃಪಾಂಕ ಸೌಲಭ್ಯ ಮತ್ತು ನಿಯಮಿತ ವೇತನ ನೀಡಬೇಕೆಂದು ಸಂಘ ಒತ್ತಾಯಿಸಿದೆ.

1009896143 1

ಬೇಡಿಕೆಗಳನ್ನು ಈಡೇರಿಸದಿದ್ದರೆ ಎರಡು ಹಂತಗಳಲ್ಲಿ ಮುಷ್ಕರ

ಮೊದಲ ಹಂತದಲ್ಲಿ, ಮಾರ್ಚ್ 11 ರಿಂದ 15 ರವರೆಗೆ, ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಡಿಸ್ಪೆನ್ಸರಿಗಳಲ್ಲಿನ ಎಲ್ಲಾ ವೃಂದದ ವೈದ್ಯರು ಹಾಗೂ ಅಧಿಕಾರಿ-ನೌಕರರು ಕಪ್ಪುಪಟ್ಟಿ ಧರಿಸಿ ಹೊರರೋಗಿಗಳ ಚಿಕಿತ್ಸೆಯನ್ನು ಸ್ಥಗಿತಗೊಳಿಸಿ, ಕೇವಲ ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಎರಡನೇ ಹಂತದಲ್ಲಿ, ಮಾರ್ಚ್ 16 ರಿಂದ ಬೇಡಿಕೆಗಳು ಈಡೇರುವವರೆಗೆ, ರಾಜ್ಯದ ಆರೋಗ್ಯ ಇಲಾಖೆಯ ಎಲ್ಲಾ ವೈದ್ಯರು ಹಾಗೂ ಅಧಿಕಾರಿ-ನೌಕರರು ಕರ್ತವ್ಯಕ್ಕೆ ಅನಿರ್ಧಿಷ್ಟಾವಧಿ ಗೈರಾಗುವ ಮೂಲಕ ಮುಷ್ಕರವನ್ನು ಮುಂದುವರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಕಪ್ಪುಪಟ್ಟಿ ಧರಿಸಿ ಹೊರರೋಗಿ ಸೇವೆಯನ್ನು ಸ್ಥಗಿತಗೊಳಿಸಿ ತುರ್ತು ಸೇವೆ ಮಾತ್ರ ನಿರ್ವಹಿಸಲಿದ್ದಾರೆ.

ಬೇಡಿಕೆ ಈಡೇರುವವರೆಗೂ ಎಲ್ಲಾ ವೃಂದದ ವೈದ್ಯರು ಮತ್ತು ಸಿಬ್ಬಂದಿಗಳು ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಿದ್ದಾರೆ.

ಇದನ್ನೂ ಓದಿ: ಉಡುಪಿ | ಪಿಎಸ್‌ಐ ನಾಸೀರ್ ಹುಸೇನ್ ನಿಧನಕ್ಕೆ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಸಂತಾಪ

ಆರೋಗ್ಯ ಇಲಾಖೆ ಸೇವಾ ಕ್ಷೇತ್ರವಾಗಿರುವುದರಿಂದ ಮುಷ್ಕರದ ಪರಿಣಾಮ ನೇರವಾಗಿ ಸಾರ್ವಜನಿಕರ ಮೇಲೆ ಬೀಳುವ ಸಾಧ್ಯತೆ ಇದೆ. ವಿಶೇಷವಾಗಿ ಗ್ರಾಮೀಣ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸೇವಾ ವ್ಯತ್ಯಯ ಉಂಟಾದರೆ ಬಡ ಮತ್ತು ಮಧ್ಯಮ ವರ್ಗದ ಜನತೆ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ.

ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ರಾಜ್ಯದ ಆರೋಗ್ಯ ವ್ಯವಸ್ಥೆ ಗಂಭೀರ ಸಂಕಷ್ಟಕ್ಕೆ ತಲುಪುವ ಸಾಧ್ಯತೆ ಇದೆ. ಸಾರ್ವಜನಿಕರ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗದಂತೆ ಸರ್ಕಾರ ಶೀಘ್ರವಾಗಿ ಬೇಡಿಕೆ ಈಡೇರಿಸಬೇಕು ಎಂಬುದು ಎಲ್ಲರ ಆಶಯವಾಗಿದೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...