ಡಿಸ್ಟಿಲರಿಗಳು ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ಬರಲಿ: ಸಿಎಂ ಸಿದ್ದರಾಮಯ್ಯ ಸೂಚನೆ

Date:

ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು (ಮದ್ಯ ತಯಾರಿಕೆ ಘಟಕಗಳು) ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬುವುದನ್ನು ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ಸೂಚನೆಗಳನ್ನು ನೀಡಿದ್ದು, ಇದರ ಪ್ರಕಾರ ಡಿಸ್ಟಿಲರಿಗಳು ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಮೆಕ್ಕೆಜೋಳ ಖರೀದಿ ಹಾಗೂ ಎಥೆನಾಲ್‌ಗೆ ಸಂಬಂಧಿಸಿದಂತೆ ತಮ್ಮ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, “ಕೇಂದ್ರ ಸರ್ಕಾರ ಈಗಾಗಲೇ ಎಲ್ಲ ಧಾನ್ಯ ಆಧಾರಿತ ಡಿಸ್ಟಿಲರಿಗಳು ನಾಫೆಡ್/ಎನ್ಸಿಸಿಎಫ್ ಮೂಲಕ ಮೆಕ್ಕೆಜೋಳ ಸಂಗ್ರಹಿಸಲು ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಹೊರಡಿಸಿದೆ. ಇದರ ಪ್ರಕಾರ ಎಲ್ಲ ಡಿಸ್ಟಿಲರಿಗಳು ಕಾರ್ಯ ನಿರ್ವಹಿಸಬೇಕು” ಎಂದರು.

“ಎಥೆನಾಲ್ ಕೋಟಾ ನಿಗದಿ, ಮೆಕ್ಕೆಜೋಳ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೂ ಮೆಕ್ಕೆ ಜೋಳ ರೈತರ ಹಿತವನ್ನು ಕಾಪಾಡಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ. ಡಿಸ್ಟಿಲರಿಗಳು ನೇರವಾಗಿ ರೈತರಿಂದ ಕನಿಷ್ಠ ಬೆಂಬಲ ದರ ನೀಡಿ ಮೆಕ್ಕೆ ಜೋಳ ಖರೀದಿಸಲು ಮುಂದೆ ಬಂದರೆ, ಜಿಲ್ಲಾಡಳಿತದ ಮೂಲಕ ಸಹಕಾರ ನೀಡಲಾಗುವುದು” ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗಾಗಲೇ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ರಾಜ್ಯದ ಕಬ್ಬು ಬೆಳೆಗಾರರ, ಸಕ್ಕರೆ ಕಾರ್ಖಾನೆಗಳ ಹಾಗೂ ಡಿಸ್ಟಿಲರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿದ್ದೇನೆ. ಮೆಕ್ಕೆಜೋಳದ ನಾಫೆಡ್ ಪೂರ್ವ ನಿರ್ಧಾರಿತ ಖರೀದಿ ಬೆಲೆ ಕ್ವಿಂಟಾಲ್‌ಗೆ 2639 ರೂ. ಇದ್ದು, ಇದರಲ್ಲಿ ಪ್ರತಿ ಕ್ವಿಂಟಾಲ್‌ಗೆ 2400 ರೂ. ಕನಿಷ್ಟ ಬೆಂಬಲ ಬೆಲೆ ಮೂಲಕ ರೈತರಿಗೆ ನೇರವಾಗಿ ಪಾವತಿಯಾಗಲಿದೆ. ಈ ಹಿನ್ನೆಲೆಯಲ್ಲಿ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಗೆ ಡಿಸ್ಟಿಲರಿಗಳಿಗೆ ಅವಕಾಶ ನೀಡಲಾಗಿದ್ದು, ಈ ಕುರಿತು ಡಿಸ್ಟಿಲರಿಗಳು ನಿರ್ಧಾರ ಕೈಗೊಳ್ಳಬೇಕಾಗಿದೆ” ಎಂದು ಮುಖ್ಯಮಂತ್ರಿ ಹೇಳಿದರು.

ಎಥೆನಾಲ್ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ನಿರಂತರವಾಗಿ ಕೇಂದ್ರಕ್ಕೆ ಮನವಿ ಮಾಡಿದ್ದರೂ 2020ರಿಂದ ಹೆಚ್ಚಿಸಿಲ್ಲ. ಆದರೆ ಇದೇ ಅವಧಿಯಲ್ಲಿ ಮೆಕ್ಕೆ ಜೋಳದ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ ಮಾಡುತ್ತಾ ಬರಲಾಗಿದೆ. ಇದರಿಂದ ಡಿಸ್ಟಿಲರಿಗಳಿಗೆ ನಷ್ಟ ಉಂಟಾಗುತ್ತಿದೆ ಎಂದು ಡಿಸ್ಟಿಲರಿ ಪ್ರತಿನಿಧಿಗಳು ಸಿಎಂ ಗಮನಕ್ಕೆ ತಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...