ಶ್ರೀಲಂಕಾದಲ್ಲಿಅಪ್ಪಳಿಸಿದ ದಿತ್ವಾ ಚಂಡಮಾರುತವು ಸುಮಾರು 69 ಮಂದಿಯ ಸಾವಿಗೆ ಕಾರಣವಾಗಿದೆ. ನವೆಂಬರ್ 30ರಂದು ಚಂಡಮಾರುತ ಚೆನ್ನೈಗೆ ಅಪ್ಪಳಿಸಲಿದೆ. ಅದಕ್ಕೂ ಮುನ್ನವೇ ಭಾರತದ ಕೆಲವು ರಾಜ್ಯಗಳಲ್ಲಿ ಹವಾಮಾನದಲ್ಲಿ ಬದಲಾವಣೆಯಾಗಿದೆ. ದಿತ್ವಾ ಪರಿಣಾಮದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆ ಯೆಲ್ಲೂ ಅಲರ್ಟ್ ಘೋಷಿಸಿದೆ.
ನವೆಂಬರ್ 30ರಿಂದ ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ. ಮುಂದಿನ ಏಳು ದಿನಗಳವರೆಗೆ ಇದೇ ಹವಾಮಾನ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನು ಓದಿದ್ದೀರಾ? ದಿತ್ವಾ ಚಂಡಮಾರುತ | ಶ್ರೀಲಂಕಾದಲ್ಲಿ 69 ಮಂದಿ ಸಾವು, ನಾಳೆ (ನ.30) ಚೆನ್ನೈಗೆ ಅಪ್ಪಳಿಸಲಿದೆ ಸೈಕ್ಲೋನ್
ಇನ್ನು ಉತ್ತರ ಒಳನಾಡಿನ ರಾಜ್ಯಗಳಲ್ಲಿ ನಾಳೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ. ಡಿಸೆಂಬರ್ 1ರಿಂದ ಮೂರು ದಿನಗಳವರೆಗೆ ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.
ಇನ್ನು ದಕ್ಷಿಣ ಒಳನಾಡಿನ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಾಳೆ ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರದಲ್ಲಿ ಯೆಲ್ಲೂ ಅಲರ್ಟ್ ಘೋಷಿಸಲಾಗಿದೆ.





