ಬಿಜೆಪಿ-ದಳದವರಿಗೆ ಅನುಕಂಪ ಬಂದು ಬರ ಅಧ್ಯಯನಕ್ಕೆ ಹೊರಟಿದ್ದಾರೆ: ಡಿ ಕೆ ಶಿವಕುಮಾರ್‌

Date:

  • ‘ಸರ್ಕಾರ ಉತ್ತಮ ರೀತಿಯಲ್ಲಿ ಅಧ್ಯಯನ ನಡೆಸಿದೆ’
  • ‘ಬರ ಕುರಿತು ಕೇಂದ್ರ ಸರ್ಕಾರಕ್ಕೆ ವರದಿ ಕೊಡಲಾಗಿದೆ’

ಬಿಜೆಪಿ – ದಳದವರಿಗೆ ಅನುಕಂಪ ಬಂದು ಬರ ಅಧ್ಯಯನಕ್ಕೆ ಹೊರಟಿದ್ದಾರೆ. ಈಗಾಗಲೇ ಸರ್ಕಾರ ಉತ್ತಮ ರೀತಿಯಲ್ಲಿ ಅಧ್ಯಯನ ನಡೆಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, “ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ. ಈಗಾಗಲೇ ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಲಿ” ಎಂದು ಒತ್ತಾಯಿಸಿದರು.

“ಬರ ಕುರಿತು ಕೇಂದ್ರ ಸರ್ಕಾರಕ್ಕೆ ವರದಿ ಕೊಡಲಾಗಿದೆ. ವರದಿಯನ್ನ ಸ್ವೀಕಾರ ಮಾಡಿರುವ ಕೇಂದ್ರ ಸರ್ಕಾರವು ಅಧ್ಯಯನಕ್ಕೆ ಅಧಿಕಾರಿಗಳನ್ನು ರಾಜ್ಯಕ್ಕೆ ಕಳುಹಿಸಿದ್ದರು. 26 ಸಂಸದರು, 19 ಜೆಡಿಎಸ್ ಶಾಸಕರು, 65 ಬಿಜೆಪಿ ಶಾಸಕರು ಪ್ರಧಾನಿಯವರನ್ನು ಹೋಗಿ ಭೇಟಿ ಮಾಡಲಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಚಾರಕ್ಕಾಗಿ ಎರಡು ಗಿಡ ನೋಡಿಕೊಂಡು ಬಂದರೆ ಏನಿಲ್ಲ. ನಾವು ಕೂಡ ಗಿಡಗಳನ್ನು ನೋಡಿದ್ದೇವೆ, ನಿಮ್ಮಿಂದ ರಾಜ್ಯಕ್ಕೆ ಏನಾಗಿದೆ? ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಹಣ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

800 ಕೋಟಿ ಬಿಡುಗಡೆ

“ಗುರುವಾರ ನಡೆದ ಸಚಿವ ಸಂಪುಟದಲ್ಲಿ 800 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ಕುಡಿಯುವ ನೀರಿನ, ಮೇವು, ಸೇರಿದಂತೆ ಎಲ್ಲದಕ್ಕೂ ಉಪಯೋಗ ಮಾಡಬೇಕು ಎಂದು ಹಣ ಕೊಟ್ಟಿದ್ದೇವೆ” ಎಂದು ತಿಳಿಸಿದರು.

”ಬರ ಪರಿಹಾರ ವಿಚಾರವಾಗಿ ಕೇಂದ್ರ ಸರ್ಕಾರ ತಮ್ಮ ನಿಲುವನ್ನು ತಿಳಿಸಬೇಕು. ನಮ್ಮಿಂದ ಬರ ಪರಿಹಾರ ಕೊಡಲು ಆಗಲ್ಲ ಎಂದು ಕೇಂದ್ರದವರು ಹೇಳಲಿ. ಆದರೂ ನಮ್ಮ ಸರ್ಕಾರ ಬರ ಪರಿಹಾರ ಕೊಡುವ ಬಗ್ಗೆ ಚಿಂತನೆ ನಡೆಸಿದೆ” ಎಂದರು.

“ಬರಗಾಲ ಸಂದರ್ಭದಲ್ಲಿ ನರೇಗಾ ಮಾನವ ದಿನಗಳನ್ನು ಹೆಚ್ಚಿಸಬೇಕು ಎಂದು ಹೇಳಿದ್ದೇವೆ. 100 ಮಾನವ ದಿನಗಳು ಇದ್ದಿದ್ದು 150 ಮಾಡಬೇಕು ಎಂದು ಪತ್ರ ಬರೆಯಲಾಗಿದೆ. ಆದರೆ ಎರಡು ಮೂರು ತಿಂಗಳು ಆದರೂ ಪ್ರಾರಂಭಿಸಿಲ್ಲ” ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...