ಎಲ್ಲ ಎಟಿಎಂಗಳು ಬಿಜೆಪಿ ಅವರದ್ದಾಗಿದ್ದರಿಂದ ಜನ ತಿರಸ್ಕರಿಸಿದರು: ಡಿಕೆ ಶಿವಕುಮಾರ್‌ ತಿರುಗೇಟು

Date:

  • ‘ಎಟಿಎಂ ಸರ್ಕಾರ’ ಎಂದು ಕಾಂಗ್ರೆಸ್‌ ವಿರುದ್ಧ ಪೋಸ್ಟರ್ ರಿಲೀಸ್ ಮಾಡಿದ ಬಿಜೆಪಿ
  • ಬಿಜೆಪಿ ಆರೋಪಗಳಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ಎಲ್ಲ ಎಟಿಎಂಗಳು ಬಿಜೆಪಿ ಅವರದ್ದೇ ಆಗಿವೆ. ಹೀಗಾಗಿಯೇ ಜನರು ಕಾಂಗ್ರೆಸ್‌ಗೆ ಜೈ ಎಂದಿದ್ದಾರೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ರಾಜ್ಯದ ಜನತೆ ಬಿಜೆಪಿ ತಿರಸ್ಕರಿಸಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಬಿಜೆಪಿಯಿಂದ ‘ಎಟಿಎಂ ಸರ್ಕಾರ’ ಎಂದು ಕಾಂಗ್ರೆಸ್‌ ವಿರುದ್ಧ ಪೋಸ್ಟರ್ ರಿಲೀಸ್ ಮಾಡಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಬಿಜೆಪಿ ಮುಖಂಡರು, ನಾಯಕರು ಕಾಂಗ್ರೆಸ್​ ಪಕ್ಷಕ್ಕೆ ಸೇರುತ್ತಿದ್ದಾರೆ. ಹೀಗಾಗಿ ಬಿಜೆಪಿಯವರು ಇಂತಹ ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ” ಎಂದರು.

ಈ ಹೇಳಿಕೆ ನೀಡುವ ಮುನ್ನ ಬೆಳಗ್ಗೆಯೂ ಕುಮಾರಕೃಪ ಅತಿಥಿಗೃಹದ ಬಳಿ ಬಿಜೆಪಿಗೆ ತಿರುಗೇಟು ನೀಡಿದ್ದ ಡಿಕೆ ಶಿವಕುಮಾರ್‌, “ರಾಜಕೀಯ ಉದ್ದೇಶಕ್ಕಾಗಿಯೇ ಯಡಿಯೂರಪ್ಪ ಅವರು ನನ್ನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದರು. ಬಿಜೆಪಿ ಪಕ್ಷದ ಶಾಸಕರ ವಿರುದ್ಧವೂ ಬೇಕಾದಷ್ಟು ಪ್ರಕರಣಗಳಿವೆ. ಬೇರೆಯವರದ್ದನ್ನು ತನಿಖೆಗೆ ನೀಡದೆ ನನ್ನದನ್ನು ಮಾತ್ರ ನೀಡಿದ್ದೇಕೆ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಲದ ಗುಂಡಿಗೆ ಮನುಷ್ಯರನ್ನು ಇಳಿಸುವುದು ‘ವಿಶ್ವಗುರು’ವಿಗೆ ಶೋಭೆಯಲ್ಲ

“ಅಡ್ವೋಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಈ ವಿಚಾರವನ್ನು ಸ್ಪೀಕರ್ ಬಳಿಯೂ ತೆಗೆದುಕೊಂಡು ಹೋಗದೆ ಯಡಿಯೂರಪ್ಪ ಅವರು ಸೀದಾ ಸಿಬಿಐ ತನಿಖೆಗೆ ಅನುಮತಿ ನೀಡಿದರು. ಸಿಬಿಐ ಅವರು ಶೇ 90 ರಷ್ಟು ತನಿಖೆ ಮುಗಿದಿದೆ ಎಂದು ಹೇಳಿದ್ದಾರೆ. ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ. ವಿವರವನ್ನೂ ಪಡೆದಿಲ್ಲ. ನೋಡೋಣ ಏನು ಮಾಡುತ್ತಾರೋ. ನಾನು ನನ್ನ ವಕೀಲರ ಬಳಿ ಚರ್ಚೆ ಮಾಡುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...