ನಿಮ್ಮ ಸುಪುತ್ರ ದಿನ ಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ: ದೇವೇಗೌಡರಿಗೆ ಡಿಕೆಶಿ ತಿರುಗೇಟು

Date:

  • ಜೆಡಿಎಸ್‌ ಸಿದ್ಧಾಂತ ನಂಬಿರುವ ಕಾರ್ಯಕರ್ತರು ಏನಾಗಬೇಕು: ಪ್ರಶ್ನೆ
  • ‘ರಾಜ್ಯಾದ್ಯಂತ ಸಾವಿರಾರು ಮಂದಿ ಕಾಂಗ್ರೆಸ್‌ ಸೇರಲು ಮುಂದಾಗಿದ್ದಾರೆ’

ಪೂಜನೀಯ ದೇವೇಗೌಡರೇ, ನಿಮ್ಮ ಸುಪುತ್ರರು ಪದೇ ಪದೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರೆ ಪಕ್ಷದ ನಾಯಕರು, ಕಾರ್ಯಕರ್ತರು ಎಲ್ಲಿ ಹೋಗಬೇಕು? ನಿಮ್ಮ ಸುಪುತ್ರರು ದಿನ ಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ, ಯಾರ ಜೊತೆ ಬೇಕಾದರೂ ಸಂಬಂಧ ಬೆಳೆಸುತ್ತಾರೆ. ಆದರೆ ಸಿದ್ಧಾಂತ ನಂಬಿರುವ ಕಾರ್ಯಕರ್ತರು ಏನಾಗಬೇಕು” ಎಂದು ಕೆಪಿಸಿಸಿ ಅದ್ಯಕ್ಷ ಡಿ ಕೆ ಶಿವಕುಮಾರ್ ಪ್ರಶ್ನಿಸಿದರು.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮಿಸ್ಟರ್ ಡಿ ಕೆ ಶಿವಕುಮಾರ್ ನಿಮ್ಮ ಆಟ ನಡೆಯಲ್ಲ” ಎಂದು ಎಚ್ಚರಿಸಿದ್ದ ದೇವೇಗೌಡರ ಮಾತಿಗೆ ವಿನಯವಾಗಿಯೇ ಉತ್ತರಿಸಿದರು.

“ಮಹಾತ್ಮಗಾಂಧಿ ಜನ್ಮದಿನದಂದು ನಮ್ಮ ಪಕ್ಷದ ಸಿದ್ಧಾಂತ ನಂಬಿ ಬಂದಿರುವ ಜೆಡಿಎಸ್ ಮುಖಂಡರು, ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇವೆ. ರಾಜ್ಯಾದ್ಯಂತ ಮೂಲೆ ಮೂಲೆಯಿಂದ ಸಾವಿರಾರು ಮಂದಿ ಪಕ್ಷ ಸೇರಲು ಮುಂದಾಗಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವೇಗೌಡರರು ದೊಡ್ಡವರು. ಬಹಳ ಗೌರವದಿಂದ ಅವರ ಮಾತನ್ನು ನಾನು ಸಂತೋಷದಿಂದ ಸ್ವೀಕರಿಸುತ್ತೇನೆ. ನೀವು ಮತ್ತು ನಿಮ್ಮ ಪಕ್ಷದ ನಾಯಕರು ಅನೇಕ ಬಾರಿ ಬಿಜೆಪಿ ಜೊತೆ ಕೈ ಜೋಡಿಸುವುದಿಲ್ಲ ಎಂದು ಹೇಳಿದ್ದಿರಿ. ಆದರೆ ಈಗ ಕೈ ಜೋಡಿಸಿದ್ದೀರಿ. ರಾಜಕಾರಣ ಏನೇ ಇರಲಿ, ಬಿಜೆಪಿ ಜತೆ ಮೈತ್ರಿ ಮೂಲಕ ನೀವು ಕಳುಹಿಸಿರುವ ಸಂದೇಶವನ್ನು ಮುಗ್ಧ ಜನ ಹೇಗೆ ಸ್ವೀಕರಿಸಬೇಕು? ಇಂತಹ ಪರಿಸ್ಥಿತಿಯಲ್ಲಿ ಸಿದ್ಧಾಂತ ನಂಬಿ ನಮ್ಮ ಪಕ್ಷಕ್ಕೆ ಬಂದವರನ್ನು ಪಕ್ಷದ ಅಧ್ಯಕ್ಷನಾಗಿ ನಾನು ಕರೆದುಕೊಳ್ಳಬಾರದೇ?” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬುರ್ನಾಸು ಬಿಜೆಪಿ ಬಿಟ್ಟು ಒಂದಾಗುವರೆ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ? 

“ಈ ಹಿಂದೆ ನೀವು ಕೂಡ ಕಾಂಗ್ರೆಸ್‌ನಿಂದ ಅನೇಕ ನಾಯಕರನ್ನು ನಿಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚೆಸ್, ಫುಟ್ಬಾಲ್ ಗೇಮ್ ಆಡಿಲ್ಲವೇ? ನೀವು ಯಾರನ್ನು ಬೇಕಾದರೂ ಕಟ್ಟಿಹಾಕಿಕೊಳ್ಳಿ, ಮನೆಯೊಳಗೇ ಕೂಡಿ ಹಾಕಿಕೊಳ್ಳಿ. ನಾವು ಬೇಡ ಎನ್ನುವುದಿಲ್ಲ. ಈ ಹಿಂದೆ ನಮ್ಮ ಪಕ್ಷದಿಂದ ಎಂಎಲ್ಸಿ ಆಗಿದ್ದ ಸಿ.ಎಂ. ಇಬ್ರಾಹಿಂ ಅವರನ್ನು, ಅವರ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿ ಕರೆದುಕೊಂಡು ಹೋಗಿ ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದೀರಿ. ಅವರು ಈಗ ಏನು ಹೇಳಿದ್ದಾರೆ? ಪಕ್ಷದ ಅಧ್ಯಕ್ಷನಾದ ನನಗೇ ಮೈತ್ರಿ ವಿಚಾರ ತಿಳಿಸಲಿಲ್ಲ ಎಂದು ಹೇಳಿದ್ದಾರೆ. ನಿಮ್ಮ ಪಕ್ಷದ ಬಹುತೇಕ ಮುಖಂಡರು, ಕಾರ್ಯಕರ್ತರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅನೇಕರು ಕಾಂಗ್ರೆಸ್ ಕಡೆ ನೋಡುತ್ತಿದ್ದಾರೆ” ಎಂದರು.

“ಹಳೆಯದನ್ನು ಕೆದಕಿ ಉತ್ತರ ಕೊಡುವ ಅಗತ್ಯವಿಲ್ಲ. ನೀವು ಎಷ್ಟು ವಾರ್ನಿಂಗ್ ಕೊಟ್ಟರೂ ನಿಮ್ಮ ಸುಪುತ್ರರ ಕ್ಷೇತ್ರದಲ್ಲಿ ನಿಮ್ಮನ್ನು ಸಾಕಿ ಬೆಳೆಸಿದ ಜನ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಬಂದಿದ್ದಾರೆ. ಇಲ್ಲಿ ಬಂದಿರುವ ಎಲ್ಲರನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ” ಎಂದು ತಿಳಿಸಿದರು.

“ಕುಮಾರಸ್ವಾಮಿ ಅವರು ಬಿಜೆಪಿ ಮೈತ್ರಿಯಿಂದ ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ಪಕ್ಷದ ದಂಡನಾಯಕನಾಗಿ ಎಷ್ಟು ಬಾರಿ ನಿವೃತ್ತಿ ಘೋಷಿಸುತ್ತೀರಿ? ನಿಮ್ಮನ್ನು ನಂಬಿರುವ ನಾಯಕರು ಕಾರ್ಯಕರ್ತರು ಏನಾಗಬೇಕು? ನೀವು ದಿನಬೆಳಗಾದರೆ ಯಾರ ಜತೆ ಬೇಕಾದರೂ ಸಂಬಂಧ ಬೆಳೆಸಬಹುದು. ಆದರೆ ಸಿದ್ಧಾಂತದ ಮೇಲೆ ರಾಜಕಾರಣ ಮಾಡುವ ನಾಯಕರು, ಕಾರ್ಯಕರ್ತರು ಏನಾಗಬೇಕು?” ಎಂದರು.

“ನಾನು ಯಾರನ್ನು ನಮ್ಮ ಪಕ್ಷಕ್ಕೆ ಬನ್ನಿ ಎಂದು ಕರೆಯುವ ಅಗತ್ಯವಿಲ್ಲ, ಸಾಗರೋಪಾದಿಯಲ್ಲಿ ಬೇರೆ ಪಕ್ಷಗಳ ಕಾರ್ಯಕರ್ತರು ನಮ್ಮ ಪಕ್ಷಕ್ಕೆ ಆಗಮಿಸುತ್ತಿದ್ದಾರೆ. ಬೀದರ್ ನಿಂದ ಚಾಮರಾಜನಗರದವರೆಗೂ ಯಾವುದೇ ಜಿಲ್ಲೆಯಲ್ಲಿನ ನಾಯಕರು ಪಕ್ಷ ಸಿದ್ಧಾಂತ ಒಪ್ಪಿ ಬಂದರೆ ನಮ್ಮ ಪಕ್ಷಕ್ಕೆ ಸ್ವಾಗತ. ಈ ಪಕ್ಷ ಯಾವುದೇ ಒಬ್ಬ ವ್ಯಕ್ತಿಯ ಮೇಲೆ ನಿಂತಿಲ್ಲ. ನಾನು ಇಲ್ಲದಿದ್ದರೂ ನಮ್ಮ ಪಕ್ಷ ಮುಂದುವರಿಯಲಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...