ವೈದ್ಯರ ಪ್ರತಿಭಟನೆ: 14ರಲ್ಲಿ 13 ಬೇಡಿಕೆಗಳ ಪರಿಗಣನೆಗೆ ಸರ್ಕಾರ ಸಮ್ಮತಿ; ಬೇಡಿಕೆಗಳು ಯಾವುವು?

Date:

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ವೈದ್ಯರು ಮತ್ತು ಸಿಬ್ಬಂದಿಗಳು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ವೈದ್ಯಕೀಯ ಸಿಬ್ಬಂದಿಗಳ 14 ಬೇಡಿಕೆಗಳಲ್ಲಿ 13ರನ್ನು ಪರಿಗಣಿಸಿ, ಈಡೇರಿಸುವುದಾಗಿ ರಾಜ್ಯ ಸರ್ಕಾರವು ಒಪ್ಪಿಕೊಂಡಿದೆ. ವೈದ್ಯರು ತಮ್ಮ ಕೆಲಸಗಳಿಗೆ ಮರಳಿದ್ದಾರೆ.

ನಾನಾ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದ ಸರ್ಕಾರಿ ವೈದ್ಯಕೀಯ ಸಿಬ್ಬಂದಿಗಳು ‘ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ’ದ (KGMOA) ನೇತೃತ್ವದಲ್ಲಿ ಮಾರ್ಚ್‌ 11ರಿಂದ ಅನಿರ್ದಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿದ್ದರು. ಮುಷ್ಕರದ ಮೊದಲ ಹಂತದಲ್ಲಿ (ಮಾರ್ಚ್ 11 ರಿಂದ 15) ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರರೋಗಿ (OPD) ಸೇವೆಗಳನ್ನು ಸ್ಥಗಿತಗೊಳಿಸಿ, ಕೇವಲ ತುರ್ತು ಸೇವೆಗಳನ್ನು ಮಾತ್ರ ನೀಡುವುದಾಗಿ ಸಂಘ ಘೋಷಿಸಿತ್ತು. ವೈದ್ಯರು ಕಪ್ಪು ಬ್ಯಾಡ್ಜ್ ಧರಿಸಿ ಪ್ರತಿಭಟನೆ ಆರಂಭಿಸಿದ್ದರು. ಎರಡನೇ ಹಂತದಲ್ಲಿ (ಮಾರ್ಚ್ 16ರಿಂದ) ತುರ್ತು ಸೇವೆಗಳನ್ನೂ ಸಂಪೂರ್ಣ ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಿದ್ದರು.

ವೈದ್ಯರ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಡುತ್ತಿದ್ದಂತೆಯೇ ಮಾರ್ಚ್‌ 10ರಂದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಾಮಾಜಿಕ ಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ, ಮುಖ್ಯ ಕಾರ್ಯದರ್ಶಿ ಹಾಗೂ ಇತರ ಹಿರಿಯ ಅಧಿಕಾರಿಗಳು ವೈದ್ಯರೊಂದಿಗೆ ಸಂಧಾನ ಸಭೆ ನಡೆಸಿದ್ದಾರೆ. ವೈದ್ಯಕೀಯ ಸಿಬ್ಬಂದಿಗಳ ಬಹುತೇಕ ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸಿತು. ಪ್ರತಿಭಟನಾನಿರತರು ತಮ್ಮ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿರುವುದಾಗಿ ಘೋಷಿಸಿದ್ದಾರೆ. ಕರ್ತವ್ಯಕ್ಕೆ ಮರಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

KGMOA ಅಧ್ಯಕ್ಷ ಡಾ. ರವೀಂದ್ರನಾಥ್ ಎಂ. ಮೇತಿ ಅವರ ಪ್ರಕಾರ ಸರ್ಕಾರವು 13 ಬೇಡಿಕೆಗಳನ್ನು ಸಮಯಾವಧಿಯೊಳಗೆ ಈಡೇರಿಸುವುದಾಗಿ ಭರವಸೆ ನೀಡಿದೆ.

ವೈದ್ಯಕೀಯ ಸಿಬ್ಬಂದಿಗಳ 14 ಬೇಡಿಕೆಗಳು;

  1. ವೃಂದ ಮತ್ತು ನೇಮಕಾತಿ ನಿಯಮಗಳು 1973ರಿಂದ ಬದಲಾಗಿಲ್ಲ. ಈ ನಿಯಮಗಳನ್ನು ತಿದ್ದುಪಡಿ ಮಾಡಬೇಕು.
  2. ಹಲವು ವರ್ಷಗಳಿಂದ ಬಾಕಿ ಇರುವ ಬಡ್ತಿ ಪ್ರಕ್ರಿಯೆಗಳನ್ನು ತಕ್ಷಣವೇ ಪೂರ್ಣಗೊಳಿಸಬೇಕು.
  3. ವೈದ್ಯರು, ಪ್ಯಾರಾಮೆಡಿಕಲ್ ಮತ್ತು ಬೆಂಬಲ ಸಿಬ್ಬಂದಿ ಹುದ್ದೆಗಳು ಸೇರಿದಂತೆ ಖಾಲಿ ಇರುವ 39,000 ಹುದ್ದೆಗಳನ್ನು ಭರ್ತಿ ಮಾಡಬೇಕು.
  4. ಎಲ್ಲ ಕ್ಯಾಡರ್‌ಗಳಲ್ಲಿ ಪಾರದರ್ಶಕತೆಗಾಗಿ ಹಿರಿಯತೆ ಪಟ್ಟಿಗಳ (Seniority Lists) ಪ್ರಕಟಣೆ ಮಾಡಬೇಕು.
  5. ವರ್ಗಾವಣೆ ನೀತಿಗಳಿಗೆ ಸುಧಾರಣೆ ತಂದು, ನ್ಯಾಯಯುತ ಮತ್ತು ಸರಿಯಾದ ವರ್ಗಾವಣೆ ನಿಯಮಗಳನ್ನು ಜಾರಿಗೊಳಿಸಬೇಕು.
  6. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆಯನ್ನು ನಿವಾರಿಸಿ, ಅಗತ್ಯ ಔಷಧಗಳನ್ನು (ಇನ್ಸುಲಿನ್, ಆಂಟಿಬಯಾಟಿಕ್ಸ್ ಇತ್ಯಾದಿ) ಸಮಯಕ್ಕೆ ಸರಿಯಾಗಿ ಪೂರೈಕೆ ಮಾಡಬೇಕು.
  7. ಕರ್ತವ್ಯದ ಅವಧಿ ಮುಗಿದ ನಂತರ ಖಾಸಗಿ ಪ್ರಾಸ್ಟ್ರೀಸ್‌ ಮಾಡಲು ಪೂರ್ಣ ಅವಕಾಶ ನೀಡಬೇಕು.
  8. ಇನ್-ಸರ್ವಿಸ್ ಸಿಬ್ಬಂದಿಗಳು ಉನ್ನತ ಶಿಕ್ಷಣ ಮತ್ತು ಹೆಚ್ಚಿನ ಅಧ್ಯಯನ ನಡೆಸಲು ಅವಕಾಶ ಒದಗಿಸಬೇಕು.
  9. ಇಲಾಖೆಯಲ್ಲಿ ಹೆಚ್ಚುವರಿ ಸಚಿವಾಲಯದ ಹುದ್ದೆ ಸೃಷ್ಟಿಸಿ, ತಾಂತ್ರಿಕ ವ್ಯಕ್ತಿಯೊಬ್ಬರನ್ನು Additional Secretary ಆಗಿ ನೇಮಿಸಬೇಕು.
  10. ವಿವಿಧ ಕ್ಯಾಡರ್‌ಗಳಲ್ಲಿ ಬಡ್ತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು.
  11. ಸ್ವಾಯತ್ತ ಸಂಸ್ಥೆಗಳಲ್ಲಿ N-ಕ್ಯಾಡರ್ ಹುದ್ದೆಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ನೇಮಕ ಮಾಡಬೇಕು.
  12. ಸಿಬ್ಬಂದಿ ಕೊರತೆಯಿಂದ ಉಂಟಾಗುವ ಕೆಲಸದ ಒತ್ತಡವನ್ನು ನಿವಾರಣೆ ಮಾಡಬೇಕು.
  13. ವೇತನ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಿ, ಬಾಕಿ ಇರುವ ವೇತನವನ್ನು ಪಾವತಿಸಬೇಕು.
  14. ಕೆಲಸದ ಸ್ಥಿತಿಗತಿಗಳಲ್ಲಿ ಸುಧಾರಣೆ ತಂದು, ಕೆಲಸದ ಸಮಯದ ಕಡಿತ ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು.

ಈ ಬೇಡಿಕೆಗಳನ್ನು ಸುಮಾರು 2-3 ವರ್ಷಗಳಿಂದ ವೈದ್ಯರು ಸರ್ಕಾರದ ಮುಂದಿಟ್ಟು ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಇದೀಗ, 14 ಬೇಡಿಕೆಗಳಲ್ಲಿ ಸರ್ಕಾರವು 13 ಬೇಡಿಕೆಗಳನ್ನು ಪರಿಗಣಿಸಿ, ಚರ್ಚಿಸಿ, ಈಡೇರಿಸುವುದಾಗಿ ಒಪ್ಪಿಕೊಂಡಿದೆ. ‘ಕರ್ತವ್ಯದ ಅವಧಿ ಮುಗಿದ ನಂತರ ಖಾಸಗಿ ಪ್ರಾಸ್ಟ್ರೀಸ್‌ ಮಾಡಲು ಪೂರ್ಣ ಅವಕಾಶ ನೀಡಬೇಕು’ ಎಂಬ ಬೇಡಿಕೆಯನ್ನು ಸರ್ಕಾರ ತಿರಸ್ಕರಿಸಿದೆ. ಪ್ರಸ್ತುತ, ಒಪಿಡಿಗೆ ಮಾತ್ರ ಸೀಮಿತವಾಗಿದ್ದು, ಹಾಗೆಯೇ ಮುಂದುವರೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...