ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

Date:

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ವಕ್ತಾರನೊಬ್ಬನು ಎದೆಗೆ ಗುಂಡು ಹೊಡೆಯುತ್ತೇವೆ ಎಂದು ನೀಡಿದ ಕೊಲೆ ಬೆದರಿಕೆ ದೇಶದ ರಾಜಕೀಯ ವಲಯದ ಕ್ರೋಶ ಮೂಡಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಮೌನವು ಆತಂಕಕಾರಿ ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿಯೆತ್ತುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಎದೆಗೆ ಗುಂಡು ಹೊಡೆಯುತ್ತೇವೆ, ಹುಷಾರ್..!! ಎಂದು ಬಿಜೆಪಿ ವಕ್ತಾರರೊಬ್ಬರು ಬಹಿರಂಗವಾಗಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು ನೋಡಿದರೆ ಹೇಳಿಕೆಯ ಬಗ್ಗೆ ಅವರಿಗೂ ಸಮ್ಮತಿ ಇದೆಯೇ ಎಂಬ ಪ್ರಶ್ನೆ ಸಹಜವಾಗಿ ಎಲ್ಲರಲ್ಲೂ ಮೂಡಿದೆ ಎಂದಿದ್ದಾರೆ.

ಬೆದರಿಕೆ ಒಡ್ಡಿ ಸೈದ್ಧಾಂತಿಕ ವಿರೋಧಿಗಳ ಧ್ವನಿ ಅಡಗಿಸುವುದು, ಅದಕ್ಕೂ ಬಗ್ಗದಿದ್ದಾಗ ಅವರನ್ನೇ ಇಲ್ಲವಾಗಿಸುವುದು ಬಿಜೆಪಿ ಮತ್ತು ಸಂಘಪರಿವಾರಕ್ಕೆ ಹೊಸದೇನಲ್ಲ. ಮೊದಲೆಲ್ಲ ತೆರೆಮರೆಯಲ್ಲಿ‌ ನಿಂತು ತಮ್ಮ ವಿರೋಧಿಗಳ‌ ಹತ್ಯೆಗಳಿಗೆ ಬೆಂಬಲ ನೀಡುತ್ತಾ ಬಂದವರು, ಈಗ ನೇರಾ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ. ಎದುರಾಳಿಗಳನ್ನು ಸಂವಾದ, ಚರ್ಚೆಗಳ ಮೂಲಕ ಸೈದ್ಧಾಂತಿಕವಾಗಿ ಎದುರಿಸಲಾಗದವರು ದೈಹಿಕವಾಗಿ ಮುಗಿಸಲು ಹೊರಟಿರುವುದು ಅವರ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತೇಲುತ್ತಿರುವ ಉತ್ತರ ಕರ್ನಾಟಕ; ಹಾರಾಡುತ್ತಿರುವ ಅಧಿಕಾರಸ್ಥರು

ಸಂಘಪರಿವಾರದ ದುರುಳರಿಂದ ಪ್ರಾಣ ಕಳೆದುಕೊಂಡವರು ಒಬ್ಬರಾ? ಇಬ್ಬರಾ? ಮಹಾತ್ಮ ಗಾಂಧಿಯವರಿಂದ ಆರಂಭಗೊಂಡ ಈ ಹತ್ಯಾ ಸರಣಿ ಗೋವಿಂದ ಪನ್ಸಾರೆ, ನರೇಂದ್ರ ದಾಬೋಲ್ಕರ್, ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್ ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. ಇವರೆಲ್ಲರ ಕೊಲೆಗಾರರಿಗೂ ತಮಗೂ ಸಂಬಂಧವಿಲ್ಲವೆಂದು ಹೇಳಿ ಸಂಘಪರಿವಾರದ ನಾಯಕರು ಸುಲಭದಲ್ಲಿ ತಲೆತೊಳೆದುಕೊಂಡರೂ, ಅವರ ಕೈಗಳಿಗಂಟಿದ ರಕ್ತದ ಕಲೆಗಳನ್ನು ತೊಳೆಯಲಾಗಲಿಲ್ಲ ಎಂದಿದ್ದಾರೆ.

ಈ ಹಿಂದೆ ನನಗೆ ಮಾತ್ರವಲ್ಲ ನಾಡಿನ ಅನೇಕ ಸಾಹಿತಿಗಳು, ಚಿಂತಕರು ಮತ್ತು ಹೋರಾಟಗಾರರಿಗೂ ಕೊಲೆ ಬೆದರಿಕೆ ಒಡ್ಡಿ ಪತ್ರಗಳನ್ನು ಬರೆಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಂತಹ ಬೆದರಿಕೆಗಳಿಗೆ ಹೆದರಿ ನಂಬಿದ ಸಿದ್ಧಾಂತಕ್ಕೆ ಬೆನ್ನು ಹಾಕುವ ಜಾಯಮಾನ ನನ್ನದಲ್ಲ. ಒಂದಲ್ಲಾ ಒಂದು ದಿನ ನ್ಯಾಯದ ಎದುರು ಈ ಎಲ್ಲ ದುಷ್ಟರು ಮಂಡಿಯೂರುತ್ತಾರೆಂಬ ಭರವಸೆ ನನಗಿದೆ.

ರಾಹುಲ್ ಗಾಂಧಿಯವರ ಕುಟುಂಬಕ್ಕೆ ಪ್ರಾಣ ಬೆದರಿಕೆ ಇದು ಮೊದಲಲ್ಲ. ಇಂತಹ ಕೊಲೆಗಡುಕರಿಂದಲೇ ರಾಹುಲ್ ಅವರು ತಮ್ಮ ಅಜ್ಜಿ ಮತ್ತು‌ ಅಪ್ಪನನ್ನು ಕಳೆದುಕೊಂಡವರು. ರಾಹುಲ್ ಗಾಂಧಿ ಈಗ ಒಬ್ಬಂಟಿ ಅಲ್ಲ, ಅವರ ಬೆಂಬಲಕ್ಕೆ ಕೋಟ್ಯಂತರ ಸಂಖ್ಯೆಯ ಕಾರ್ಯಕರ್ತರಿದ್ದಾರೆ ಎನ್ನುವುದು ಬಿಜೆಪಿಯ ಕೊಲೆಗಡುಕ ಮನಸ್ಸುಗಳಿಗೆ ತಿಳಿದಿರಲಿ ಎಂದು ಸಿಎಂ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...