ಕೋರ್ಟ್‌ನಲ್ಲಿ ಪೂರ್ವಪ್ರತ್ಯಯವಿಲ್ಲದೆ ಹೆಸರು ಕೂಗಿ ಮುಜುಗರ ಮಾಡುವಂತಿಲ್ಲ: ಸರ್ಕಾರ

Date:

ನ್ಯಾಯಾಲಯಗಳಲ್ಲಿ ಸಾಕ್ಷಿ ಮತ್ತು ಆರೋಪಿಗಳ ಹೆಸರುಗಳನ್ನು ಪೂರ್ವಪ್ರತ್ಯಯವಿಲ್ಲದೆ (ಗೌರವ ಸೂಚಕಗಳು) ಕೂಗುವ ಹಳೆಯ ಮತ್ತು ಮುಜುಗರವನ್ನು ಉಂಟು ಮಾಡುವಂಥ ಪದ್ಧತಿಗೆ ರಾಜ್ಯವು ಕೊನೆಹಾಡಲಿದೆ. ಈ ಸಂಬಂಧ ರಾಜ್ಯ ಸರ್ಕಾರ ನೀತಿ ಮಟ್ಟದಲ್ಲಿ ಬದಲಾವಣೆ ತರುತ್ತಿದೆ.

‘ಕಾನೂನು ಮತ್ತು ನೀತಿ– 2023’ಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಹಲವು ಸುಧಾರಣಾ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್‌.ಕೆ. ಪಾಟೀಲ ಮಾಹಿತಿ ನೀಡಿದ್ದಾರೆ.

‘ಈಗ ಜಾರಿಯಲ್ಲಿರುವ ಪದ್ಧತಿಯಲ್ಲಿ ಸಾಕ್ಷಿ, ಪರಿಣತ ಸಾಕ್ಷಿ ಮತ್ತು ಆರೋಪಿ ಗಳನ್ನು ಕರೆಯುವಾಗ, ಅವರ ಹೆಸರಿನೊಂದಿಗೆ ಪೂರ್ವಪ್ರತ್ಯಯಗಳನ್ನು ಬಳಸದೇ, ಅವರ ಹೆಸರನ್ನು ಬಹಿರಂಗವಾಗಿ ಕೂಗಲಾಗುತ್ತದೆ. ಹೀಗೆ ಕರೆಯುವುದು ಮುಜುಗರವನ್ನುಂಟು ಮಾಡುತ್ತದೆ’ ಎಂದು ವಿವರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಮಳೆ ಹೊಯ್ಯುತಿದೆ, ಡೆಂಘೀ ಹರಡುತಿದೆ- ಆರೋಗ್ಯ ಇಲಾಖೆ ಏನು ಮಾಡುತ್ತಿದೆ?

ನ್ಯಾಯವನ್ನು ಕೋರಿ ನ್ಯಾಯಾಲಯ ಗಳಿಗೆ ಬರುವವರು ಮತ್ತು ನ್ಯಾಯದಾನ ಪ್ರಕ್ರಿಯೆಯಲ್ಲಿ ನ್ಯಾಯಾಲಯಕ್ಕೆ ನೆರವು ನೀಡಲು ಬರುವ ಸಾಕ್ಷಿಗಳನ್ನು ಗೌರವಯು ತವಾಗಿ ನಡೆಸಿಕೊಳ್ಳಬೇಕು. ಹೀಗಾಗಿ ಈ ಪದ್ಧತಿಗೆ ಕೊನೆಹಾಡಲು ಸಂಬಂಧಿತ ಅಧಿನಿಯಮ ಮತ್ತು ನಿಯಮಗಳಿಗೆ ತಿದ್ದುಪಡಿ ತರಲಾಗುತ್ತದೆ. ವಿಚಾರಣಾ ಸಮಯದಲ್ಲಿ ನ್ಯಾಯಾಲಯಗಳ ಕಟಕಟೆಯಲ್ಲಿ ಕುಳಿತುಕೊಳ್ಳುವ ಸೌಲಭ್ಯ ಒದಗಿಸಲಾಗುವುದು’ ಎಂದು ನೀತಿಯಲ್ಲಿ ವಿವರಿಸಲಾಗಿದೆ.

ಬದಲಾವಣೆ ತರಲಾಗಿರುವ ಕೆಲ ಕಾನೂನುಗಳು

  •  ಮಾನವ ಹಕ್ಕುಗಳನ್ನು ಗೌರವಿಸುವ ವ್ಯವಸ್ಥೆಗೆ ಬಲ ತುಂಬುವುದು
  • ನ್ಯಾಯಾಲಯಗಳು, ಅರೆ– ನ್ಯಾಯಾಂಗ ಸಂಸ್ಥೆಗಳು ಮತ್ತು ಪರ್ಯಾಯ ವಿವಾದ ಪರಿಹಾರ ವ್ಯವಸ್ಥೆಗಳ ಮೂಲಕ ವಿವಾದಗಳಿಗೆ ತ್ವರಿತ ಪರಿಹಾರ ಒದಗಿಸುವ ಮೂಲಕ ಜೀವನ ಗುಣಮಟ್ಟ ಉತ್ತಮಪಡಿಸುವುದು
  • ಶಾಂತಿ, ಪ್ರಗತಿಗಾಗಿ ‘ವ್ಯಾಜ್ಯ ಮುಕ್ತ ಗ್ರಾಮ’ ರೂಪಿಸುವುದು
  • ನ್ಯಾಯವನ್ನು ಸಾಮಾನ್ಯ ಜನರ ಮನೆ ಬಾಗಿಲಿಗೆ ಕೊಂಡೊಯ್ಯುವುದು, ಸಾಕ್ಷಿಗಳ ಘನತೆ ಮತ್ತು ಗೌರವವನ್ನು ರಕ್ಷಿಸುವುದು. ವ್ಯಾಜ್ಯಗಳತ್ತ ಸರ್ಕಾರದ ಧೋರಣೆಯಲ್ಲಿ ಬದಲಾವಣೆ ತರುವುದು
  • ಸಾರ್ವಜನಿಕ ಕಾನೂನು ಶಿಕ್ಷಣಕ್ಕಾಗಿ ಕ್ರಮಗಳನ್ನು ಆರಂಭಿಸುವುದು. ಗುಣಾತ್ಮಕ, ಸ್ಪಂದನಾತ್ಮಕ ಮತ್ತು ವೃತ್ತಿಪರ ಮೌಲ್ಯಗಳಿಗೆ ಬದ್ಧರಾಗಿರುವ ಪದವೀಧರರಿಗೆ ತರಬೇತಿಗಾಗಿ ಕಾನೂನು ಶಿಕ್ಷಣವನ್ನು ಬಲಪಡಿಸುವುದು
  • ವ್ಯಾಜ್ಯಗಳನ್ನು ಕಡಿಮೆ ಮಾಡಲು ಅಗತ್ಯ ಕ್ರಮಗಳನ್ನು ರೂಪಿಸುವುದು ಮತ್ತು ಅನಗತ್ಯವಾಗಿ ನಾಗರಿಕರನ್ನು ನ್ಯಾಯಾಲಯಗಳಿಗೆ ಓಡಾಡಿಸುವುದನ್ನು ತಡೆಯುವುದು
  • ಕಾನೂನು ಶಿಕ್ಷಣವನ್ನು ಒದಗಿಸಲು ವಕೀಲರ ಅಕಾಡೆಮಿ ಸ್ಥಾಪನೆ, ಅಗತ್ಯವಿರುವ ಕಡೆಗಳಲ್ಲಿ ಮಾದರಿ ನ್ಯಾಯಾಲಯಗಳನ್ನು ಸ್ಥಾಪಿಸುವುದು. ರೈತರು ಮತ್ತು ದುರ್ಬಲ ವರ್ಗದವರಿಗೆ ಕಾನೂನು ನೆರವಿನ ಮೂಲಕ ಒಳಿತು ಮಾಡುವುದು
  • ಅಂತರ್ಜಾಲ ಬಳಸುವುದರಿಂದ ಹದಿಹರೆಯದವರು ಹವ್ಯಾಸಗಳಿಗೆ ವ್ಯಸನಿಗಳಾಗದಂತೆ ರಕ್ಷಿಸಲು ನೀತಿ ರೂಪಿಸುವುದು. ಕೆಲವು ಚಟುವಟಿಕೆಯನ್ನು ನಿಯಂತ್ರಿಸಲು ಅಥವಾ ನಿಷೇಧಿಸಲು ಕಾನೂನು ಜಾರಿಗೊಳಿಸುವುದು
  • ಗ್ರಾಮ ನ್ಯಾಯಾಲಯಗಳ ಸ್ಥಾಪನೆ, ಮಧ್ಯಸ್ಥಗಾರರಿಗೆ ಅಗತ್ಯ ತರಬೇತಿ. ಅಗತ್ಯವಿರುವ ಕಡೆ 100 ತ್ವರಿತ ನ್ಯಾಯಾಲಯ, ವಿಶೇಷ ನ್ಯಾಯಾಲಯಗಳ ಸ್ಥಾಪನೆ
  • ಎಲ್ಲ ಹೊಸ ತಾಲ್ಲೂಕುಗಳಲ್ಲಿ ನ್ಯಾಯಾಲಯ ಸ್ಥಾಪನೆ ಮತ್ತು ನ್ಯಾಯಾಂಗದ ಮೂಲಸೌಕರ್ಯವನ್ನು ನವೀಕರಿಸುವುದು. ನ್ಯಾಯಾಲಯಗಳ ಆಧುನೀಕರಣ ಮತ್ತು ತಂತ್ರಜ್ಞಾನದ ಬಳಕೆ. ಅರೆ ನ್ಯಾಯಾಂಗ ಸಂಸ್ಥೆ ತರಬೇತಿ ಮತ್ತು ಆಧುನೀಕರಣ ಮಾಡುವುದು
  • ಆಧುನಿಕ ಸಂವಹನ ವಿಧಾನಗಳ ಮೂಲಕ ಸಮನ್ಸ್‌ ಜಾರಿಗೊಳಿಸುವುದು. ಹಳೆಯ ಕಾನೂನುಗಳನ್ನು ರದ್ದುಗೊಳಿಸುವುದು. ಮಾದರಿ ನ್ಯಾಯಾಲಯಗಳ ಸ್ಥಾಪನೆ. ಸಾಮಾನ್ಯ ಜನರು ಸುಲಭವಾಗಿ ಅರ್ಥ ಮಾಡಿಕೊಳ್ಳಲು ಸರಳ ಭಾಷೆಯಲ್ಲಿ ಕಾನೂನುಗಳನ್ನು ರಚಿಸುವುದು
  • ಕಾನೂನು ಶಿಕ್ಷಣ ನಿರ್ದೇಶನಾಲಯ ಸ್ಥಾಪನೆ. ಎಲ್ಲ ಅನುದಾನಿತ ಕಾನೂನು ಕಾಲೇಜುಗಳನ್ನು ಕಾನೂನು ಶಿಕ್ಷಣ ನಿರ್ದೇಶನಾಲಯದ ಅಡಿ ತರುವುದು
  • ಉತ್ತರ ಕರ್ನಾಟಕದಲ್ಲಿ ವಕೀಲರ ಅಕಾಡೆಮಿ ಸ್ಥಾಪಿಸುವುದು
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...