ಯಾವ ಕಾರಣಕ್ಕೂ ಪಕ್ಷ ಬಿಡಲ್ಲ, ಜನಾರ್ದನ ರೆಡ್ಡಿ ಮಾತಿಗೆ ಮಹತ್ವ ಕೊಡಬೇಡಿ: ಬಿ. ಶ್ರೀರಾಮುಲು

Date:

ಯಾವುದೇ ಕಾರಣಕ್ಕೂ ಬಿಜೆಪಿ ಬಿಡಲ್ಲ, ದೆಹಲಿ ಚುನಾವಣೆ ಹಿನ್ನೆಲೆಯಲ್ಲಿ ಫೆ.5ರ ನಂತರ ದೆಹಲಿ ಬರಲು ವರಿಷ್ಠರು ಹೇಳಿದ್ದಾರೆ. ಸಂವಹನ ಕೊರತೆಯಿಂದ ಕೆಲವು ಗೊಂದಲ ಇದೆ. ವರಿಷ್ಠರು ಅದನ್ನೆಲ್ಲ ಸರಿಪಡಿಸುತ್ತಾರೆ ಎಂಬ ಭರವಸೆ ಇದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಕಾನಹೊಸಹಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಪಕ್ಷದ ವರಿಷ್ಠರು ನಾನು ಪಕ್ಷದಲ್ಲೇ ಇರಬೇಕು ಎಂದಿದ್ದಾರೆ. ಹೀಗಾಗಿ ಪಕ್ಷ ಬಿಡುವ ಮಾತಿಲ್ಲ. ಇನ್ನು ಜನಾರ್ದನ ರೆಡ್ಡಿ ಅವರು ಸಹ ಪಕ್ಷದ ಕಾರ್ಯಕರ್ತರೇ ಹೊರತು ವರಿಷ್ಠರಲ್ಲ, ನಾನು ಪಕ್ಷ ಬಿಟ್ಟು ಹೋಗುವುದಾದರೆ ಹೋಗಲಿ ಎಂದು ಅವರು ಹೇಳಿದ್ದಕ್ಕೆ ಮಹತ್ವ ಕೊಡಬೇಕಿಲ್ಲ” ಎಂದಿದ್ದಾರೆ.

ಪಕ್ಷ ಸಂಘಟನೆ ದೃಷ್ಟಿಯಿಂದ ಗೊಂದಲಗಳು, ಅಸಮಾಧಾನಗಳು ನಮ್ಮಲ್ಲಿ ಇವೆ. ಯತ್ನಾಳ್‌, ರಮೇಶ್ ಜಾರಕಿಹೊಳಿ, ಸುಧಾಕರ್ ಅವರೆಲ್ಲ ಕೆಲವು ವ್ಯಕ್ತಿಗಳ ಬಗ್ಗೆ ಮಾತನಾಡುತ್ತಿದ್ದಾರೆಯೇ ಹೊರತು ಪಕ್ಷದ ವಿರುದ್ಧವಲ್ಲ. ರಾಜ್ಯದ ಒಟ್ಟಾರೆ ಬೆಳವಣಿಗೆ ಬಗ್ಗೆ ವರಿಷ್ಠರ ಜೊತೆ ಮಾತನಾಡುವೆ. ಅವರೆಲ್ಲ ಇದ್ದರಷ್ಟೇ ಪಕ್ಷ ಸಂಘಟನೆ ಸಾಧ್ಯ. 2028ರಲ್ಲಿ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ನಾವೆಲ್ಲ ಒಗ್ಗಟ್ಟಿನಿಂದ ಪ್ರಯತ್ನಿಸಲಿದ್ದೇವೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ದೌರ್ಜನ್ಯ ಪ್ರಕರಣ: ಶಿಕ್ಷೆಯ ಪ್ರಮಾಣ ಕುಸಿತ; ದಲಿತ ಕಳಕಳಿಯ ವಕೀಲರ ನೇಮಕವಾಗಲಿ  

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾನೂ ಆಕಾಂಕ್ಷಿಯಾಗಿದ್ದೇನೆ. ಆದರೆ ಪಕ್ಷದಲ್ಲಿ ಚುನಾವಣೆ ವ್ಯವಸ್ಥೆ ಇದೆ. ಅದರಂತೆಯೇ ಎಲ್ಲವೂ ನಡೆಯುತ್ತದೆ. ಏನಿದ್ದರೂ ವರಿಷ್ಠರ ನಿರ್ಧಾರವೇ ಅಂತಿಮ. ರಾಜ್ಯಸಭಾ ಸದಸ್ಯ ಸ್ಥಾನ ನೀಡಬೇಕು ಎಂದೂ ನಾನು ಕೇಳಿಲ್ಲ, ಅವಕಾಶ ಇದ್ದರೆ ಕೊಡಿ ಎಂದು ಕೇಳಿದ್ದೇನೆ, ಕೊಟ್ಟರೆ ಸಂತೋಷ. ಪಕ್ಷ ಬಯಸಿದರೆ ಮುಂದೆ ಮುಖ್ಯಮಂತ್ರಿಯಾಗಲು ಸಹ ನಾನು ಸಿದ್ಧ’ ಎಂದು ಹೇಳಿದ್ದಾರೆ.

ಕೂಡ್ಲಿಗಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ನಾನು ಭಾವನಾತ್ಮಕವಾಗಿ ಮಾತನಾಡಿರುವೆ ಹೊರತು ಅದು ಖಡಾಖಂಡಿತ ನಿರ್ಧಾರವಲ್ಲ. ಅಖಂಡ ಬಳ್ಳಾರಿಯಲ್ಲಿ ಐದು ಮೀಸಲು ಕ್ಷೇತ್ರಗಳಿದ್ದು, ಎಲ್ಲಾ ಕಡೆಯಿಂದಲೂ ನನಗೆ ಆಹ್ವಾನ ಇದೆ. ಅದರೆ ಮುಂದಿನ ಮೂರು ವರ್ಷ ಪಕ್ಷ ಸಂಘಟನೆ, ಬಲಪಡಿಸುವುದೇ ನನ್ನ ಗುರಿ. ಅಂತಿಮವಾಗಿ ಟಿಕೆಟ್ ಯಾರಿಗೆ ಕೊಡಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...