ಡಾ. ಐ.ಜೆ. ಮ್ಯಾಗೇರಿ ಅವರ ‘ಜೈಲ್‌ ಡೈರಿ’ ಕೃತಿಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

Date:

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2024ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಕೆಎಎಸ್‌ ಅಧಿಕಾರಿ, ಸಾಹಿತಿ ಡಾ. ಎ.ಜೆ. ಮ್ಯಾಗೇರಿ ಅವರ ʼಜೈಲ್‌ ಡೈರಿ (ಕೈದಿಗಳ ನೈಜ ಕಥನ)ʼ ಕೃತಿ ಆಯ್ಕೆಯಾಗಿದೆ.

ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ರಾಜೂರ ಗ್ರಾಮದ ಇಮಾಮಸಾಬ್‌ ಜೀವನಸಾಬ್‌ ಮ್ಯಾಗೇರಿ ಧಾರವಾಡದ ಕರ್ನಾಟಕ ವಿವಿಯ ಕನ್ನಡ ಅಧ್ಯಯನ ಪೀಠದಿಂದ ಎಂ.ಎ. ಸ್ನಾತಕೋತ್ತರ ಪದವಿ ಪಡೆದು, ಹಂಪಿ ಕನ್ನಡ ವಿವಿಯಲ್ಲಿ ಎಂ.ಫಿಲ್. ಹಾಗೂ ‘ವಸಾಹತುಶಾಹಿ ಅನುಭವ ಹಾಗೂ ಕನ್ನಡ ಕಾದಂಬರಿಗಳು’ ವಿಷಯದ ಮೇಲೆ ಪಿಎಚ್‌ಡಿ ಮಾಡಿದ್ದಾರೆ.

2005ನೇ ಸಾಲಿನಲ್ಲಿ ಕೆಎಎಸ್ ಅಧಿಕಾರಿಯಾಗಿ ಕರ್ನಾಟಕ ಕಾರಾಗೃಹಗಳ ಇಲಾಖೆಯ ಸೇವೆಗೆ ಸೇರಿರುವ ಇವರು ಕರ್ನಾಟಕದ ಅನೇಕ ಕಾರಾಗೃಹಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಸದ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಬೆಂಗಳೂರು ಪ್ರಧಾನ ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆಯಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2014ರಲ್ಲಿ ಭಾರತ ಸರ್ಕಾರದಿಂದ ಇಂಗ್ಲೆಂಡ್ ಮತ್ತು ಸ್ಯಾಟಲ್ಯಾಂಡ್ ದೇಶಗಳಿಗೆ ಅಧ್ಯಯನ ಪ್ರವಾಸಕ್ಕೆ ಏಕೈಕ ಅಧಿಕಾರಿಯಾಗಿ ಆಯ್ಕೆಗೊಂಡು ಅಲ್ಲಿಯ ಕಾರಾಗೃಹಗಳ ಸುಧಾರಣೆ ಮತ್ತು ಅಪರಾಧಿಗಳ ಮನಃಪರಿವರ್ತನೆಯ ಕಾರ್ಯಕ್ರಮಗಳನ್ನು ತಮ್ಮ ಆಡಳಿತದಲ್ಲಿ ಅಳವಡಿಸಿಕೊಂಡು ಬಂಧಿಗಳ ಸುಧಾರಣೆಗಾಗಿ ಶ್ರಮಿಸುತ್ತಿದ್ದಾರೆ.

ಇವರ ಕರ್ತವ್ಯ ನಿಷ್ಠೆ ಮತ್ತು ಕಾರಾಗೃಹ ಆಡಳಿತದಲ್ಲಿ ಕೈಗೊಂಡ ಸುಧಾರಣಾ ಕ್ರಮಗಳಿಗಾಗಿ 2021ರಲ್ಲಿ ಕರ್ನಾಟಕ ಸರ್ಕಾರದಿಂದ ಮುಖ್ಯಮಂತ್ರಿಗಳ ಚಿನ್ನದ ಪದಕ ದೊರೆತಿದೆ. ‘ಹಿಂಸಾಕಾರಣ’, ಇವರ ಇನ್ನೊಂದು ಪ್ರಕಟಿತ ಕೃತಿ. ಇವರ ಬರಹಗಳು ಬೆಂಗಳೂರು ಮತ್ತು ತುಮಕೂರು ವಿವಿಗಳ ಪದವಿ ತರಗತಿಗೆ ಪಠ್ಯವಾಗಿದೆ.

ದಿವಂಗತ ಯು.ಟಿ. ಫರೀದ್ ಸ್ಮರಣಾರ್ಥ ನೀಡಲಾಗುವ ʼಮುಸ್ಲಿಮ್‌ ಸಾಹಿತ್ಯ ಪ್ರಶಸ್ತಿʼಯು ಹತ್ತು ಸಾವಿರ ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದೆ.

ಪ್ರಶಸ್ತಿಗೆ 22 ಕೃತಿಗಳು ಬಂದಿದ್ದು, ಸಾಹಿತಿ ಅಬ್ದುಲ್‌ ರಹಿಮಾನ್‌ ಕುತ್ತೆತ್ತೂರು, ಲೇಖಕಿ ಮತ್ತು ಪ್ರಾಧ್ಯಾಪಕಿ ಶಮೀಮಾ ಕುತ್ತಾರ್‌ ಹಾಗೂ ಪತ್ರಕರ್ತ, ಸಾಹಿತಿ ಹಂಝ ಮಲಾರ್ ತೀರ್ಪುಗಾರರಾಗಿ ಸಹಕರಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭವು ಡಿ. 27ರಂದು ಗಜೇಂದ್ರಗಡದಲ್ಲಿ ನಡೆಯಲಿದೆ ಎಂದು ಮುಸ್ಲಿಮ್‌ ಲೇಖಕರ ಸಂಘದ ಅಧ್ಯಕ್ಷ ಉಮರ್‌ ಯು. ಹೆಚ್.‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...