ಚಾಲಕ ಬಾಬು ಆತ್ಮಹತ್ಯೆ ಪ್ರಕರಣ | ಎಫ್‌ಐಆರ್‌ ಸುಧಾಕರ್‌ ಹೆಸರು ಕೈ ಬಿಡಲು ಅಶೋಕ್‌ ಆಗ್ರಹ

Date:

ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡಲು ಸರ್ಕಾರ ಪೊಲೀಸರನ್ನು ಬಳಸುತ್ತಿದೆ. ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ, ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್‌ ಅವರ ಪಾತ್ರ ಇಲ್ಲದಿದ್ದರೂ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಸಂಸದ ಡಾ.ಕೆ.ಸುಧಾಕರ್‌ ವಿರುದ್ಧ ಎಫ್‌ಐಆರ್‌ ಮಾಡಿ ಎ1 ಆರೋಪಿ ಮಾಡಿದ್ದಾರೆ. ಆತ್ಮಹತ್ಯೆಗೆ ಅವರೇ ಸಂಪೂರ್ಣ ಒತ್ತಡ ಹೇರಿದರೆ ಮಾತ್ರ ಈ ರೀತಿ ಎಫ್‌ಐಆರ್‌ ಮಾಡಬೇಕಾಗುತ್ತದೆ. ಆದರೆ ಸುಧಾಕರ್‌ ಚಾಲಕ ಬಾಬು ಅವರ ಜೊತೆ ಆಪ್ತ ಸಂಬಂಧವೇನೂ ಇಲ್ಲ. ಅಲ್ಲದೆ, ಈ ಪ್ರಕರಣದಲ್ಲಿ ಜಾತಿ ನಿಂದನೆಯ ಆರೋಪ ಬರುವುದೇ ಇಲ್ಲ. ಸುಧಾಕರ್‌ ಆ ವ್ಯಕ್ತಿಯನ್ನು ಎದುರಿಗೆ ನಿಲ್ಲಿಸಿಕೊಂಡು ನಿಂದಿಸಿಲ್ಲ, ಅಥವಾ ಸಂದೇಶ ಕಳುಹಿಸಿಲ್ಲ. ಕಾಂಗ್ರೆಸ್‌ ಸರ್ಕಾರ ವಿಪಕ್ಷಗಳ ನಾಯಕರನ್ನು ಗುರಿಯಾಗಿಸುವುದು ಸ್ಪಷ್ಟವಾಗಿದೆ” ಎಂದರು.

“ಈ ಹಿಂದೆ ಶಾಸಕ ಬೈರತಿ ಬಸವರಾಜ್‌ ಅವರ ಮೇಲೂ ಇದೇ ರೀತಿ ಕ್ರಮ ಕೈಗೊಳ್ಳಲಾಗಿದೆ. ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಡೆತ್‌ನೋಟ್‌ ಬರೆದಿಟ್ಟು ಸತ್ತಿದ್ದರು. ಆದರೆ ಕಾಂಗ್ರೆಸ್‌ ಶಾಸಕರಾದ ಎ.ಎಸ್‌.ಪೊನ್ನಣ್ಣ ಹಾಗೂ ಮಂಥರ್‌ ಗೌಡ ಅವರ ಹೆಸರು ಎಫ್‌ಐಆರ್‌ನಲ್ಲಿ ಬರಲೇ ಇಲ್ಲ. ಪೊಲೀಸರು ಎಲ್ಲರಿಗೂ ಸಮಾನವಾಗಿ ಕೆಲಸ ಮಾಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಾಲಕ ಬಾಬು ಬೇರೆ ಬೇರೆ ಕಾರಣಗಳಿಂದ ಸಾಲ ಮಾಡಿದ್ದರು. ಅವರಿಗೆ ಕೆಲವರು ವಂಚನೆ ಮಾಡಿದ್ದರು. ಆದರೆ ಇದರಲ್ಲಿ ಡಾ.ಕೆ.ಸುಧಾಕರ್‌ ಪಾತ್ರವೇನು ಎಂಬುದು ಸ್ಪಷ್ಟವಾಗಿಲ್ಲ. ವಿರೋಧ ಪಕ್ಷದವರಿಗೆ ಕಿರುಕುಳ ಕೊಡಲು ಸರ್ಕಾರ ಹೀಗೆ ಮಾಡುತ್ತಿದೆ. ಈ ಪ್ರಕರಣದಲ್ಲಿ ಡೆತ್‌ನೋಟ್‌ ಮುಂಚಿತವಾಗಿಯೇ ಸಿಕ್ಕರೂ ಅದನ್ನು ಪೊಲೀಸರಿಗೆ ತಿಳಿಸಿಲ್ಲ. ಚಾಲಕ ಬಾಬು ಅವರ ಕುಟುಂಬದವರು ಡಾ.ಕೆ.ಸುಧಾಕರ್‌ ಹೆಸರು ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದ್ದರೂ, ಅವರನ್ನು ಎ1 ಆರೋಪಿ ಮಾಡಿದ್ದಾರೆ” ಎಂದು ದೂರಿದರು.

ಬಿಜೆಪಿ ಟಾರ್ಗೆಟ್‌

ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, “ಶಾಸಕರಾದ ಮುನಿರತ್ನ, ಸಿ.ಟಿ.ರವಿ, ರವಿಕುಮಾರ್‌ ಮೊದಲಾದ ಬಿಜೆಪಿ ನಾಯಕರನ್ನು ಕಾಂಗ್ರೆಸ್‌ ಟಾರ್ಗೆಟ್‌ ಮಾಡಿದೆ. ಮಂಜುನಾಥ್‌ ಹಾಗೂ ನಾಗೇಶ್‌ ಹಣ ಪಡೆದು ಮೋಸ ಮಾಡಿದ್ದಾರೆ ಎಂದು ಚಾಲಕ ಬಾಬು ಆತ್ಮಹತ್ಯೆ ಪತ್ರದಲ್ಲಿ ಬರೆದಿದ್ದಾರೆ. ಹಾಗೆಯೇ ಆನ್‌ಲೈನ್‌ ಗೇಮ್‌ನಿಂದಲೂ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಇಲ್ಲಿ ಎಲ್ಲೂ ಸಂಸದ ಡಾ.ಕೆ.ಸುಧಾಕರ್‌ ಅವರ ಬಗ್ಗೆ ಆರೋಪ ಮಾಡಿಲ್ಲ. ನಮ್ಮ ಬಳಿ ಯಾರೇ ಬಂದರೂ ಸಹಾಯ ಮಾಡುತ್ತೇವೆ. ಆದರೆ ಹಾಗೆ ಸಹಾಯ ಕೇಳಿ ಹೋದವರು ಸುಸೈಡ್‌ ಮಾಡಿಕೊಂಡರೆ ಅದಕ್ಕೆ ನಾವೇ ಕಾರಣರಾಗುವುದಿಲ್ಲ” ಎಂದರು.

“ಈ ಹಿಂದೆ ಕೊಡಗು ಶಾಸಕರಾದ ಮಂಥರ್‌ ಗೌಡ ಹಾಗೂ ಎ.ಎಸ್‌.ಪೊನ್ನಣ್ಣ, ಸಚಿವ ಪ್ರಿಯಾಂಕ್‌ ಖರ್ಗೆ ಹೆಸರುಗಳು ಆತ್ಮಹತ್ಯೆ ಪ್ರʻಕರಣದಲ್ಲಿ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಪ್ರಬಲವಾದ ಸಾಕ್ಷ್ಯಾಧಾರಗಳೂ ಇತ್ತು. ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಅನೇಕ ಬಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಭೇಟಿ ಮಾಡಿದ್ದರು. ಸಚಿನ್‌ ಸಚಿವರ ಜೊತೆಗೆ ಮಾತಾಡಿದ್ದರು. ಅಷ್ಟೆಲ್ಲ ಸಾಕ್ಷಿಗಳಿದ್ದರೂ ಸಚಿವರ ವಿರುದ್ಧ ಪೊಲೀಸರು ಕ್ರಮ ವಹಿಸಲಿಲ್ಲ” ಎಂದರು.

“ಚಾಲಕನಿಗೆ ಕೆಲಸ ಕೊಡಿಸಲು ಸಂಸದ ಡಾ.ಕೆ.ಸುಧಾಕರ್‌ಗೆ ಅಧಿಕಾರವಿಲ್ಲ. ಅವರ ವಿರುದ್ಧ ವಿನಾಕಾರಣ ಸಂಚು ಮಾಡಲಾಗಿದೆ. ಆದ್ದರಿಂದ ಈ ಎಫ್‌ಐಆರ್‌ ನಿಂದ ಹೆಸರು ಕೈ ಬಿಡಬೇಕು. ಇಲ್ಲವಾದರೆ ಕೋರ್ಟ್‌ನಲ್ಲಿ ನಮಗೆ ನ್ಯಾಯ ದೊರೆತು ಸರ್ಕಾರಕ್ಕೆ ಮುಖಭಂಗವಾಗುತ್ತದೆ” ಎಂದರು.

“ಜಾತಿ ನಿಂದನೆ ಪ್ರಕರಣದಲ್ಲಿ ವ್ಯಕ್ತಿಗೆ ಸಾರ್ವಜನಿಕ ಸ್ಥಳದಲ್ಲಿ ನಿಂದಿಸಿದ ಉದಾಹರಣೆ ಇರಬೇಕಾಗುತ್ತದೆ. ಅದಕ್ಕೆ ಬೇರೆಯವರ ಸಾಕ್ಷಿ ಇರಬೇಕು. ಈ ಪ್ರಕರಣದಲ್ಲಿ ಇಂತಹ ನಿದರ್ಶನಗಳೇ ಇಲ್ಲವೆಂದ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಿಸುವುದು ತಪ್ಪು. ಸರ್ಕಾರಕ್ಕೆ ಈ ಮಾಹಿತಿ ಇಲ್ಲವೇ? ಕಾಂಗ್ರೆಸ್‌ ಸರ್ಕಾರ ತಂತ್ರಗಾರಿಕೆಯ ಮೂಲಕ ಬಿಜೆಪಿ ನಾಯಕರನ್ನು ಟಾರ್ಗೆಟ್‌ ಮಾಡುತ್ತಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...