ಕೆಎಸ್‌ಆರ್‌ಟಿಸಿ ಬಸ್‌ ನಿಲ್ಲಿಸಿ ನಮಾಜ್ ಮಾಡಿದ್ದಕ್ಕೆ ಚಾಲಕ ಅಮಾನತು

Date:

ಕರ್ತವ್ಯದ ವೇಳೆ ಮಾರ್ಗಮಧ್ಯೆ ಬಸ್‌ ನಿಲ್ಲಿಸಿ ನಮಾಜ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಎ.ಆರ್ ಮುಲ್ಲಾ ಅವರನ್ನು ಅಮಾನತು ಮಾಡಲಾಗಿದೆ. ಚಾಲಕ ಮುಲ್ಲಾ ಅವರು ಹಾನಗಲ್ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರನ್ನು ಅಮಾನತುಗೊಳಿಸಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಆದೇಶಿಸಿದೆ.

ಏಪ್ರಿಲ್ 29ರಂದು ಹುಬ್ಬಳ್ಳಿಯಿಂದ ಹಾವೇರಿ ಮಾರ್ಗದಲ್ಲಿ ಮುಲ್ಲಾ ಅವರು ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ, ಮಾರ್ಗ ಮಧ್ಯೆ ಬಸ್‌ ನಿಲ್ಲಿಸಿ, ಮುಲ್ಲಾ ಅವರು ನಮಾಜ್ ಮಾಡಿದ್ದಾರೆ. ಅವರು ನಮಾಜ್ ಮಾಡುತ್ತಿದ್ದುದ್ದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ವಿಡಿಯೋ ವೈರಲ್ ಆದ ಬಳಿಕ, ಮುಲ್ಲಾ ಅವರನ್ನು ಮೇ 1ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿಸ್ತುಪಾಲನೆ ಅಧಿಕಾರಿ ಅಮಾನತು ಮಾಡಿದ್ದಾರೆ. ಘಟನೆ ಬಗ್ಗೆ ಸಂಪೂರ್ಣ ವಿವರಣೆ ನೀಡುವಂತೆ ನೋಟಿಸ್‌ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಗೋಮೂತ್ರ ರೋಗ ಪರಿಹಾರಕವೇ? ಸಂಶೋಧನೆಗಳು ಏನು ಹೇಳಿವೆ?

ಘಟನೆಯ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಹಿಂದು ದೇವತೆಗಳ ಫೋಟೋಗಳನ್ನು ಇರಿಸಲಾಗುತ್ತದೆ. ಪೂಜೆ ಮಾಡಲಾಗುತ್ತದೆ. ಆಯುಧ ಪೂಜೆ ಸೇರಿದಂತೆ ನಾನಾ ಹಬ್ಬಗಳ ಸಮಯದಲ್ಲಿ ವಿಶೇಷ ಪೂಜೆಗಳನ್ನು ಮಾಡಲಾತ್ತದೆ. ಹೀಗಿರುವಾಗ, ಮುಲ್ಲಾ ಅವರು ಬಸ್‌ನಲ್ಲಿ ನಮಾಜ್ ಮಾಡಿದರೆ ತಪ್ಪೇನು ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆದಾಗ್ಯೂ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. “ಪ್ರತಿ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ್ಯವಿದೆ. ಆದರೆ, ಸಾರ್ವಜನಿಕ ಸೇವೆಯಲ್ಲಿರುವವರು ಕರ್ತವ್ಯದ ವೇಳೆ ಹೊರತುಪಡಿಸಿ ಉಳಿದ ಸಮಯದಲ್ಲಿ ತಮ್ಮ ಧರ್ಮವನ್ನು ಪಾಲಿಸಬಹುದು. ಕರ್ತವ್ಯದ ಸಮಯದಲ್ಲಿ ಮಾರ್ಗ ಮಧ್ಯೆ ಬಸ್‌ ನಿಲ್ಲಿಸಿ ನಮಾಜ್‌ ಆಕ್ಷೇಪಾರ್ಹ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪು ಕಂಡುಬಂದಲ್ಲಿ, ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದೇನೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...