ಎಸ್‌ಡಿಆರ್‌ಎಫ್, ಎಡಿಆರ್‌ಎಫ್‌ನಂತೆ ಕರ್ನಾಟಕಕ್ಕೆ ಬರ ಪರಿಹಾರ: ಸುಪ್ರೀಂಗೆ ಕೇಂದ್ರ ಮಾಹಿತಿ

Date:

ರಾಜ್ಯ ವಿಪತ್ತು ಪರಿಹಾರ ನಿಧಿ(ಎಸ್‌ಡಿಆರ್‌ಎಫ್) ಹಾಗೂ ಕೇಂದ್ರ ವಿಪತ್ತು ಪರಿಹಾರ ನಿಧಿಯ(ಎನ್‌ಡಿಆರ್‌ಎಫ್) ಸಂವಿಧಾನ ಹಾಗೂ ಮಾರ್ಗಸೂಚಿಯ ಅನುಗುಣವಾಗಿ ಕರ್ನಾಟಕಕ್ಕೆ ಬರ ಪರಿಹಾರದ ಹಣಕಾಸು ನೆರವನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

“ರಾಷ್ಟ್ರೀಯ ಕಾರ್ಯಾಕಾರಿ ಉಪ ಸಮಿತಿಯ ಶಿಫಾರಸ್ಸಿನ ಅನ್ವಯ ಎನ್‌ಡಿಆರ್‌ಎಫ್‌ ಹಾಗೂ ಐಎಂಸಿಟಿಯ ವರದಿಯಡಿ ನೆರವಿನ ಅಂಶಗಳು ಹಾಗೂ ಮಾನದಂಡದ ಆಧಾರದ ಮೇಲೆ ಸಾಕಷ್ಟು ಹೊಂದಾಣಿಕೆಯೊಂದಿಗೆ ಭಾರತ ಸರ್ಕಾರವು ಹಣಕಾಸು ನೆರವನ್ನು ಬಿಡುಗಡೆ ಮಾಡಿದೆ” ಎಂದು  ಅಟಾರ್ನಿ ಜನರಲ್‌ ಆರ್‌ ವೆಂಕಟರಮಣಿ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದರು.

ಕರ್ನಾಟಕದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್,ಕೇಂದ್ರದಿಂದ 3454 ಕೋಟಿ ರೂ. ಬಿಡುಗಡೆಯಾಗಿದೆ. ಬಾಕಿ ಪರಿಹಾರಕ್ಕೆ ರಾಜ್ಯವು ಅಫಿಡವಿಟ್‌ ಸಲ್ಲಿಸಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣವು ಹಿರಿಯ ನ್ಯಾಯಮೂರ್ತಿಗಳಾದ ಬಿ ಆರ್‌ ಗವಾಯಿ ಹಾಗೂ ಸಂದೀಪ್‌ ಮೆಹ್ತಾ ಅವರ ಪೀಠದ ಮುಂದೆ ಇಂದು ವಿಚಾರಣೆಗೆ ಬಂದಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜ್ವಲ್ ಪ್ರಕರಣ, ಒಕ್ಕಲಿಗರ ನಾಯಕತ್ವ ಮತ್ತು ಮನುಷ್ಯತ್ವ

ಕರ್ನಾಟಕಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಆರ್ಥಿಕ ನೆರವು ನೀಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬೇಸಿಗೆ ರಜೆಯ ನಂತರ ಜುಲೈನಲ್ಲಿ ನಡೆಸುವುದಾಗಿ ತಿಳಿಸಿತು.

ಕರ್ನಾಟಕ ಸರ್ಕಾರವು ಸೆ.13, 2023ಲ್ಲಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು,  ಬರದಿಂದಾಗಿ 48 ಲಕ್ಷ ಎಕ್ಟೇರ್‌ನಲ್ಲಿನ ಬೆಳೆ ಹಾಳಾಗಿದ್ದು, 35,162 ಕೋಟಿ ರೂ. ನಷ್ಟವುಂಟಾಗಿದೆ ಎಂದು ತಿಳಿಸಿದೆ.

ರಾಜ್ಯವು 18 ಸಾವಿರ ಕೋಟಿ ನೆರವು ನೀಡಬೇಕೆಂದು ಮನವಿ ಸಲ್ಲಿಸಿದ್ದು, ಕೇಂದ್ರ ಸರ್ಕಾರ 3454 ಕೋಟಿ ಮಾತ್ರ ನೆರವು ನೀಡಿದೆ ಎಂದು ಕಳೆದ ಬಾರಿಯ ವಿಚಾರಣೆಯಲ್ಲಿ ಕಪಿಲ್‌ ಸಿಬಲ್‌ ಕೋರ್ಟ್‌ಗೆ ಮನವರಿಕೆ ಮಾಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...