17,901 ಕೋಟಿ ರೂ. ಬಿಡುಗಡೆಗೆ ಮನವಿ, ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ: ಕೃಷ್ಣಬೈರೇಗೌಡ

Date:

  • ಕೇಂದ್ರ ಕೃಷಿ ಇಲಾಖೆ ಹಾಗೂ ಗೃಹ ಇಲಾಖೆಯ ಕಾರ್ಯದರ್ಶಿಗಳನ್ನು ಭೇಟಿಯಾದ ಸಚಿವರು
  • ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 600 ಕೋಟಿ ರೂ.ಗೆ ಮನವಿ: ಪ್ರಿಯಾಂಕ್‌ ಖರ್ಗೆ

ಬರದ ಕಾರಣ 17,901 ಕೋಟಿ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ನವದೆಹಲಿಯಲ್ಲಿ ಕೇಂದ್ರ ಕೃಷಿ ಇಲಾಖೆ ಹಾಗೂ ಗೃಹ ಇಲಾಖೆಯ ಕಾರ್ಯದರ್ಶಿಗಳನ್ನು ಬುಧವಾರ ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿ ಶೀಘ್ರದಲ್ಲಿಯೇ ಅಗತ್ಯವಿರುವ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದವರು.

“ಕೇಂದ್ರದ ಅಧಿಕಾರಿಗಳು ರಾಜ್ಯಕ್ಕೆ ಬಂದು ಅಧ್ಯಯನ ಕೂಡ ಮಾಡುತ್ತಿದ್ದಾರೆ. ಇನ್ನೆರಡು ದಿನದಲ್ಲಿ ಕೇಂದ್ರದ ಅಧಿಕಾರಿಗಳ ತಂಡ ವರದಿ ಸಲ್ಲಿಸಬಹುದು. ಆದಷ್ಟು ಬೇಗ ಹಣ ಬಿಡುಗಡೆ ಆಗಬೇಕು ಅಂತಾ ಮನವಿ ಮಾಡಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜೂನ್​ನಲ್ಲಿ ಶೇ.56ರಷ್ಟು ಮಳೆ ಕೊರತೆ, ಜುಲೈನಲ್ಲಿ ಶೇ 29ರಷ್ಟು ಮಳೆ ಕೊರತೆ, ಆಗಸ್ಟ್​​ನಲ್ಲಿ ಶೇ 73 ರಷ್ಟು ಮಳೆ ಕೊರತೆ, ಸೆಪ್ಟೆಂಬರ್​ನಲ್ಲಿ ಶೇ 26ರಷ್ಟು ಮಳೆ ಕೊರತೆ ಹಾಗೂ ಅಕ್ಟೋಬರ್ ತಿಂಗಳಲ್ಲಿ ಶೇ 63 ರಷ್ಟು ಮಳೆ ಕೊರತೆ ಆಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಅಗ್ನಿವೀರ’ ಯೋಜನೆ ಟೊಳ್ಳೆಂದು ಸಾರಿದೆ ಇಸ್ರೇಲ್ ಯುದ್ಧ!

216 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ. ಈ ಹಿನ್ನೆಲೆಯಲ್ಲಿ ಬರಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಪಶು ಸಂಗೋಪನೆ ಚಟುವಟಿಕೆಗಳಿಗೆ 355 ಕೋಟಿ ರೂ. ನೀಡಲು ಮನವಿ ಮಾಡಿದ್ದೇವೆ. ಡಿಸೆಂಬರ್​ನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಒಟ್ಟು 17,901 ಕೋಟಿ ರೂ. ಹಣ ಬಿಡುಗಡೆ ಮಾಡಲು ಮನವಿ ಮಾಡಿದ್ದೇವೆ” ಎಂದರು.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಈ ವೇಳೆ ಉಪಸ್ಥಿತರಿದ್ದು, ಸುದ್ದಿಗಾರರ ಜೊತೆ ಮಾಹಿತಿ ಹಂಚಿಕೊಂಡ ಅವರು, “ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ರಾಜ್ಯಕ್ಕೆ ಹಣ ಬರಬೇಕಿದೆ. ಈ ಯೋಜನೆಯಲ್ಲಿ ಕೆಲಸ ಮಾಡಿದವರಿಗೆ ಹಣ ಕೊಡೋಕೆ ಆಗ್ತಾ ಇಲ್ಲಾ. ಅಂದಾಜು 600 ಕೋಟಿ ರೂ ಹಣ ಬರಬೇಕಿದೆ. ಇದು ಮೊನ್ನೆ ದಸರಾ ಹಬ್ಬಕ್ಕೂ ಮುಂಚೆ ಅಂದಾಜು ಮಾಡಲಾಗಿದ್ದು, ಈ ಹಣ ಬಿಡುಗಡೆ ಮಾಡಬೇಕು ಅಂತ ಮನವಿ ಮಾಡಲಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...