ಮುಸ್ಲಿಂ ಮೀಸಲಾತಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಅನಿಮೇಟಡ್ ವಿಡಿಯೋವನ್ನು ಅಳಿಸಿ ಹಾಕುವಂತೆ ಸಾಮಾಜಿಕ ಮಾಧ್ಯಮ ‘ಎಕ್ಸ್’ಗೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.
ಮೇ 4 ರಂದು ಕರ್ನಾಟಕ ಬಿಜೆಪಿ ಘಟಕ ಮುಸ್ಲಿಂ ವಿರೋಧಿ ದೃಶ್ಯವಿರುವ ಅನಿಮೇಟಡ್ ವಿಡಿಯೋವನ್ನು ಪೋಸ್ಟ್ ಮಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿತ್ತು. ಕಾಂಗ್ರೆಸ್ ಪಕ್ಷ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಮರಿಗೆ ನೀಡುತ್ತಿದೆ ಎಂದು ಈ ವಿಡಿಯೋದಲ್ಲಿ ತೋರಿಸಲಾಗಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ
ಈ ವಿಡಿಯೋ ನೇರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಮಾಡಿ, ಕಾಂಗ್ರೆಸ್ ಪಕ್ಷದ ಗುರಿಯು ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಮರಿಗೆ ಹಂಚುವುದಾಗಿದೆ ಎನ್ನುವುದಾಗಿತ್ತು.
ಈ ವಿಡಿಯೋಗೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಹಾಗೂ ಪ್ರಗತಿಪರ ಸಂಘಟನೆಗಳ ನಾಯಕರು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ, ಐಟಿ ಸೆಲ್‌ನ ಅಮಿತ್ ಮಾಳವೀಯ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ರಾಘವೇಂದ್ರ ವಿರುದ್ಧ ಚುನಾವಣಾ ಆಯೋಗ ಹಾಗೂ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಚುನಾವಣಾ ಆಯೋಗದ ದೂರಿನ ಅನ್ವಯ ಪೊಲೀಸರು ಈ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.





