ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ ಜತೆಗೆ ಚುನಾವಣಾ ಆಯೋಗವು ಕರ್ನಾಟಕದ ಎರಡು ಕ್ಷೇತ್ರಗಳು ಸೇರಿದಂತೆ ಒಟ್ಟು ಎಂಟು ಕ್ಷೇತ್ರಗಳ ಉಪಚುನಾವಣೆಯನ್ನು ಘೋಷಿಸಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಏಪ್ರಿಲ್ 9ರಂದು ಉಪಚುನಾವಣೆ ನಡೆಯಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ.
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಬಾಗಲಕೋಟೆ ಶಾಸಕ ಎಚ್. ವೈ. ಮೇಟಿ ನಿಧನರಾಗಿದ್ದು ಈ ಎರಡು ಕ್ಷೇತ್ರಗಳು ತೆರವಾಗಿತ್ತು. ಆದ್ದರಿಂದ ಇಲ್ಲಿ ಉಪಚುನಾವಣೆ ನಡೆಯಲಿದೆ.
ಇದನ್ನು ಓದಿದ್ದೀರಾ? BREAKING NEWS | ನಾಲ್ಕು ರಾಜ್ಯ, ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ
ಗೋವಾ, ಗುಜರಾತ್, ಮಹಾರಾಷ್ಟ್ರ, ನಾಗಾಲ್ಯಾಂಡ್ ಮತ್ತು ತ್ರಿಪುರಾದಲ್ಲಿಯೂ ಉಪಚುನಾವಣೆ ನಡೆಯಲಿದೆ. ಏಪ್ರಿಲ್ 9ರಂದು ಕರ್ನಾಟಕ, ಗೋವಾ, ನಾಗಾಲ್ಯಾಂಡ್ ಮತ್ತು ತ್ರಿಪುರಾದಲ್ಲಿ ಮತದಾನ ನಡೆದರೆ, ಏಪ್ರಿಲ್ 23ರಂದು ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಮತದಾನ ನಡೆಯಲಿದೆ.
ಮಹಾರಾಷ್ಟ್ರದ ಬಾರಾಮತಿ ಕ್ಷೇತ್ರವು ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನದಿಂದ ತೆರವಾಗಿದ್ದರೆ, ಗೋವಾದ ಪೋಂಡಾ ಕ್ಷೇತ್ರದಲ್ಲಿ ಹಿರಿಯ ಶಾಸಕರು ಮತ್ತು ಗೋವಾ ರಾಜ್ಯದ ಮಾಜಿ ಮುಖ್ಯಮಂತ್ರಿ ರವಿ ನಾಯಕ್ ನಿಧನದಿಂದ ತೆರವಾಗಿದೆ. ಗುಜರಾತ್‌ನ ವಿಸ್ನಗರದ ಶಾಸಕರಾಗಿದ್ದ ಋಷಿಕೇಶ್ ಪಟೇಲ್ ನಿಧನರಾಗಿದ್ದು, ನಾಗಾಲ್ಯಾಂಡ್‌ನ ಅಕ್ಯುಲ್ಯುಟೊ ಕ್ಷೇತ್ರದ ಶಾಸಕರಾಗಿದ್ದ ಕಾಜೆಟೊ ಕಿನ್ನಿಮಿ ನಿಧನರಾಗಿದ್ದಾರೆ. ತ್ರಿಪುರಾದ ಕೃಷ್ಣಾಪುರ ಕ್ಷೇತ್ರದ ಶಾಸಕರಾಗಿದ್ದ ಬಿಕಾಶ್ ದೆಬ್ಬರ್ಮಾ ನಿಧನರಾಗಿದ್ದಾರೆ. ಆದ್ದರಿಂದ ಈ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ.





