ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆಯಿಂದ 1.68 ಕೋಟಿ ನಗದು, 6 ಕೆಜಿ ಚಿನ್ನ ವಶಕ್ಕೆ ಪಡೆದ ಇ.ಡಿ

Date:

ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಕೋಟ್ಯಂತರ ರೂ. ಹಣ ಹಾಗೂ ಚಿನ್ನದ ಬಿಸ್ಕೆಟ್‌ಗಳನ್ನು ವಶಕ್ಕೆ ಪಡೆದಿದೆ.

1.68 ಕೋಟಿ ನಗದು, 6.75 ಕೆಜಿ ಚಿನ್ನದ ಬಿಸ್ಕೆಟ್‌ಗಳು ಮತ್ತು 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

ಅಕ್ರಮ ಅದಿರು ಪ್ರಕರಣದಲ್ಲಿ ಜಾಮೀನಿನ ಮೇಲೆ ಶಾಸಕ ಸತೀಶ್‌ ಸೈಲ್‌ ಹೊರಗಿದ್ದಾರೆ. ಆ.13 ಮತ್ತು 14 ರಂದು ಇ.ಡಿ ಅಧಿಕಾರಿಗಳು, ಶಾಸಕರ ಮನೆ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ಈ ವೇಳೆ ಅಪಾರ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅವಾಂತರಕಾರಿ ಆಸಿಮ್ ಮುನೀರ್ ಮತ್ತು ಮೌನಿ ಮೋದಿ

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆಯನ್ನು ಸತೀಶ್‌ ಸೈಲ್‌ ಎದುರಿಸುತ್ತಿದ್ದಾರೆ. ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿರುವ ಹೊತ್ತಲ್ಲೇ ಇ.ಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಕಾರವಾರ (ಉತ್ತರ ಕನ್ನಡ), ಗೋವಾ, ಮುಂಬೈ ಮತ್ತು ನವದೆಹಲಿಯ ಅನೇಕ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗಿದೆ.

ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಮೂಲಕ ಅಕ್ರಮ ಅದಿರು ಸಾಗಾಟ ಮಾಡಿದ್ದ ಪ್ರಕರಣದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರ ತಂಡ ಸೈಲ್ ವಿರುದ್ಧ ದೂರು ದಾಖಲಿಸಿತ್ತು. ಸತೀಶ್ ಸೈಲ್​ಗೆ ಜನಪ್ರತಿನಿಧಿಗಳ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಅವರು ಹೈಕೋರ್ಟ್​​ನಲ್ಲಿ ಜಾಮೀನು ಪಡೆದುಕೊಂಡಿದ್ದರು.

ಬೇಲೆಕೇರಿ ಬಂದರಿನಿಂದ ಅದಿರನ್ನು ಅಕ್ರಮವಾಗಿ ವಿದೇಶಕ್ಕೆ ಸಾಗಾಟ ಮಾಡಿದ ಪ್ರಕರಣದಲ್ಲಿ ಸತೀಶ್ ಸೈಲ್ ಅವರನ್ನು ದೋಷಿ ಎಂದು ಕಳೆದ ವರ್ಷ ಅಕ್ಟೋಬರ್​​ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ನಂತರ ಬೇಲೆಕೇರಿ ಅದಿರು ಸಾಗಾಟ ಪ್ರಕರಣ ಸಂಬಂಧಿತ 6 ಪ್ರಕರಣಗಳಲ್ಲಿ ಅವರಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 44 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...