ED ನಡೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುತ್ತಿದೆ: ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್‌ ಆರೋಪ

Date:

ಇ.ಡಿಯವರು ವಿಚಾರಣೆಗೆ ಹಾಜರಾಗಿ ಎಂದು ತಿಳಿಸಿದ್ದಾರೆ. ನಾನು ಇದಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆ. ಯಾವ ಮಾನದಂಡವಿಟ್ಟುಕೊಂಡು ನನ್ನನ್ನು ವಿಚಾರಣೆಗೆ ಕರೆದಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳುವೆ ಎಂದು ಬಮೂಲ್ ಅಧ್ಯಕ್ಷ, ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಸೋಮವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, “ಇಡಿ ಅವರ ಪ್ರಶ್ನೆಗಳು ಯಾವ ಹಾದಿಯಲ್ಲಿವೆ, ವಿಚಾರಣೆಗೂ ಪ್ರಕರಣಕ್ಕೂ ಸಂಬಂಧ ಇದೆಯೋ ಇಲ್ಲವೋ ಎಂಬುದು ನೋಡಿದ ಮೇಲೆ ರಾಜಕೀಯ ಷಡ್ಯಂತ್ರವೋ ಇಲ್ಲವೋ ಎಂದು ಹೇಳುತ್ತೇನೆ” ಎಂದರು.

“ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ಗಳು ಇಡಿ ಎಲ್ಲೆ ಮೀರಿ ನಡೆಯುತ್ತಿದೆ ಎಂದು ಅನೇಕ‌ ಬಾರಿ ಹೇಳಿವೆ. ಆದಾಗ್ಯೂ ಎಚ್ಚೆತ್ತುಕೊಂಡಿಲ್ಲ ಎಂದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತಿದೆ ಎಂದರ್ಥ. ಅವರ ವ್ಯಾಪ್ತಿಯನ್ನು ಮೀರಿ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳುವುದು ನೋಡಿದರೆ ಸರ್ಕಾರವೊಂದರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎನಿಸುತ್ತಿದೆ. ಏನು ಮಾಡುತ್ತಾರೆ ಎಂದು ನೋಡೋಣ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐಶ್ವರ್ಯ ಗೌಡ ನಿಮ್ಮ ಹೆಸರು ಹೇಳಿಕೊಂಡು ವಂಚನೆ ಮಾಡಿದ್ದಾರೆಯೇ, ನಿಮ್ಮ ಅವರ ನಡುವೆ ಹಣಕಾಸಿನ ವ್ಯವಹಾರ ನಡೆದಿದೆಯೇ ಎಂದಾಗ, “ಆ ಮಹಿಳೆ ಹಾಗೂ ನಮ್ಮ ನಡುವೆ ಯಾವುದೇ ಹಣಕಾಸು ಹಾಗೂ ಇತರೇ ವಹಿವಾಟು ನಡೆದಿಲ್ಲ. ಅವರು ಮೂರ್ನಾಲ್ಕು ಬಾರಿ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಕೆಲವೊಂದು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ನನ್ನ ಕ್ಷೇತ್ರದಲ್ಲಿ ವಾಸ ಮಾಡುತ್ತಿದ್ದರು ಎನ್ನುವ ಕಾರಣಕ್ಕೆ ಅವರ ಆಯೋಜನೆಯ ಕಾರ್ಯಕ್ರಮಗಳಿಗೆ ಹೋಗಿದ್ದೇನೆ. ಇದರ ಹೊರತಾಗಿ ಬೇರೇನೂ ಇಲ್ಲ. ಇದರ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡುತ್ತೇನೆ” ಎಂದು ತಿಳಿಸಿದರು.

ನಟರೊಬ್ಬರು ನಿಮ್ಮ ದನಿ ಅನುಕರಣೆ ಮಾಡಿ ವಂಚನೆ ಎಸಗಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ. ಈ ತನಿಖೆಯ ಬೆಳವಣಿಗೆ ಏನಾಗಿದೆ ಎಂಬುದರ ಬಗ್ಗೆ ನನಗೆ ಮಾಹಿತಿಯಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...