ವೈಚಾರಿಕತೆ, ವೈಜ್ಞಾನಿಕತೆ ಬೆಳೆಸುವುದೇ ಶಿಕ್ಷಣದ ಗುರಿ: ಸಿಎಂ ಸಿದ್ದರಾಮಯ್ಯ

Date:

ಶಿಕ್ಷಣ ನಮ್ಮ‌ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೆಕ್ಕ ಬಿಚ್ಚಿಟ್ಟರು.

ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿ ಮಾತನಾಡಿದರು.

ನಾನು ರಾಜಪ್ಪ ಮೇಸ್ಟ್ರಿಂದ ಶಾಲಾ ಶಿಕ್ಷಣವನ್ನು ಹಾಗೂ ಪ್ರೊ.ನಂಜುಂಡಸ್ವಾಮಿ ಅವರಿಂದ ರಾಜಕೀಯ ಪಾಠ ಕಲಿತೆ ಎನ್ನುವ ಮೂಲಕ ತಮ್ಮ ಶಿಕ್ಷಕರನ್ನು ಸ್ಮರಿಸಿದ ಸಿ.ಎಂ.ಸಿದ್ದರಾಮಯ್ಯ ಇಬ್ಬರಿಗೂ ಧನ್ಯತೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಮನಸ್ಥಿತಿಯನ್ನು ರೂಪಿಸುವುದು ವೈಚಾರಿಕ ಶಿಕ್ಷಣ. ಕೇವಲ ಪಾತ್ರೆ ತುಂಬಿಸುವುದು ಶಿಕ್ಷಣ ಅಲ್ಲ. ಮಕ್ಕಳಲ್ಲಿ ಅರಿವಿನ ಕಿಡಿ ಹೊತ್ತಿಸುವುದೇ ಶಿಕ್ಷಣದ ಉದ್ದೇಶ ಮತ್ತು ಮಹತ್ವವಾಗಿದೆ. ಇಂತಹ ಶಿಕ್ಷಣ ನಮ್ಮ ಸರ್ಕಾರದ ಗುರಿ ಎಂದರು.

ಮೊದಲೆಲ್ಲಾ ಶೂದ್ರರಿಗೆ ವಿದ್ಯೆ ಕಲಿಯುವ ಅವಕಾಶ ಇರಲಿಲ್ಲ. ಸಂವಿಧಾನ ನಮಗೆ ಎಲ್ಲರಿಗೂ ಕಡ್ಡಾಯ ಶಿಕ್ಷಣದ ಹಕ್ಕು ನೀಡಿದೆ. ಆದ್ದರಿಂದ, ನಮ್ಮ ಸರ್ಕಾರ ಬಂದ ಮೇಲೆ ಸಂವಿಧಾನದ ಪೀಠಿಕೆಯನ್ನು ಅರ್ಥೈಸುವ ಕೆಲಸ ಮಾಡುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಮೌಲ್ಯಗಳಾಗಿದ್ದು ಇವನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಮನುಷ್ಯತ್ವ ಹೊಂದಿರುವ ಅತ್ಯುನ್ನತ ನಾಗರಿಕರನ್ನು ಸೃಷ್ಟಿಸಬಹುದು. ಇದನ್ನು ಶಿಕ್ಷಕರು ಅರ್ಥ ಮಾಡಿಕೊಂಡು ನಾಗರಿಕ ಸಮಾಜ ರೂಪಿಸಬೇಕು ಎಂದರು.

ಜಾತಿ ವ್ಯವಸ್ಥೆ ಇರುವ ನಮ್ಮ ಸಮಾಜದಲ್ಲಿ ಬದಲಾವಣೆ ಆಗಿ ಮಾನವೀಯ ವ್ಯವಸ್ಥೆ ರೂಪುಗೊಳ್ಳಬೇಕು. ಶಿಕ್ಷಣ ಕಲಿತೂ ಜಾತಿ ಆಚರಿಸುವುದು, ಕಂದಾಚಾರ-ಮೌಡ್ಯ ಆಚರಿಸುವುದು ಶಿಕ್ಷಣಕ್ಕೆ ಬಗೆಯುವ ದ್ರೋಹ. ಆದ್ದರಿಂದ ವೈಚಾರಿಕತೆ, ವೈಜ್ಞಾನಿಕತೆ, ಪರಧರ್ಮ ಸಹಿಷ್ಣುತೆ ಮೈಗೂಡಿಸಿಕೊಳ್ಳುವ ಶಿಕ್ಷಣ ಕೊಡುವ ನೈತಿಕ ಮತ್ತು ವೃತ್ತಿಪರ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದರು.

ವೈದ್ಯರಾದವರು, ಪ್ರೊಫೆಸರ್‌ಗಳು, ಉಪನ್ಯಾಸಕರೂ ಹಣೆ ಬರಹ ನಂಬಿಕೊಂಡಿದ್ದಾರೆ. ಇವರು ಮತ್ತು ಎಂಜಿನಿಯರಿಂಗ್ ಓದಿದವರೂ ಜಾತಿ ಮಾಡುವುದನ್ನು, ಮೌಡ್ಯ ಆಚರಿಸುವುದನ್ನು ನಾನು ನೋಡಿದ್ದೇನೆ. ಹಾಗಾದರೆ ಇವರಿಗೆ ಸಿಕ್ಕ ಶಿಕ್ಷಣ ಎಂತಹದ್ದು ಎಂದು ಪ್ರಶ್ನಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯವರ ತಾಯಿ ಮಾತ್ರ ಹೆಣ್ಣೇ! ಸೋನಿಯಾರನ್ನು ಅವಮಾನಿಸುವುದು ಸರಿಯೇ?

ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನ ಸಮಾಜ ನಿರ್ಮಾಣ ಆಗಿ ಅವಕಾಶಗಳು ಎಲ್ಲರಿಗೂ ಸಿಗುತ್ತಿಲ್ಲ. ಶೂದ್ರರ ಜೊತೆಗೆ ಮಹಿಳೆಯರನ್ನೂ ಶಿಕ್ಷಣದಿಂದ ಹೊರಗಿಡಲಾಗಿತ್ತು. ಆದರೆ ಈಗ ಶಿಕ್ಷಣದ ಹಕ್ಕಿನ‌ ಕಾರಣಕ್ಕೆ ಅವಕಾಶ ಪಡೆದು ಹೆಚ್ಚೆಚ್ಚು ರ್ಯಾಂಕ್ ಪಡೆಯುತ್ತಿರುವವರಲ್ಲಿ ಹೆಣ್ಣು ಮಕ್ಕಳೇ ಹೆಚ್ಚಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿ ದೆಸೆಯಲ್ಲಿ ನನಗೆ ಮನೆಯಲ್ಲಿ ಪ್ರತೀದಿನ ಅನ್ನ ತಿನ್ನುವ ಅವಕಾಶ, ಶಕ್ತಿ ಇರಲಿಲ್ಲ. ಯಾರಿಗೂ ಈ ಸ್ಥಿತಿ ಬರಬಾರದು ಎನ್ನುವ ಕಾರಣದಿಂದ ನಾನು ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ ಎಂದು ವಿವರಿಸಿದರು.

ಡಾ.ಸರ್ವಪಲ್ಲಿ ರಾಧಾಕೃಷ್ಣ ಅವರು ಅತ್ಯಂತ ನೈತಿಕ ಮೌಲ್ಯಗಳುಳ್ಳ ಶಿಕ್ಷಕರೂ, ರಾಷ್ಟ್ರಪತಿಗಳೂ ಆಗಿದ್ದರು. ಇವರ ಆದರ್ಶಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ಅತ್ಯುನ್ನತ ಗೌರವ ಎಂದರು.

ಮಧು ಬಂಗಾರಪ್ಪ ಮತ್ತು ಎಂ.ಸಿ.ಸುಧಾಕರ್ ಇಬ್ಬರೂ ನಮ್ಮ ಸರ್ಕಾರದ ಅತ್ಯಂತ ಕ್ರಿಯಾಶೀಲ ಯುವ ಸಚಿವರು. ಇವರು ತಮ್ಮ ಜವಬ್ದಾರಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾರೆ ಎನ್ನುವ ಭರವಸೆ ನನಗಿದೆ ಎಂದರು.

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಡವಳಿಕೆಗಳು ಮಕ್ಕಳ ಮೇಲೆ ಅಪಾರ ಪ್ರಭಾವ ಬೀರುತ್ತವೆ. ಆದ್ದರಿಂದ ಶಿಕ್ಷಕರು ಅತ್ಯುನ್ನತ ಮಾನವೀಯ ಮತ್ತು ನಾಗರಿಕ ಮೌಲ್ಯಗಳನ್ನು ಪಾಲಿಸಬೇಕು ಎಂದರು.

ಮೊಬೈಲ್ ಗೀಳು ಈಗ ಮಕ್ಕಳಲ್ಲಿ ಹೆಚ್ಚಾಗಿದೆ. ಈ ಗೀಳಿನಿಂದ ಮಕ್ಕಳನ್ನು ಹೊರಗೆ ತರುವ ಕೆಲಸವನ್ನು ಶಿಕ್ಷಕರು ಪರಿಣಾಮಕಾರಿಯಾಗಿ ಆಗಬೇಕಿದೆ. ಆದ್ದರಿಂದ, “ಮೊಬೈಲ್ ಬಿಡಿ-ಪುಸ್ತಕ ಹಿಡಿ” ಎನ್ನುವ ಮೌಲ್ಯವನ್ನು ಪ್ರತೀ ಶಾಲೆ ಮತ್ತು ಮನೆಗಳಲ್ಲೂ ಜಾರಿ ಆಗಲಿ ಎಂದು ಶಿಕ್ಷಕರಿಗೆ-ಮಕ್ಕಳಿಗೆ ಸಿಎಂ ಕರೆ ನೀಡಿದರು.

ಸಾವಿತ್ರಿ ಫುಲೆ-ಫಾತಿಮಾ ಶೇಕ್ ಸ್ಮರಿಸಿದ ಸಿಎಂ

ಸಾವಿತ್ರಿ ಫುಲೆ ಮತ್ತು ಫಾತಿಮಾ ಶೇಕ್ ಇಬ್ಬರೂ ದಮನಿತ ಮಹಿಳೆಯರಿಗೆ ಶಿಕ್ಷಣ ಕೊಟ್ಟ ಮೊದಲ ಶಿಕ್ಷಕಿಯರು. ಇವರಿಗೆ ಸೆಗಣಿಯನ್ನೆಲ್ಲಾ ಎಸೆದು ಅವಮಾನಿಸಲಾಗಿತ್ತು. ಈ ಎಲ್ಲ ಅವಮಾನ ಸಹಿಸಿಕೊಂಡೂ ಶಿಕ್ಷಣ ನೀಡಿದರು ಎಂದು ಸಿಎಂ ಸ್ಮರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...