ಕರ್ನಾಟಕದಲ್ಲಿ ಚುನಾವಣಾ ಅಕ್ರಮ | ನಮ್ಮ ಅನುಮಾನ ನಿಜವಾಗಿದೆ: ಸಿಎಂ ಸಿದ್ದರಾಮಯ್ಯ

Date:

ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ ಅಕ್ರಮವೇ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಒಂದೊಂದಾಗಿ ಬಯಲಿಗೆಳೆಯುತ್ತಿದ್ದು, ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆಯೂ ವಿವರಗಳನ್ನು ನೀಡಿದ್ದಾರೆ ಎಂದಿದ್ದಾರೆ.

“ಕರ್ನಾಟಕದಲ್ಲಿ ಚುನಾವಣಾ ಆಯೋಗ ಅಕ್ರಮಗಳನ್ನು ನಡೆಸಿರುವುದಕ್ಕೆ ನೂರಕ್ಕೆ ನೂರರಷ್ಟು ಸಾಕ್ಷ್ಯಗಳಿವೆ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ನಾನು ಸಂಪೂರ್ಣವಾಗಿ ಅನುಮೋದಿಸುತ್ತೇನೆ. ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ಇದ್ದಕ್ಕಿದ್ದಂತೆಯೇ ಹೊಸ ಮತದಾರರ ಸೇರ್ಪಡೆಯಾಗಿರುವುದು ಮತ್ತು ಹಳೆಯ ಮತದಾರರ ಹೆಸರುಗಳು ರದ್ದಾಗಿರುವುದರ ಬಗ್ಗೆ ನಮ್ಮ ಅನೇಕ ಕಾರ್ಯಕರ್ತರು ದೂರುಗಳನ್ನು ನೀಡಿದ್ದರು. ನರೇಂದ್ರ ಮೋದಿ ಅವರ ಚುನಾವಣಾ ಗೆಲುವುಗಳಿಗೆ ಅವರ ಜನಪ್ರಿಯತೆಯಾಗಲಿ, ಬಿಜೆಪಿ ಸರ್ಕಾರದ ಸಾಧನೆಗಳಾಗಲಿ ಕಾರಣ ಅಲ್ಲ. ಅದು ಚುನಾವಣಾ ಆಯೋಗದ ಮೂಲಕ ನಡೆಸಿದ ‘’ಮತಗಳ್ಳತನ’’ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆ ಏನು ಕ್ರಮಕೈಗೊಳ್ಳಬೇಕೆಂಬ ಬಗ್ಗೆ ರಾಹುಲ್ ಗಾಂಧಿಯವರು ಮತ್ತು ಎಐಸಿಸಿ ಅಧ್ಯ್ಕಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಮಾಲೋಚಿಸಿ, ನಾವು ತೀರ್ಮಾನ ಕೈಗೊಳ್ಳುತ್ತೇವೆ” ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...