ಚುನಾವಣೆ ಅಕ್ರಮ ಆರೋಪ | ಸಚಿವ ಪ್ರಿಯಾಂಕ್ ಖರ್ಗೆಗೆ ಸುಪ್ರೀಂ ಕೋರ್ಟ್‌ ನೋಟಿಸ್

Date:

2023ರ ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪದ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಚುನಾವಣಾ ಆಯೋಗಕ್ಕೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಪ್ರಿಯಾಂಕ್‌ ಖರ್ಗೆ ಅವರು ಪರಿಶಿಷ್ಟ ಜಾತಿ ಪ್ರಮಾಣ ಪತ್ರದ ಬದಲು ಗ್ರಾಮ ಪಂಚಾಯಿತಿ ಚುನಾವಣೆಗೆ ಸಲ್ಲಿಸಲಾಗುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂದು ಅಶ್ವತ್ಥರಾಮ್ ರಾಥೋಡ್ ಎಂಬುವರು ಆರೋಪಿಸಿದ್ದಾರೆ.
ಹೈಕೋರ್ಟ್‌ನಲ್ಲಿ ವಜಾ ಆದ ಅರ್ಜಿಯನ್ನು ಇವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಅಶ್ವತ್ಥರಾಮ್ ರಾಥೋಡ್ ಸಲ್ಲಿಸಿದ ವಿಶೇಷ ಮೇಲ್ಮನವಿ ಅರ್ಜಿಯನ್ನು ನ್ಯಾ.ಎಂ.ಎಂ.ಸುಂದರೇಶ್‌ ಹಾಗೂ ನ್ಯಾ.ಸತೀಶ್‌ ಚಂದ್ರ ಶರ್ಮಾ ಅವರ ಪೀಠವು ಸೋಮವಾರ ವಿಚಾರಣೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಳ್ಳು ಜಾತಿ ಪ್ರಮಾಣಪತ್ರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವುದಲ್ಲದೇ, ಉಚಿತ ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿರುವ ಪ್ರಿಯಾಂಕ್‌ ಖರ್ಗೆ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಸಿದ್ದರಾಮಯ್ಯಗೂ ನೋಟಿಸ್

2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆಯ ಸಿಂಧುತ್ವವನ್ನು ಪ್ರಶ್ನಿದ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂ ಕೋರ್ಟ್ ಸಿದ್ದರಾಮಯ್ಯ ಅವರಿಗೆ ಪ್ರತಿಕ್ರಿಯೆ ನೀಡಲು ಕೋರಿದೆ.

ನ್ಯಾ. ವಿಕ್ರಮ್‌ ನಾಥ್‌ ಮತ್ತು ನ್ಯಾ. ಸಂದೀಪ್‌ ಮೆಹ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠದಿಂದ ನೋಟಿಸ್ ನೀಡಲಾಗಿದ್ದು,
ಪ್ರತಿಕ್ರಿಯೆಯನ್ನು ನೀಡುವಂತೆ ಸೂಚಿಸಿದೆ.

ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿತ್ತು. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಅರ್ಜಿದಾರರಾದ ಶಂಕರ್ ಅವರು, ಸಿದ್ದರಾಮಯ್ಯ ಅವರು ಜನಪ್ರತಿನಿಧಿ ಕಾಯ್ದೆ, 1951ರ ಅಡಿಯಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...