ರಾಜ್ಯದ ಕೆಲವಡೆ ಹಗುರ ಮಳೆ, ಉಳಿದಲ್ಲಿ ಒಣಹವೆ; ಹವಾಮಾನ ಇಲಾಖೆ ಸೂಚನೆ

Date:

ಕರ್ನಾಟಕದಲ್ಲಿ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಿದೆ. ಮುಂಗಾರು ಅವಧಿಯೂ ಬಹುತೇಕ ಕೊನೆಗೊಂಡಿದೆ. ಹಿಂಗಾರು ಆರಂಭವಾಗುತ್ತಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಹಜ ಹವಾಮಾನ ಇರಲಿದ್ದು, ಕೆಲವೆಡೆ ಹಗುರ, ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಉಳಿದೆಡೆ ಒಣಹವೆ ಇರಲಿದ್ದು, ಕೆಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳವಾಗುವ ಸಾಧ್ಯತೆಯೂ ಇದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

“ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ಅಂದರೆ ಭಾನುವಾರ ಬೆಳಗ್ಗೆ 8.30ರ ತನಕ ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ” ಎಂದು ತಿಳಿಸಿದೆ.

“ರಾಜ್ಯದಲ್ಲಿ ಶುಕ್ರವಾರ ಕಲಬುರಗಿ ಮತ್ತು ಚಿಕ್ಕನಹಳ್ಳಿಯಲ್ಲಿ ಅತಿ ಗರಿಷ್ಠ ಉಷ್ಣಾಂಶ 34.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಸಮತಟ್ಟು ಪ್ರದೇಶಗಳ ಪೈಕಿ ಬಾಗಲಕೋಟೆಯಲ್ಲಿ ಕನಿಷ್ಠ ಉಷ್ಣಾಂಶ 15.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ” ಎಂದು ವರದಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉಳಿದಂತೆ ಉತ್ತರ ಒಳನಾಡಿನ ಕಲಬುರಗಿ, ಕೊಪ್ಪಳ, ರಾಯಚೂರು, ದಕ್ಷಿಣ ಒಳನಾಡಿನ ಮಂಡ್ಯ, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯಕ್ಕಿಂತ 1ರಿಂದ 2 ಡಿಗ್ರಿ ಹೆಚ್ಚಾಗುವ ನಿರೀಕ್ಷೆ ಇದೆ” ಎಂದು ತಿಳಿಸಿದೆ.

“ಕೊಪ್ಪಳ, ಕೋಲಾರ, ಮೈಸೂರು, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ಉಷ್ಣಾಂಶ ಅಂದರೆ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿಗಳಷ್ಟು ಕಡಿಮೆ ಉಷ್ಣತೆ ಕಾಣುವ ಸಾಧ್ಯತೆ ಇದೆ” ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗೆ ಸಮಿತಿ ರಚನೆ

“ಅಕ್ಟೋಬರ್‌ 8ರ ಭಾನುವಾರ ಬೆಳಗ್ಗೆ ತನಕ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಶನಿವಾರ ಸಂಜೆ ಅಥವಾ ರಾತ್ರಿ ವೇಳೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಬಹುದು” ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...