ಬಾನು ಮುಷ್ತಾಕ್ ರಚಿಸಿದ್ದ ಕೃತಿಯ ಇಂಗ್ಲಿಷ್ ಆವೃತ್ತಿಗೆ ‘ಇಂಗ್ಲಿಷ್ ಪೆನ್’ ಪ್ರಶಸ್ತಿ

Date:

ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕಥಾ ಸಂಕಲನದ ಇಂಗ್ಲಿಷ್ ಅನುವಾದಿತ ಪುಸ್ತಕಕ್ಕೆ ಪ್ರತಿಷ್ಠಿತ ‘ಇಂಗ್ಲಿಷ್ ಪೆನ್’ ಪ್ರಶಸ್ತಿ ಲಭಿಸಿದೆ.

ಹತ್ತು ಭಾಷೆಗಳಿಂದ ಇಂಗ್ಲಿಷ್‌ಗೆ ಅನುವಾದಗೊಂಡಿದ್ದ 16 ಕೃತಿಗಳಿಗೆ 2024ನೇ ಸಾಲಿನ ‘ಇಂಗ್ಲಿಷ್‌ ಪೆನ್‌’ ಪ್ರಶಸ್ತಿಯನ್ನು ಗುರುವಾರ ಪ್ರಕಟಿಸಲಾಗಿದೆ. ಈ ಪೈಕಿ, ‘ಹಸೀನಾ ಮತ್ತುಜ ಇತರ ಕತೆಗಳು’ ಕೃತಿಯ ಇಂಗ್ಲಿಷ್ ಆವೃತ್ತಿಗೆ ಪ್ರಶಸ್ತಿ ಲಭಿಸಿದೆ.

ಬಾನು ಮುಷ್ತಾಕ್ ಅವರು ಕನ್ನಡದಲ್ಲಿ ರಚಿಸಿದ್ದ ಕೃತಿಯನ್ನು ಪತ್ರಕರ್ತೆ, ಲೇಖಕಿ ದೀಪಾ ಬಸ್ತಿ ಅವರು ‘ಹಸೀನಾ ಅಂಡ್ ಅದರ್ ಸ್ಟೋರೀಸ್’ ಎಂದು ಇಂಗ್ಲಿಷ್‌ ಭಾಷೆಗೆ ಅನುವಾದಿಸಿದ್ದರು. ಇದೀಗ, ಕೃತಿಯು ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಗೊಂಡು ‘ಇಂಗ್ಲಿಷ್ ಪೆನ್’ ಪ್ರಶಸ್ತಿ ಪಡೆದ ಮೊದಲ ಕೃತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಇಂಗ್ಲಿಷ್ ಪೆನ್’ ವಿಶ್ವದ ಪ್ರಸಿದ್ಧ ಮಾನವ ಹಕ್ಕು ಸಂಘಟನೆಗಳಲ್ಲಿ ಒಂದಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಜಾಗತಿಕ ಮಟ್ಟದಲ್ಲಿ ಹೋರಾಟ ನಡೆಸುತ್ತಿದೆ. 90 ದೇಶಗಳಲ್ಲಿ 130 ಕೇಂದ್ರಗಳನ್ನು ಹೊಂದಿರುವ ‘ಇಂಗ್ಲಿಷ್ ಪೆನ್’ ಸಂಘಟನೆಯು ಪೆನ್ ಇಂಟರ್ ನ್ಯಾಷನಲ್ ಎಂಬ ಜಾಗತಿಕ ಲೇಖಕರ ಸಂಘವನ್ನು ಸ್ಥಾಪಿಸಿದೆ.

ಸಮಕಾಲೀನ ಮಹಿಳೆಯರು ಎದುರಿಸುವ ವಾಸ್ತವಗಳನ್ನು ಅಪರೂಪದ ಪ್ರತಿಭೆ ಹಾಗು ಕಲೆಯ ಮೂಲಕ ಬಾನು ಮುಷ್ತಾಕ್ ಅವರು ಅನಾವರಣಗೊಳಿಸಿದ್ದಾರೆ. ಅವರ ಕೃತಿಯಲ್ಲಿನ ಧ್ವನಿ, ಸಂದರ್ಭಗಳು ಹಾಗು ಅನುಭವವನ್ನು ದೀಪಾ ಬಸ್ತಿ ಅವರ ಅತ್ಯುತ್ತಮ ಅನುವಾದ ಭಾರತ ಹಾಗು ಜಾಗತಿಕ ಇಂಗ್ಲಿಷ್ ಓದುಗರಿಗೆ ತಲುಪಿಸಿದೆ ಎಂದು ಪೆನ್ ಪ್ರಶಸ್ತಿ ಸಮಿತಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...