ಜಿಲ್ಲಾಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರ ಸ್ಥಾಪನೆ: ಸಚಿವ ದಿನೇಶ್ ಗುಂಡೂರಾವ್

Date:

ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಯೋಗ ಮಂದಿರ’ಗಳನ್ನು ಸ್ಥಾಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ನಡೆದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿ, “ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದಿರುವ ಯೋಗವನ್ನು ನಾವು ಹೆಚ್ಚಿನ ಜನರಿಗೆ ಪರಿಚಯಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನ ಹಾಕಿಕೊಳ್ಳುತ್ತಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಪರಿಚಯಿಸುವ ‘ಯೋಗ ಮಂದಿರ’ಗಳನ್ನು ಪ್ರಾರಂಭಿಸುತ್ತೇವೆ” ಎಂದು ತಿಳಿಸಿದರು.

“ಮೈಸೂರು ಜಿಲ್ಲೆಯನ್ನು ಯೋಗ ಜಿಲ್ಲೆಯನ್ನಾಗಿ ನಿರ್ಮಿಸುವತ್ತ ಈಗಾಗಲೇ ಯೋಜನೆ ರೂಪಿಸಲಾಗಿದೆ.‌ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದೇವೆ. ಮೈಸೂರು ಜಿಲ್ಲೆಯ ಪ್ರತಿ ಮನೆಗಳಲ್ಲಿ ಒಬ್ಬರಾದರೂ ಯೋಗಭ್ಯಾಸ ನಡೆಸುವ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸಲು ಗುರಿ ಹೊಂದಲಾಗಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಒಂದು ಜಿಲ್ಲೆಯನ್ನು ಸಂಪೂರ್ಣವಾಗಿ ಯೋಗ ಜಿಲ್ಲೆಯನ್ನಾಗಿ ರೂಪಿಸುವತ್ತ ಹೆಜ್ಜೆ ಇಟ್ಟಿದ್ದೇವೆ. ರಾಜ್ಯದಲ್ಲಿ ಪರಂಪರಾಗತವಾಗಿ ಬಂದ ಅಷ್ಟಾಂಗ ಯೋಗಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು” ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಯುಷ್ ಇಲಾಖೆಯಿಂದ ಇಂದು ಯಶಸ್ವಿಯಾಗಿ 11 ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗಿದೆ. ರಾಜ್ಯದ 10 ಸಾವಿರ ಸ್ಥಳಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಜನರಿಗೆ ಯೋಗಭ್ಯಾಸ ಮಾಡಲು ಸರ್ಕಾರ ಅನುವು ಮಾಡಿಕೊಟ್ಟುತ್ತು. 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆಯನ್ನ ಪ್ರದರ್ಶಿಸಲಾಯಿತು.

“ರಾಜ್ಯದ ಹಲವೆಡೆ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಪಾರ್ಕ್, ಯೋಗ ಧನುಷ್, ಹಸಿರು ಯೋಗ, ಯೋಗ ಮಹಾಕುಂಭ, ಯೋಗ ಸಂಯೋಗ, ಯೋಗ ಅನ್ ಪ್ಲಗ್ಸ್ ನಂತಹ ಕಾರ್ಯಕ್ರಮಗಳನ್ನು ಆಯುಷ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದೆ. ಹಸಿರು ಯೋಗ ಕಾರ್ಯಕ್ರಮದ ಅಡಿಯಲ್ಲಿ 1 ಲಕ್ಷ ಗಿಡಗಳನ್ನ ನಡಲಾಗುವುದು. ಅಲ್ಲದೇ ಯೋಗ ಧನಷ್ ಎಂಬ ಕಾರ್ಯಕ್ರಮದ ಮೂಲಕ ರಾಜ್ಯದಾದ್ಯಂತ 5 ಲಕ್ಷ ಜನರಿಗೆ ಯೋಗ ಪ್ರೋಟೋಕಾಲ್ ಅನ್ನು ಹೇಳಿಕೊಡಲಾಗಿದ್ದು, ಕಾರ್ಯಕ್ರಮದ ಅಡಿಯಲ್ಲಿ 5000 ಶಾಲೆಗಳಲ್ಲಿ ಯೋಗ ಪ್ರೋಟೋಕಾಲ್ ಅನ್ನು ಮಾಡಲು ಕ್ರಮಕೈಗೊಳ್ಳಲಾಗಿದೆ” ಎಂದು ವಿವರಿಸಿದರು.

‘ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ವಿಶ್ವ ಯೋಗ ದಿನಾಚರಣೆಯನ್ನ ಆಚರಿಸಲಾಯಿತು. ವಿಧಾನ ಸೌಧದ ಮೆಟ್ಟಿಲುಗಳ ಎದುರು 5 ಸಾವಿರಕ್ಕೂ ಹೆಚ್ಚು ಜನರು ಯೋಗಾಭ್ಯಾಸ ನಡೆಸಿದರು.‌ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಭಾಪತಿ ಬಸವರಾಜ್ ಹೊರಟ್ಟಿ ಅವರೊಂದಿಗೆ ಯೋಗಭ್ಯಾಸ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...