ಜಾತಿ ಜನಗಣತಿ ಬೇಡ ಎನ್ನುವವರಿಗೂ ಅದರಲ್ಲೇನಿದೆ ಎಂದು ತಿಳಿದಿಲ್ಲ: ಸಿಎಂ ಸಿದ್ದರಾಮಯ್ಯ

Date:

  • ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ: ಸಿಎಂ
  • ‘ವಿಪಕ್ಷ ನಾಯಕನ ಆಯ್ಕೆಯೊಂದಿಗೆ ಬಿಜೆಪಿಯಲ್ಲಿ ಬೆಂಕಿ ಹತ್ತಿಕೊಂಡಿದೆ’

ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲಿ ಏನಿದೆ ಎಂದು ಅದನ್ನು ಬೇಡ ಎನ್ನುವವರಿಗೂ ಗೊತ್ತಿಲ್ಲ. ವರದಿ ಸಲ್ಲಿಕೆಯಾದ ನಂತರ ನೋಡೋಣ. ಸುಮ್ಮನೆ ಊಹೆಗಳ ಮೇಲೆ ಮಾತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆಯ ನವನಗರದ ಹೆಲಿಪ್ಯಾಡಿನಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡುತ್ತ, ಮೂಲ ವರದಿ ಕಳೆದಿದೆ ಎಂದು ಹಾಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಯಪ್ರಕಾಶ್ ಹೇಳಿಕೆ ಬಗ್ಗೆ ಮಾತನಾಡಿ, ಅವರನ್ನು ಕರೆದು ಮಾತನಾಡುತ್ತೇನೆ ಎಂದರು.

ಜಾತಿ ಜನಗಣತಿ ಸಮಾಜವನ್ನು ಒಡೆಯುತ್ತದೆ ಎಂದಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, “ಅವರಿಗೆ ವರದಿಯಲ್ಲಿ ಏನಿದೆ ಎಂದು ಗೊತ್ತಿದೆಯೇ? ಯಾರೇ ಆಗಲಿ ಗೊತ್ತಿಲ್ಲದೆ ಮಾತನಾಡಬಾರದು. ಸಮಾಜ ಏಕೆ ಒಡೆಯುತ್ತೇವೆ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿತೀಶ್ ಕುಮಾರ್ ಬಿಹಾರದಲ್ಲಿ ಜಾತಿಗಣತಿ ಸ್ವೀಕರಿಸಿದ್ದಾರೆ. ಸಮಾಜ ಒಡೆದುಬಿಟ್ಟರೆ? ಯಾವುದೇ ಹೇಳಿಕೆ ನೀಡುವಾಗ ಅದು ಸತ್ಯಾಂಶದ ಮೇಲೆ ಅವಲಂಬಿತವಾಗಿರಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ನಮ್ಮದು ಜಾತಿ ಗಣತಿ ಅಲ್ಲ, ಸಾಮಾಜಿಕ ಮತ್ತು ಶೈಕ್ಷಣಿಕ ವರದಿ: ಕಾಂತರಾಜ ಸ್ಪಷ್ಟನೆ

ಬಿಜೆಪಿಯಲ್ಲಿ ಬೆಂಕಿ ಹತ್ತಿಕೊಂಡಿದೆ

ಅರವಿಂದ್ ಲಿಂಬಾವಳಿ ಮತ್ತು ವಿ.ಸೋಮಣ್ಣ ವಿಚಾರವಾಗಿ ಮಾತನಾಡಿ, “ಬಿಜೆಪಿ ಪಕ್ಷದಲ್ಲಿ ವಿಜಯೇಂದ್ರರನ್ನು ಅಧ್ಯಕ್ಷರನ್ನಾಗಿ ಹಾಗೂ ಆರ್.ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ನೇಮಿಸಿದ ಮೇಲೆ ಬೆಂಕಿ ಹತ್ತಿಕೊಂಡಿದೆ. ಬಹಳಷ್ಟು ಜನರಿಗೆ ಅಸಮಾಧಾನವಾಗಿದೆ. ಇದು ಏನಾಗುತ್ತದೆ ಎಂದು ಗೊತ್ತಿಲ್ಲ. ಅದು ಜ್ವಾಲೆಯಾಗುತ್ತದೆಯೋ ಅವರ ಬುಡಕ್ಕೆ ಬೆಂಕಿ ಹತ್ತುಕೊಳ್ಳುತ್ತದೆಯೋ ಗೊತ್ತಿಲ್ಲ. ಬೆಂಕಿ ಅಂತೂ ಹತ್ತಿಕೊಂಡಿದೆ” ಎಂದರು.

ಪಕ್ಷಕ್ಕೆ ಸೇರ್ಪಡೆಯಾಗುವವರು ನಮ್ಮ ಸಿದ್ಧಾಂತಕ್ಕೆ ಬದ್ಧರಾಗಿರಬೇಕು

“ನಾವು ಯಾರನ್ನೂ ಕಾಂಗ್ರೆಸ್ಸಿಗೆ ಕರೆಯಲ್ಲ. ಅವರಾಗಿಯೇ ಬಂದರೆ ಸೇರಿಸಿಕೊಳ್ಳುತ್ತೇವೆ. ನಾನು ಯಾರನ್ನೂ ಸಂಪರ್ಕಿಸಿಲ್ಲ. ಯಾರು ನಮ್ಮ ನಾಯಕತ್ವವನ್ನು ಒಪ್ಪಿಕೊಂಡು ಅವರಾಗಿಯೇ ಬರುತ್ತಾರೋ ಅವರನ್ನು ಸೇರಿಸಿಕೊಂಡಿದ್ದೇವೆ. ನನ್ನ ರಾಜಕೀಯ ಜೀವನದಲ್ಲಿ ಯಾರನ್ನೂ ಬನ್ನಿ ಎಂದು ಕರೆಯಲು ಹೋಗಿಲ್ಲ. ನಮ್ಮ ಸಿದ್ಧಾಂತಕ್ಕೆ ಬದ್ಧರಾಗಿರಬೇಕಲ್ಲ. ಬಿಜೆಪಿಯಲ್ಲಿ ಬಹಳ ವರ್ಷ ಇದ್ದವರು ಆ ಸಿದ್ಧಾಂತವನ್ನು ಒಪ್ಪಿರುತ್ತಾರೆ. ಅದನ್ನು ಬಿಟ್ಟು ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಳ್ಳಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...