ಮುಸ್ಲಿಮರು ಇರದಿದ್ದರೆ ಜೆಡಿಎಸ್‌ಗೆ ಒಂದು ಸ್ಥಾನವೂ ಬರುವುದಿಲ್ಲ: ಸಿ ಎಂ ಇಬ್ರಾಹಿಂ

Date:

ಮುಸ್ಲಿಮರು ಇರದಿದ್ದರೆ ಜೆಡಿಎಸ್‌ಗೆ ಒಂದು ಸ್ಥಾನವೂ ಬರುವುದಿಲ್ಲ ಎಂಬುದು ದೃಢವಾಗಿದೆ.ಅವತ್ತು 19 ಜನ ಗೆದ್ದದ್ದು ಮುಸ್ಲಿಮರಿಂದ ಎಂಬುದು ಕೂಡ ಸಾಬೀತಾಗಿದೆ ಎಂದು ಮಾಜಿ ಕೇಂದ್ರ ಸಚಿವ ಸಿ ಎಂ ಇಬ್ರಾಹಿಂ ತಿಳಿಸಿದರು.

ಮೈಸೂರಿನಲ್ಲಿ ಜಿ ಟಿ ದೇವೇಗೌಡರ ಅವರನ್ನು ಭೇಟಿಯಾದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಜಿ ಟಿ ದೇವೇಗೌಡ ಸೇರಿದಂತೆ ಜೆಡಿಎಸ್‌ನ 12 ರಿಂದ 13 ಶಾಸಕರು ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಯ ವಿಚಾರದಲ್ಲಿ ಬೇಸರಗೊಂಡಿದ್ದಾರೆ. ನೋವು ನುಂಗಿಕೊಂಡಿದ್ದಾರೆ. ಈಗ ಅವರನ್ನು ಒಗ್ಗೂಡಿಸುವ ಕೆಲಸವನ್ನು ನಾನು ಶುರು ಮಾಡಿದ್ದೇನೆ. ಮುಂದೆ ಏನೇನು ಆಗುತ್ತದೆಯೋ ನೋಡೋಣ’ ಎಂದು ಹೇಳಿದರು

ಈಗಲೂ ನಾನೇ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ. ನಮ್ಮ ಶಾಸಕರ ನೋವು ನಿವಾರಿಸುವ ಜವಾಬ್ದಾರಿ ನನ್ನದು’ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?: ಡೆಲ್ಲಿ ಕ್ಯಾಪಿಟಲ್ಸ್‌ ಮುನ್ನಡೆಸುವ ಆಟಗಾರರ ಹೆಸರು ಘೋಷಣೆ

‘ಜಿಟಿಡಿ ಕಳೆದ ವಿಧಾನಸಭೆ ಚುನಾವಣೆ ವೇಳೆಯೇ ಕಾಂಗ್ರೆಸ್‌ಗೆ ಹೋಗಿದ್ದರೆ ಸಚಿವರಾಗುತ್ತಿದ್ದರು. ಜೆಡಿಎಸ್ ಬಲಪಡಿಸಲೆಂದು ನಾನೇ ಅವರನ್ನು ಜೆಡಿಎಸ್‌ನಲ್ಲಿ ಉಳಿಸಿಕೊಂಡೆ. ಈಗ ಜಿಟಿಡಿಯವರ ಕತ್ತು ಕೊಯ್ಯುವ ಕೆಲಸ ಮಾಡಲಾಗುತ್ತಿದೆ. ಎಲ್ಲ ವಿಚಾರಗಳ ಬಗ್ಗೆ ಅವರೊಂದಿಗೆ ಚರ್ಚಿಸಿದ್ದೇನೆ’ ಎಂದರು.

ಇನ್ನೆರಡು ದಿನ ಬಿಟ್ಟು ನಾನು ರಾಜ್ಯ ಪ್ರವಾಸ ಹೋಗುತ್ತಿದ್ದೇನೆ. ಆಗ ಕೆಲವು ನಾಯಕರನ್ನು ಭೇಟಿಯಾಗುತ್ತೇನೆ. ಬಳಿಕ ಮತ್ತೆ ಜಿಟಿಡಿ ಭೇಟಿಯಾಗುತ್ತೇನೆ. ಮೂಲ ಜೆಡಿಎಸ್ ನಮ್ಮದೆ. ಅದರ ಖಾತೆ, ಪಹಣಿ ಎಲ್ಲವೂ ನಮ್ಮ ಹೆಸರಿನಲ್ಲಿವೆ. ಈಗಲೂ ಎಚ್ ಡಿ ದೇವೇಗೌಡರು ಬಿಜೆಪಿ ಸಹವಾಸ ಬಿಟ್ಟು ಬರಲಿ. ಪಕ್ಷವನ್ನು ಕಟ್ಟುತ್ತೇವೆ’ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉಪಸಮರದ ಗೆಲುವು– ಈಗಲಾದರೂ ಎಚ್ಚೆತ್ತುಕೊಳ್ಳುತ್ತಾ ಕಾಂಗ್ರೆಸ್‌ ಸರ್ಕಾರ?

‘ಹೊಸ ಪಕ್ಷವೋ, ತೃತೀಯ ರಂಗವೋ ಅಥವಾ ಜೆಡಿಎಸ್ ಬಲವರ್ಧನೆಯೋ? ಎಲ್ಲವನ್ನೂ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಆಧರಿಸಿ ತೀರ್ಮಾನ ಮಾಡುತ್ತೇವೆ’ಎಂದು ಪ್ರತಿಕ್ರಿಯಿಸಿದರು.

‘ಈಗ ಇರುವ ಜೆಡಿಎಸ್ ಮನೆಗೆ ಬೆಂಕಿ ಬಿದ್ದಾಗಿದೆ. ಎಲ್ಲ ಜೆಡಿಎಸ್ ಶಾಸಕರೂ ಅವರವರ ಕ್ಷೇತ್ರ ಕಾಪಾಡಿಕೊಳ್ಳಬೇಕಿದೆ. ಹೀಗಾಗಿ ಒಬ್ಬೊಬ್ಬರೇ ಮಾತು ಶುರುಮಾಡಿದ್ದಾರೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಈಗಲಾದರೂ ಬುದ್ಧಿ ಕಲಿಯಬೇಕು. ಜೆಡಿಎಸ್ ಪಕ್ಷವನ್ನು ಫ್ಯಾಮಿಲಿ ಕಂಪನಿ ಮಾಡುವುದನ್ನು ಬಿಡಬೇಕು. ಆಗ ಮಾತ್ರ ಮೂಲ ಜೆಡಿಎಸ್ ಉಳಿಸಿಕೊಳ್ಳಬಹುದು’ ಎಂದರು.

‘ಜೆಡಿಎಸ್ ಪರಿಸ್ಥಿತಿ ಬಸ್ ನಿಲ್ದಾಣದಲ್ಲಿ ನಿಂತ ಬಸವಿಯ ರೀತಿಯಾಗಿದೆ. ಬಿಜೆಪಿಯನ್ನು ಲವ್‌ ಮಾಡಿದ್ದಾಯಿತು. ಈಗ ಅವರನ್ನು ಅಲ್ಲೇ ಬಿಟ್ಟು ಬಿಡಬೇಕು’ ಎಂದು ಹೇಳಿದರು.

‘ನಾನು ಕುಮಾರಸ್ವಾಮಿ ಜೊತೆಯಲ್ಲಿದ್ದಾಗ ಚನ್ನಪಟ್ಟಣದಲ್ಲಿ 4 ಕೋಟಿ ರೂ. ಖರ್ಚು ಮಾಡಿ 20 ಸಾವಿರ ಮತಗಳ ಅಂತರದಿಂದ ಗೆದ್ದರು. ಈಗ ನಾನು ಅವರ ಜೊತೆಯಲ್ಲಿಲ್ಲ. 150 ಕೋಟಿ ರೂ. ಖರ್ಚು ಮಾಡಿದರೂ ಅವರ ಮಗ ನಿಖಿಲ್ 25 ಸಾವಿರ ಮತಗಳ ಅಂತರದಿಂದ ಸೋತಿದ್ದಾರೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...