ಅ. 18ರವರೆಗೆ ಶಾಲಾ ಕಾಲೇಜುಗಳಿಗೆ ದಸರಾ ರಜೆ ವಿಸ್ತರಣೆ; ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರ ಹೆಚ್ಚುವರಿ ಬಳಕೆ

Date:

ರಾಜ್ಯದಲ್ಲಿ ಅಕ್ಟೋಬರ್ 18ರವರೆಗೆ ಶಾಲೆಗಳ ದಸರಾ ರಜೆ ವಿಸ್ತರಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಶಾಲೆಗಳ ದಸರಾ ರಜೆಯನ್ನು ಆಕ್ಟೋಬರ್ 18ರವರೆಗೆ ವಿಸ್ತರಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರ ಸಂಘ ಕೂಡ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು.

ಇನ್ನು ಶಾಲೆಗಳು ಪುನರಾರಂಭವಾಗುವುದು ಅಕ್ಟೋಬರ್ 23ಕ್ಕೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಮೀಕ್ಷೆಯ ಸ್ಥಿತಿ ಗತಿ ಕುರಿತಂತೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ವಿಡಿಯೊ ಕಾನ್ಷರೆನ್ಸ್ ಮೂಲಕ ಸೂಚನೆ ನೀಡಿದ್ದಾರೆ.

ಶಿಕ್ಷಕರನ್ನು ಅರ್ಧ ದಿನ ಸಮೀಕ್ಷೆ, ಅರ್ಧ ದಿನ ಶಾಲೆಗಳಲ್ಲಿ ಪಾಠ ಭೋಧನೆಗೆ ಬಳಕೆಯಿಂದ ಯಾವುದಕ್ಕೂ ನ್ಯಾಯ ನೀಡಲು ಆಗಲ್ಲ. ಹೀಗಾಗಿ ಪೂರ್ಣ ಪ್ರಮಾಣದಲ್ಲಿ ಶಾಲಾ ಶಿಕ್ಷಕರನ್ನು ಸಮೀಕ್ಷೆಗೆ ಬಳಕೆ ಮಾಡಲು ಅಕ್ಟೋಬರ್ 18ರವರೆಗೆ ಶಾಲೆಗಳ ದಸರಾ ರಜೆ ವಿಸ್ತರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆಪ್ಟೆಂಬರ್ 2 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿದ್ದಾರೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆರ್‌ಎಸ್‌ಎಸ್‌ಗೆ ನೂರು, ನ್ಯಾಯಮೂರ್ತಿಗಳ ಮೇಲೆ ಶೂ ತೂರು

ವಿಧಾನ‌ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ‌ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ. 8 working days ರಜೆ ಘೋಷಿಸಲಾಗಿದೆ.

ಇದೇ 12ನೇ ತಾರೀಕಿನಿಂದ ದ್ವಿತೀಯ ಪಿಯು ಮಧ್ಯಂತರ ಪರೀಕ್ಷೆ ನಡೆಯುತ್ತಿರುವುದರಿಂದ ಸಮೀಕ್ಷೆ ಕಾರ್ಯದಿಂದ ಪಿಯುಸಿ ಉಪನ್ಯಾಸಕರಿಗೆ ವಿನಾಯ್ತಿ ನೀಡಲಾಗಿದೆ ಎಂದರು.

ಬೆಂಗಳೂರು ನಗರದಲ್ಲಿ 6700 ಜನ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಷಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ.

ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು ಎಂದರು‌.

ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ.

GBA ಪ್ರದೇಶದಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದಿದ್ದರಿಂದ ತಡವಾಗಿ ಶುರುವಾಗಿದೆ. ಆದ್ದರಿಂದ GBA ಪ್ರದೇಶದಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...