ತಿಮರೋಡಿ ಗಡಿಪಾರಿಗಾಗಿ ನ್ಯಾಯಾಲಯಕ್ಕೆ ಸುಳ್ಳು ವರದಿ; ಬಂಟ್ವಾಳ DySP ವಿರುದ್ಧ ಕ್ರಮಕ್ಕೆ ಆಗ್ರಹ

Date:

ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಬೇಕೆಂದು ದುರುದ್ದೇಶಪೂರಿತ ಪ್ರಕರಣಗಳನ್ನು ದಾಖಲಿಸಲಾಗಿದೆ. ನ್ಯಾಯಾಲಯಕ್ಕೆ ಸುಳ್ಳು ಮಾಹಿತಿಯುಳ್ಳ ವರದಿ ನೀಡಲಾಗಿದೆ ಎಂದು ಬಂಟ್ವಾಳ ಡಿವೈಎಸ್‌ಪಿ ವ್ಯಾಲೆಂಟೈನ್ ಡಿ’ಸೋಜಾ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ನ್ಯಾಯಾಲಯದ ದಾರಿ ತಪ್ಪಿಸಿರುವ ಡಿವೈಎಸ್‌ಪಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ‘ನೇಟಿವ್ ಎಂಪವರಿಂಗ್ ಅಂಡ್ ಎಕ್ಯುಪಿಂಗ್ ಟೀಮ್ ಫಾರ್ ಹೋಪ್ ಅಂಡ್ ಇಟರ್ಯಾಕ್ಷನ್’ (ನೀತಿ) ಸಂಸ್ಥೆ ಒತ್ತಾಯಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ‘ನೀತಿ’ ಸಂಸ್ಥೆ, “ತಿಮರೋಡಿ ಅವರನ್ನು ಗಡಿಪಾರು ಮಾಡುವ ಸಂಚಿನಲ್ಲಿ ಡಿವೈಎಸ್‌ಪಿ ವ್ಯಾಲೆಂಟೈನ್ ಡಿ’ಸೋಜಾ ಅವರು ನೇರವಾಗಿ ಭಾಗಿಯಾಗಿದ್ದಾರೆ. ಅವರು ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಸುಳ್ಳು ಮಾಹಿತಿಯುಳ್ಳ ವರದಿ ನೀಡಿದ್ದು, ನ್ಯಾಯಾಲಯವು ತಿಮರೋಡಿ ಅವರ ವಿರುದ್ಧ ಗಡಿಪಾರು ಆದೇಶ ನೀಡುವಂತೆ ಪ್ರಭಾವ ಬೀರಿದ್ದಾರೆ” ಎಂದು ಆರೋಪಿಸಿದೆ.

“ತಿಮರೋಡಿ ಅವರ ವಿರುದ್ಧ ಒಟ್ಟು 26 ಪ್ರಕರಣಗಳಿದ್ದವು. ಆ ಪೈಕಿ, ನ್ಯಾಯಾಲಯದ ಆದೇಶದಂತೆ 16 ಪ್ರಕರಣಗಳು ಖುಲಾಸೆಗೊಂಡಿದ್ದು, ಕೇವಲ 10 ಪ್ರಕರಣಗಳು ಮಾತ್ರವೇ ಬಾಕಿ ಇವೆ. ಆದರೆ, ಡಿ’ಸೋಜಾ ಅವರು 13 ಪ್ರಕರಣಗಳು ಖುಲಾಸೆಗೊಂಡಿವೆ. ಇನ್ನೂ 13 ಪ್ರಕರಣಗಳು ಬಾಕಿ ಇವೆ ಎಂಬುದಾಗಿ ಸುಳ್ಳು ವರದಿ ನೀಡಿದ್ದಾರೆ. ಜೊತೆಗೆ, ದುರುದ್ದೇಶದಿಂದ ಕೆಲವು ಪ್ರಕರಣಗಳನ್ನು ದಾಖಲಿಸಿದ್ದಾರೆ. ಬೆಳ್ತಂಗಡಿ ಪೊಲೀಸ್‌ ಠಾಣೆಯ ಉಪ ಪೊಲೀಸ್‌ ಅಧಿಕಾರಿ ನೀಡಿರುವ ವರದಿ ಪತ್ರವನ್ನು ಗಣನೆಗೆ ತೆಗೆದುಕೊಳ್ಳದೆ ನಿಯಮ ಉಲ್ಲಂಘನೆ ಮಾಡಿದ್ದಾರೆ. ನ್ಯಾಯಾಲಯಕ್ಕೆ ತಪ್ಪು ಮಾಹಿತಿಯುಳ್ಳು ವರದಿ ಸಲ್ಲಿಸಿದ್ದಾರೆ” ಎಂದು ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಕೋಟ್ಯಂತರ ರೂಪಾಯಿ ಗುರುದಕ್ಷಿಣೆ ಲೆಕ್ಕ ಕೊಡದ ‘ಸಂಘ’ವೇ ಸ್ವಯಂ ಭ್ರಷ್ಟವಾಗಿದೆ

“ತಿಮರೋಡಿ ಅವರು ತಮ್ಮ ವಿರುದ್ಧದ ಪಿರ್ಯಾದಿದಾರರು (ದೂರುದಾರ) ಮತ್ತು ಸಾಕ್ಷಿದಾರರ ಮೇಲೆ ದರ್ಪ ಮತ್ತು ರೌಡಿ ಪ್ರವೃತ್ತಿಯಿಂದ ಹೆದರಿಸಿದ್ದಾರೆ ಎಂದು ಡಿವೈಎಸ್‌ಪಿ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಆದರೆ, ಈ ಬೆದರಿಕೆ ಆರೋಪಗಳಿಗೆ ಸಂಬಂಧಿಸಿದಂತೆ ದೂರುದಾರರು ನೀಡಿದ ದೂರು ಅಥವಾ ಪೊಲೀಸರು ಖುದ್ದು ದಾಖಲಿಸಿಕೊಂಡ ‘ಸುವೋಮೋಟೊ’ ಪ್ರಕರಣ ಮತ್ತು ತನಿಖೆ ನಡೆಸಿದ ವರದಿಯ ಕುರಿತು ಯಾವುದೇ ಮಾಹಿತಿ/ದಾಖಲೆ ನೀಡಲಾಗಿಲ್ಲ” ಎಂದು ‘ನೀತಿ’ ಸಂಸ್ಥೆ ಗಮನ ಸೆಳೆದಿದೆ.

“ಸಂವಿಧಾನದ ಅಡಿಯಲ್ಲಿ ಸಾರ್ವಜನಿಕ ಸೇವೆಯಲ್ಲಿ ಇದ್ದುಕೊಂಡು, ನ್ಯಾಯಾಲಯದ ಗೌರವಕ್ಕೆ ಧಕ್ಕೆ ಉಂಟುಮಾಡಿರುವ, ಜನರಲ್ಲಿ ಗೊಂದಲ ಸೃಷ್ಟಿಸಿರುವ, ದುರುದ್ದೇಶಪೂರಿತ ಅಸಂಬದ್ಧ ವರದಿ ನೀಡಿರುವ ಹಾಗೂ ಸುಳ್ಳು ಆರೋಪಗಳ ಮೂಲಕ ಗಡಿಪಾರು ಆದೇಶ ನೀಡುವಂತೆ ಎ.ಸಿ ನ್ಯಾಯಾಲಯಕ್ಕೆ ಒತ್ತಡ ಹಾಕಿರುವ ಡಿವೈಎಸ್‌ಪಿ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಗೆ ‘ನೀತಿ’ ಸಂಸ್ಥೆ ಮನವಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...