ಕಾಲ್ತುಳಿತ ಪ್ರಕರಣ | ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತ 25 ಲಕ್ಷ ರೂ.ಗಳಿಗೆ ಹೆಚ್ಚಳ

Date:

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.

ಈ ಮೊದಲು ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ರಾಜ್ಯ ಸರಕಾರ ಘೋಷಿಸಿತ್ತು.
ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಹಲವರು ಗಾಯಗೊಂಡಿದ್ದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರಂತದಲ್ಲಿ ಮೃತಪಟ್ಟವರ ಪ್ರತಿ ಕುಟುಂಬಕ್ಕೆ ಆರಂಭದಲ್ಲಿ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಮೊತ್ತ ಘೋಷಿಸಿತ್ತು. ಆದರೆ ಸರ್ಕಾರ ನಿರ್ಲಕ್ಷಕ್ಕೆ ಬಲಿಯಾದವರಿಗೆ ಕೇವಲ 10 ಲಕ್ಷ ರೂಪಾಯಿ ಮಾತ್ರ ಘೋಷಿಸಿದೆ ಎಂದು ವಿಪಕ್ಷಗಳು ಆರೋಪಿಸಿತ್ತು. ಇತ್ತ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇದೀಗ ಪರಿಹಾರ ಮೊತ್ತವನ್ನು 25 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮೋದಿ ಶರಣಾಗಿದ್ದಾರೆ’ ಎಂಬ ರಾಹುಲ್ ಹೇಳಿಕೆಯು ಹಲವು ಪ್ರಶ್ನೆಗಳನ್ನು ಎತ್ತುತ್ತದೆ

ಆರ್‌ಸಿಬಿ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದ ಆರ್‌ಸಿಬಿ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ದುರಂತದಲ್ಲಿ ರಾಜ್ಯ ಕ್ರಿಕೆಟ್ ಸಂಸ್ಥೆಯ ಹೊಣೆಗಾರಿಕೆ ಕುರಿತು ಆರೋಪಿಗಳು ಕೇಳಿಬರುತ್ತಿದೆ. ಈ ಕುರಿತು ದೂರು ಕೂಡ ದಾಖಲಾಗಿದೆ. ಇತ್ತ ರಾಜ್ಯ ಕ್ರಿಕೆಟ್ ಸಂಸ್ಥೆ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಘಟನೆ ನಡೆದ ಬಳಿಕ ರಾಜ್ಯ ಕ್ರಿಕೆಟ್ ಸಂಸ್ಥೆ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ಘೋಷಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...