ರೈತ ವಿರೋಧಿ ಕಾಯ್ದೆ: ಸರ್ಕಾರದ ನಿಲುವು ಸ್ಪಷ್ಟಪಡಿಸಲು ರೈತ ಸಂಘಟನೆಗಳಿಂದ ಸಿಎಂಗೆ ತುರ್ತು ಬಹಿರಂಗ ಪತ್ರ

Date:

ಬಿಜೆಪಿಯ ರೈತ ವಿರೋಧಿ ಕಾಯ್ದೆಯನ್ನು ರದ್ದು ಮಾಡುವುದಾಗಿ ಹೇಳಿದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅದೇ ಕಾಯ್ದೆಯನ್ನು ಮುಂದುವರೆಸಿದೆ ಎಂದು ರೈತ ಸಂಘಟನೆಗಳು ಆರೋಪಿಸಿದೆ. ಈ ನಿಟ್ಟಿನಲ್ಲಿ ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುರ್ತು ಬಹಿರಂಗ ಪತ್ರವನ್ನು ಬರೆದಿದ್ದು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸುವಂತೆ ತಿಳಿಸಿದ್ದಾರೆ.

ನಿನ್ನೆ ಪ್ರಜಾವಾಣಿ ಪತ್ರಿಕೆಯ ಮುಖಪುಟದಲ್ಲಿ ‘ರೈತರ ಆದಾಯಕ್ಕೆ ಹೆಚ್ಚಳ: ಹಳೆ ಕಾಯ್ದೆಗೆ ಜೋತುಬಿದ್ದ ಸರ್ಕಾರ’ ಎಂಬ ಶೀರ್ಷಿಕೆಯಲ್ಲಿ ಲೇಖನವೊಂದು ಪ್ರಕಟವಾಗಿತ್ತು. ಈ ಲೇಖನವನ್ನು ಓದಿ ನಾವು ಆಘಾತಕ್ಕೆ ಒಳಗಾಗಿದ್ದೇವೆ. ರೈತರ ಆದಾಯ ಹೆಚ್ಚಿಸುವ ಹೆಸರಿನಲ್ಲಿ ಬಿಜೆಪಿ ಸರ್ಕಾರ ರೂಪಿಸಿದ ನೀತಿಗಳನ್ನೇ ಯಥಾವತ್ ಜಾರಿಗೊಳಿಸುವ ಮಾರ್ಗಸೂಚಿಯನ್ನೇ ಕಾಂಗ್ರೆಸ್ ಸರ್ಕಾರವೂ ಪಾಲಿಸುತ್ತಿರುವ ಸ್ಪಷ್ಟ ಸಾಕ್ಷ್ಯ ಇದರಲ್ಲಿದೆ ಎಂದು ಕರ್ನಾಟಕ ರೈತ ಸಂಘಟನೆಗಳು ಬಹಿರಂಗ ಪತ್ರದಲ್ಲಿ ಬರೆದಿದೆ.

ಇದನ್ನು ಓದಿದ್ದೀರಾ? ಫೆ. 5ರಂದು ಕೇಂದ್ರ ಬಜೆಟ್ ಪ್ರತಿ ಸುಟ್ಟು ಐಕ್ಯ ಪ್ರತಿಭಟನೆ; ಕರೆ ನೀಡಿದ ರೈತ ಸಂಘಟನೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇತ್ತೀಚೆಗೆ ಬೆಲೆ ಆಯೋಗದ ಸಭೆ ನಡೆದಿದೆ. ಅದರಲ್ಲೂ ಇವುಗಳನ್ನೇ ಮಾನದಂಡವನ್ನಾಗಿಸಲಾಗಿದೆ. ಚರ್ಚೆ ನಡೆಸಲಾಗಿದೆ. ಸರ್ಕಾರದ ನಿಲುವು ಇದೇ ಆಗಿದ್ದರೆ ಇದು ರೈತಕುಲಕ್ಕೆ ಮಾಡುತ್ತಿರುವ ಮಹಾದ್ರೋಹವಾಗಿದೆ. ನಾವಿದನ್ನು ಉಗ್ರವಾಗಿ ಪ್ರತಿಭಟಿಸಿ ಬೀದಿಗಿಳಿಯಬೇಕಾಗುತ್ತದೆ. ಮುಂದುವರೆಯುವ ಮುನ್ನ ನಿಮ್ಮಿಂದ ಸ್ಪಷ್ಟನೆ ಪಡೆಯಲು ಈ ಬಹಿರಂಗ ಪತ್ರ ಬರೆಯುತ್ತಿದ್ದೇವೆ” ಎಂದು ರೈತ ಸಂಘಟನೆಗಳು ತಿಳಿಸಿವೆ.

ಬಹಿರಂಗ ಪತ್ರದಲ್ಲಿ ಬೇರೇನಿದೆ?

ಬಿಜೆಪಿಯು ರೈತರ ಆದಾಯವನ್ನು ದ್ವಿಗುಣಗೊಳಿಸುವ ಬೋಗಸ್ ಮಾತುಗಳನ್ನು ಆಡುತ್ತಾ ಕೃಷಿ ಭೂಮಿಯನ್ನು, ಕೃಷಿ ಉತ್ಪನ್ನಗಳ ಮಾರುಕಟ್ಟೆಯನ್ನು ಸಂಪೂರ್ಣವಾಗಿ ಕಾರ್ಪೋರೇಟ್ ಕಂಪನಿಗಳಿಗೆ ಹಸ್ತಾಂತರಿಸುವ ಹುನ್ನಾರವನ್ನು ಮಾಡುತ್ತಿದೆ. ಅದರ ವಿರುದ್ಧವಾಗಿ ದೇಶದ 562 ರೈತ ಸಂಘಟನೆಗಳು ಒಗ್ಗೂಡಿ ಒಂದು ವರ್ಷಕ್ಕೂ ಹೆಚ್ಚು ಕಾಲ ಐತಿಹಾಸಿಕ ದೆಹಲಿ ರೈತ ಹೋರಾಟವನ್ನು ನಡೆಸಿತ್ತು. ಈ ಹೋರಾಟದಲ್ಲಿ ಏಳು ನೂರಕ್ಕೂ ಹೆಚ್ಚು ರೈತರು ಪ್ರಾಣ ತ್ಯಾಗ ಮಾಡಿದರು.

ಕಡೆಗೂ ಬಗ್ಗಿದ ಕೇಂದ್ರ ಸರ್ಕಾರ ಅದನ್ನು ವಾಪಾಸ್ ತೆಗೆದುಕೊಂಡಿತು. ಲಿಖಿತ ಭರವಸೆಗಳನ್ನು ರೈತರಿಗೆ ನೀಡಿತು. ಆದರೆ ಯಾವೊಂದು ಭರವಸೆಯನ್ನೂ ಈಡೇರಿಸಲಿಲ್ಲ. ಬದಲಿಗೆ ತಾನಿದ್ದ ರಾಜ್ಯ ಸರ್ಕಾರಗಳಲ್ಲಿ ಅವನ್ನು ಜಾರಿ ಮಾಡಿಸುವ ಕೆಲಸ ಮುಂದುವರೆಸಿತು. ಅದರ ಭಾಗವಾಗಿಯೇ ಕರ್ನಾಟಕದಲ್ಲಿಯೂ ಭೂ ಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿಗಳನ್ನು ಮಾಡಿತು. ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಪಕ್ಷ ಇದನ್ನು ವಿರೋಧಿಸಿತು.

ಇದನ್ನು ಓದಿದ್ದೀರಾ? ಬಜೆಟ್‌ನಲ್ಲಿ ಕೃಷಿಗೆ ಆದ್ಯತೆ ನೀಡಬೇಕು: ರೈತ ಸಂಘದಿಂದ ಸಿಎಂ, ಸಚಿವರಿಗೆ ಮನವಿ

ರೈತರು ಬೀದಿಗಿಳಿದಾಗ ಕಾಂಗ್ರೆಸ್ ನಾಯಕರು ರೈತರೊಂದಿಗೆ ಕೂತರು ಹೋರಾಟ ಮಾಡೋಣ ಎಂದರು. 2023 ರ ಚುನಾವಣೆ ಸಂದರ್ಭದಲ್ಲಿ ಬಿಡುಗಡೆ ಮಾಡಿದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ‘ಬಿಜೆಪಿ ಸರ್ಕಾರ ತಂದ ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುವ ರೈತರ ಮೇಲೆ ಹಾಕಿರುವ ರಾಜಕೀಯ ಪ್ರೇರಿತ ಕೇಸುಗಳನ್ನು ತೆಗೆಯುವ, ಎಂಎಸ್‌ಪಿಯನ್ನು ಜಾರಿ ಮಾಡುವ, ಬಡ್ಡಿ ರಹಿತ ಸಾಲದ ಪ್ರಮಾಣ ಹೆಚ್ಚಿಸುವ, ಹೀಗೆ ಮುಂತಾದ ಅನೇಕ ವಾಗ್ದಾನಗಳನ್ನು ಕಾಂಗ್ರೆಸ್ ಮಾಡಿತು. ಆದರೆ ಈ ಯಾವ ಭರವಸೆಗಳನ್ನೂ ಸರ್ಕಾರ ಈಡೇರಿಸಿಲ್ಲ ಎಂದು ರೈತ ಸಂಘಟನೆಗಳು ಬಹಿರಂಗ ಪತ್ರದಲ್ಲಿ ಉಲ್ಲೇಖಿಸಿವೆ.

ಕಾಂಗ್ರೆಸ್ ಸರ್ಕಾರ ಬಿಜೆಪಿ ಕಾಯ್ದೆಗಳನ್ನು ಹಾಗೇ ಮುಂದುವರೆಸಿದೆ. ಬಿಜೆಪಿ ನೇಮಿಸಿದ್ದ ಬೆಲೆ ಆಯೋಗವನ್ನೇ ಮುಂದಿನ ಮೂರು ವರ್ಷಗಳಿಗೆ ವಿಸ್ತರಿಸಿದೆ. ಬಿಜೆಪಿ ನೀಡಿದ ಮಾರ್ಗ ಸೂಚಿಗಳನ್ನೇ ಕಾಂಗ್ರೆಸ್ ಸರ್ಕಾರವು ನೀಡಿದೆ. ಅದರಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮಾಡಿದ [ರೈತರ ಹೋರಾಟದಿಂದಾಗಿ ಹಿಂದಕ್ಕೂ, ತೆಗೆದುಕೊಂಡಿದ್ದ), ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಜಾರಿ ಮಾಡಿದ್ದ ತಿದ್ದುಪಡಿ ಕಾಯ್ದೆಗಳನ್ನೇ ಉಲ್ಲೇಖಿಸಿ ಇವನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಏನೆಲ್ಲಾ ಮಾಡಬೇಕು ಎಂದು ಅಧ್ಯಯನ ಮಾಡಿ ಶಿಫಾರಸು ಮಾಡಿ ಎಂದಿದ್ದೀರಿ, ಎಂಎಸ್‌ಪಿ ಜಾರಿ ಮಾಡುವ, ಸರ್ಕಾರ ರೈತರ ಸಹಾಯಕ್ಕೆ ಬರುವ ಒಂದೇ ಒಂದು ಮಾತೂ ಸಹ ಇದರಲ್ಲಿ ಇಲ್ಲ. ಇದು ನಮಗೆ ಅಪಾರ ನೋವು ಮತ್ತು ಆಘಾತ ತಂದಿದೆ. ಇದಕ್ಕೆ ಕೂಡಲೇ ಸರ್ಕಾರ ಉತ್ತರ ನೀಡಲೇಬೇಕಿದೆ ಎಂದು ಕರ್ನಾಟಕ ರೈತ ಸಂಘಟನೆಗಳು ಒತ್ತಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...