ರಸಗೊಬ್ಬರ ಬಿಕ್ಕಟ್ಟು | ಕೃಷಿ ಸಚಿವರ ಪ್ರತಿಕೃತಿಗೆ ಬೆಂಕಿ ಇಟ್ಟು ಪ್ರತಿಭಟಿಸಿದ ಜೆಡಿಎಸ್‌ ಕಾರ್ಯಕರ್ತರು

Date:

ರಾಜ್ಯ ಕಾಂಗ್ರೆಸ್‌ ಸರಕಾರ ʼಎʼ ಖಾತಾ ʼಬಿʼ ಎಂದು ರಾಜಧಾನಿಯ ಜನರನ್ನು ಒಂದೆಡೆ ವಂಚಿಸುತ್ತಿದ್ದರೆ ಮತ್ತೊಂದು ಕಡೆ ಸಮಯಕ್ಕೆ ಸರಿಯಾಗಿ ಯೂರಿಯಾ ಪೂರೈಕೆ ಮಾಡದೇ ರೈತರಿಗೂ ಮೋಸ ಮಾಡುತ್ತಿದೆ ಎಂದು ಜೆಡಿಎಸ್‌ ಆಕ್ರೋಶ ವ್ಯಕ್ತಪಡಿಸಿದೆ.

ಜೆಡಿಎಸ್‌ ನಗರ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಹೆಚ್.ಎಂ. ರಮೇಶ್‌ ಗೌಡ ಅವರ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‌ ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದ ಜೆಡಿಎಸ್‌ ಕಾರ್ಯಕರ್ತರು ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರ ಪ್ರತಿಕೃತಿ ದಹನ ಮಾಡಿದರು. ಬಳಿಕ ಖಾತಾ ಬದಲಾವಣೆ ವಂಚನೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಬಿಬಿಎಂಪಿಯನ್ನು ಆಗ್ರಹಿಸಿದರು.

ಅಲ್ಲದೆ, ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್‌ ಅವರಿಗೆ ಮನವಿ ಸಲ್ಲಿಸಿ, ತಕ್ಷಣವೇ ಖಾತ ವಂಚನೆಯನ್ನು ನಿಲ್ಲುಸವಂತೆ ಆಗ್ರಹಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್‌ ಗೌಡ, “ಬಿ ಖಾತಾದಿಂದ ಎ ಖಾತ ಮಾಡುವ ಕ್ರಮಕ್ಕೆ ಕಾನೂನಿನಲ್ಲಿಯೇ ಅವಕಾಶ ಇಲ್ಲ. ಕೇವಲ ಜನರ ಹಣ ಲೂಟಿ ಮಾಡಲಿಕ್ಕಾಗಿಯೇ ಇದನ್ನು ಮಾಡಲಾಗುತ್ತಿದೆ. ಜನರಿಗೆ ಮಂಕುಬೂದಿ ಎರಚಿ ಸಾವಿರಾರು ಕೋಟಿ ರೂಪಾಯಿಗಳನ್ನು ಲೂಟಿ ಮಾಡುವ ಹುನ್ನಾರ ನಡೆಸಲಾಗಿದೆ” ಎಂದು ಆರೋಪ ಮಾಡಿದರು.

“ಖಾತಾಗೆ ಬದಲಾವಣೆ ಎನ್ನುವುದೇ ದೊಡ್ಡ ಬೋಗಸ್‌ ಎಂದಿರುವ ಅವರು, ನ್ಯಾಯಾಲಯದಲ್ಲಿ ಈ ಸರಕಾರ ಛೀಮಾರಿ ಹಾಕಿಸಿಕೊಳ್ಳುವುದು ಖಚಿತ. ಈ ಹಿಂದೆ ಒಂದು ಚದರ ಮೀಟರಿಗೆ 13,800 ರೂಪಾಯಿ ತೆರಿಗೆಯನ್ನು ಬಿಬಿಎಂಪಿಯಿಂದ ವಿಧಿಸಲಾಗುತ್ತಿತ್ತು. ಕಾಂಗ್ರೆಸ್‌ ಸರಕಾರ ಈ ತೆರಿಗೆಯನ್ನು 1000% ಏರಿಕೆ ಮಾಡಿದೆ. ಅಂದರೆ 3ರಿಂದ 6 ಲಕ್ಷ ರೂಪಾಯಿವರೆಗೂ ಹೆಚ್ಚಿಸಿದೆ. ಜನರಿಂದ ಇಷ್ಟೊಂದು ಹಣ ಕಟ್ಟಲು ಸಾಧ್ಯವೇ” ಎಂದು ಪ್ರಶ್ನಿಸಿದರು.

ಸರಕಾರಕ್ಕೆ ಚೆಲ್ಲಾಟ, ರೈತರಿಗೆ ಪ್ರಾಣ ಸಂಕಟ

“ರಾಜ್ಯದ ಎಲ್ಲಾ ವರ್ಗದ ಜನರ ಜೊತೆ ಚೆಲ್ಲಾಟವಾಡಿದಂತೆ ಕಾಂಗ್ರೆಸ್‌ ಸರಕಾರವು ರೈತರ ಜತೆಯೂ ಆಟವಾಡುತ್ತಿದೆ. ಉತ್ತಮ ಮಳೆಯಾಗಿ ಬಿತ್ತನೆ ಚಟುವಟಿಕೆ ಆರಂಭವಾಗುವುದಕ್ಕೆ ಸರಿಯಾಗಿ ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಲಾಗಿದೆ. ಇದಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರೇ ಕಾರಣ. ಈ ಕಾರಣಕ್ಕಾಗಿಯೇ ಅವರ ಪ್ರತಿಕೃತಿ ದಹನ ಮಾಡಿದ್ದೇವೆ” ಎಂದು ರಮೇಶ್‌ ಗೌಡ ದೂರಿದರು.

“ಸೊಸೈಟಿಗಳ ಮೂಲಕ ರೈತರಿಗೆ ನ್ಯಾಯಯುತವಾಗಿ ಸಿಗಬೇಕಿದ್ದ ರಸಗೊಬ್ಬರ ದಲ್ಲಾಳಿಗಳ ಮೂಲಕ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಕೇವಲ ಗ್ಯಾರಂಟಿಗಳಿಂದ ಜನರಿಗೆ ಟೋಪಿ ಹಾಕುತ್ತಿರುವ ಸರಕಾರ ಅದೇ ಅನ್ನ ಕೊಡುವ ರೈತನಿಗೇ ಮೋಸ ಮಾಡುತ್ತಿದೆ” ಎಂದು ಅವರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎ. ತಿಪ್ಪೇಸ್ವಾಮಿ, ನಗರದ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಸಂತೋಷ್ ರಾವ್, ಬಿಬಿಎಂಪಿ ಮಾಜಿ ವಿರೋಧ ಪಕ್ಷದ ನಾಯಕ ಟಿ.ತಿಮ್ಮೇಗೌಡ, ಮಾಜಿ ಉಪ ಮಹಾಪೌರ ಶ್ರೀರಾಮೇಗೌಡ, ಬಿಬಿಎಂಪಿ ಮಾಜಿ ಸದಸ್ಯ ಎಂ. ಮುನಿಸ್ವಾಮಿ, ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಅಧ್ಯಕ್ಷ ಟಿ.ಆರ್. ತುಳಸಿರಾಮ್, ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಅಧ್ಯಕ್ಷ ವಿ.ನಾಗೇಶ್ವರರಾವ್, ಬೆಂಗಳೂರು ನಗರ ಯುವ ಘಟಕದ ಅಧ್ಯಕ್ಷ ಸ್ಯಾಮುಯಲ್ ಇನ್ನಿತರ ಮುಖಂಡರು, ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...