ಪೊಲೀಸ್ ಇಲಾಖೆಯ 4,115 ಹುದ್ದೆಗಳ ನೇಮಕಾತಿಗೆ ಗ್ರೀನ್‌ ಸಿಗ್ನಲ್

Date:

ಸರ್ಕಾರಿ ಹುದ್ದೆಗಾಗಿ ನಿರಂತರ ಅಭ್ಯಾಸ ಮಾಡುತ್ತಿದ್ದ ಅಭ್ಯರ್ಥಿಗಳಿಗೆ ಆರ್ಥಿಕ ಇಲಾಖೆ ಗುಡ್‌ನ್ಯೂಸ್‌ ನೀಡಿದೆ. ಪೊಲೀಸ್‌ ಇಲಾಖೆಯ 4,115 ಪೊಲೀಸ್‌ ಹುದ್ದೆಗಳಿಗೆ ನೇಮಕಾತಿ ನಡೆಸಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಶೀಘ್ರದಲ್ಲೇ, ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.

ಕಳೆದ 2 ವರ್ಷಗಳಲ್ಲಿ ಭರ್ತಿಯಾಗದೆ ಉಳಿದಿದ್ದ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅನುಮೋದನೆ ದೊರೆತಿರುವ 4,115 ಹುದ್ದೆಗಳಲ್ಲಿ 3,500 ಪೊಲೀಸ್ ಕಾನ್‌ಸ್ಟೆಬಲ್, 615 ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಅನುಮೋದಿತ ಹುದ್ದೆಗಳ ಪೈಕಿ, 2,000 ಸಶಸ್ತ್ರ ಪೊಲೀಸ್‌ ಕಾನ್‌ಸ್ಟೆಬಲ್ (ಸಿಎಆರ್/ಡಿಎಆರ್) ಹುದ್ದೆಗಳು, 1,500 ವಿಶೇಷ ಮೀಸಲು ಪೊಲೀಸ್‌ ಕಾನ್‌ಸ್ಟೆಬಲ್ (ಕೆಎಸ್‌ಆರ್‌ಪಿ) ಹುದ್ದೆಗಳು ಹಾಗೂ 615 ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹುದ್ದೆಗಳ ನೇಮಕಾತಿಗೆ ಇನ್ನು ಮೂರು ತಿಂಗಳ ಒಳಗಾಗಿ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಸಿಎಆರ್/ಡಿಎಆರ್ ಹಾಗೂ ಕೆಎಸ್‌ಆರ್‌ಪಿ ಹುದ್ದೆಗಳಿಗೆ ವಿದ್ಯಾರ್ಹತೆಯು ಎಸ್‌ಎಸ್‌ಎಲ್‌ಸಿ ಮತ್ತು ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಯಾವುದಾದರೂ ಪದವಿ ಪಡೆದಿರಬೇಕು.

ಅಲ್ಲದೆ, ಸಿಎಆರ್/ಡಿಎಆರ್ ಹಾಗೂ ಕೆಎಸ್‌ಆರ್‌ಪಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಮತ್ತು 25 ವರ್ಷ ಮೀರಿರಬಾರದು. ಎಸ್‌ಸಿ, ಎಸ್‌ಟಿ, ಒಬಿಸಿ ಅಭ್ಯರ್ಥಿಗಳಿಗೆ 2 ವರ್ಷ ವಯೋಮಿತಿ ಸಡಿಲಿಕೆ ಇದ್ದು, 27 ವರ್ಷ ವಯಸ್ಸಿನ ಒಳಗಿನವರು ಅರ್ಜಿ ಸಲ್ಲಿಸಬಹುದು. ಜೊತೆಗೆ, ಬುಡಕಟ್ಟು ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷದವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...