ಕಲಬುರಗಿ ಸೆಂಟ್ರಲ್ ಜೈಲಿನ ಅಧೀಕ್ಷಕಿಗೆ ಬೆದರಿಕೆ : 9 ಕೈದಿಗಳ ವಿರುದ್ಧ ಎಫ್‌ಐಆರ್‌

Date:

ಕಲಬುರಗಿಯ ಕೇಂದ್ರ ಕಾರಾಗೃಹದ ಅಧೀಕ್ಷಕಿ ಅನಿತಾ ಅವರ ಕಾರನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿ 9 ಕೈದಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮುಸ್ತಫಾ, ನಸೀರ್, ಬಚ್ಚನ್, ಅಲ್ತಾಫ್, ದೇವರಾಜ್, ನಾಗರಾಜ್, ಶ್ರೀಕಾಂತ್ ಸೇರಿ 9 ಕೈದಿಗಳ ವಿರುದ್ಧ ಅಧೀಕ್ಷಕಿ ಅನಿತಾ ಅವರು ಎಫ್‌ಐಆರ್‌ ದಾಖಲಿಸಿದ್ದಾರೆ.

ಜೈಲಿನಲ್ಲಿ ಬೀಡಿ, ಗುಟ್ಕಾ ಸಿಗರೇಟ್ ಬಂದ್ ಮಾಡಿದ್ದಕ್ಕೆ ಅನಿತಾ ವಿರುದ್ಧ ಕೈದಿಗಳು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ದುಷ್ಕರ್ಮಿಯೊಬ್ಬನಿಂದ ಆಡಿಯೋ ರೂಪದಲ್ಲಿ ಬೆದರಿಕೆ ಸಂದೇಶ ಬಂದಿತ್ತು. ಇದನ್ನು ಜೈಲಿನಲ್ಲಿರುವ ಕೈದಿಗಳೇ ಕಳುಹಿಸಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿತ್ತು. ಇದೀಗ ಈ ಪ್ರಕರಣದ ಹಿಂದೆ 9 ಜನ ಕೈದಿಗಳ ಕೈವಾಡ ಇರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | 1991ರ ಕಾನೂನನ್ನು ಕಡೆಗಣಿಸುತ್ತವೆ ಧಾರ್ಮಿಕ ಸ್ಥಳಗಳ ಸಮೀಕ್ಷೆ ಮತ್ತು ದಾವೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಬುರಗಿ ಸೆಂಟ್ರಲ್ ಜೈಲಿನ ಅಧೀಕ್ಷಕಿ ಅನಿತಾ ಅವರ ಕಾರನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಯೊಬ್ಬ ಆಡಿಯೋ ಸಂದೇಶ ಕಳುಹಿಸಿದ್ದ ಪ್ರಕರಣ ಇದೇ ನವೆಂಬರ್‌ 28ರಂದು ಬೆಳಕಿಗೆ ಬಂದಿತ್ತು. ಅನಾಮಧೇಯ ವ್ಯಕ್ತಿಯಿಂದ ಕಲಬುರಗಿ ನಗರದ ಪೊಲೀಸ್ ಇನ್ಸೆಪೆಕ್ಟರ್ ಮೊಬೈಲ್‍ಗೆ ಬೆದರಿಕೆ ಸಂದೇಶ ಬಂದಿತ್ತು. ಈ ಮಾಹಿತಿಯನ್ನು ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಇದರಿಂದ ಅಲರ್ಟ್ ಆದ ಅಧಿಕಾರಿಗಳು ಕಾರನ್ನು ಸಿಸಿಟಿವಿ ಇರುವೆಡೆ ಮಾತ್ರ ಪಾರ್ಕ್ ಮಾಡುವಂತೆ ಕಾರು ಚಾಲಕನಿಗೆ ಸೂಚಿಸಿದ್ದರು.

ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೆ ಕಲಬುರಗಿ ಜೈಲಿಗೆ ಅನಿತಾ ಅವರು ವರ್ಗಾವಣೆಯಾಗಿ ಬಂದಿದ್ದರು. ಜೈಲಿನಲ್ಲಿ ಅಧಿಕಾರ ವಹಿಸಿಕೊಂಡ ದಿನವೆ ಕೈದಿಗಳ ವಿಲಾಸಿ ಜೀವನ ಅನಾವರಣ ಆಗಿತ್ತು. ಇದನ್ನು ಗಂಭೀರವಾಗಿ ಅವರು ಪರಿಗಣಿಸಿದ್ದರು. ಇದಾದ ಬಳಿಕ ಕಾರಾಗೃಹ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿತ್ತು. ಜೈಲಿನಲ್ಲಿ ಬೀಡಿ, ಗುಟ್ಕಾ ಸಿಗರೇಟ್ ಬಂದ್ ಮಾಡಿದ್ದರು. ಇದರಿಂದ ಕೆರಳಿದ ಕೈದಿಗಳು ಅನಿತಾ ವಿರುದ್ಧ ಪ್ರತಿಭಟನೆ ಮಾಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...