ʼಮುಸ್ಲಿಮ್, ಕ್ರಿಶ್ಚಿಯನ್ ಗುಂಪುಗಳನ್ನು ಕೊಚ್ಚಿ ಹಾಕಿʼ ಹೇಳಿಕೆ: ಆತ್ಮಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲು

Date:

ದೇಶದಲ್ಲಿ ಸನಾತನ ಧರ್ಮವೊಂದೇ ಇರುವುದು, ಉಳಿದೆಲ್ಲವೂ ಗುಂಪುಗಳಷ್ಟೇ. ಮುಸ್ಲಿಮ್ ಹಾಗೂ ಕ್ರಿಶ್ಚಿಯನ್ ಗುಂಪುಗಳನ್ನು ವರ್ತಮಾನದ ಆಯುಧಗಳನ್ನು ಹಿಡಿದು ನಾಶಪಡಿಸಿ, ಕೊಲ್ಲಿ ಎಂದು ಬೆಂಗಳೂರಿನ ಸಮರ್ಥ ಶ್ರೀಧರರಾಶ್ರಮ ಟ್ರಸ್ಟ್‌ನ ಆತ್ಮಾನಂದ ಸರಸ್ವತಿ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ಈ ಸಂಬಂಧ ಅವರ ವಿರುದ್ಧ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಸ್ವಾಮೀಜಿಯ ವಿವಾದಾತ್ಮಕ ಹೇಳಿಕೆಯ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿತ್ತು. ಈ ವರದಿ ಆಧಾರದಲ್ಲಿ ಪೊಲೀಸರು ಆತ್ಮಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಸುವೋಮೋಟೋ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆ 2023‌ – 196(1), 351(2) ಅಡಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಥಗ್ ಲೈಫ್ ಸಿನಿಮಾ ನಿಷೇಧ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ದುಷ್ಟರನ್ನು ನಾಶಪಡಿಸುವುದಕ್ಕೆಂದೇ ಹಿಂದೂ ಧರ್ಮವಿದೆ. ಆದ್ದರಿಂತ ಯಾವುದೇ ಕರುಣೆಯಿಲ್ಲದೆ ದುಷ್ಟರನ್ನು ಕೊಲ್ಲಬೇಕು. ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಸ್ವಾಮೀಜಿ ಹೇಳಿದ್ದರು.

ಮುಸ್ಲಿಮ್ ಹಾಗೂ ಕ್ರಿಶ್ಚಿಯನ್ ಗುಂಪುಗಳನ್ನು ದಯೆಯಿಲ್ಲದೆ ಕೊಚ್ಚಿ ಹಾಕಿ. ಇಂತಹವರು ನಮ್ಮ ದೇಶ, ಧರ್ಮವನ್ನು ಶಾಂತಿಯಾಗಿರಲು ಬಿಡುವುದಿಲ್ಲ. ಹಿಂದಿನ ಮಹಾನಾಯಕರು ದಯೆ ಇಟ್ಟುಕೊಂಡು ಇಂತಹವನ್ನು ಕೊಲ್ಲದೆ ಬಿಟ್ಟರು. ಈಗಿದು ಮುಗಿದುಹೋಗಬೇಕು, ಪುನಃ ಮಹಾಭಾರತ ಆಗುವ ಅವಶ್ಯಕತೆಯಿಲ್ಲ. ಪುನಃ ಸಮರ್ಥರು ಬರಬೇಕು ಅಥವಾ ಶಿವಾಜಿ ಬರಬೇಕು ಎಂಬ ಅವಶ್ಯಕತೆಯಿಲ್ಲ. ನಾವೇ ಪ್ರತಿಯೊಬ್ಬರೂ ಶಿವಾಜಿಯಾಗಿ ಹೊರಬರಬೇಕು. ನಾನು ಹಿಂದೂ ಸಮಾಜಕ್ಕೆ ಕರೆ ಕೊಡುತ್ತಿದ್ದೇನೆ ಎಂದೂ ಪ್ರಚೋದಾನಾಕಾರಿ ಹೇಳಿಕೆ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...