ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸಿದ ಹೈಕೋರ್ಟ್ ವಿಭಾಗೀಯ ಪೀಠ

Date:

ಕರ್ನಾಟಕ ಹೈಕೋರ್ಟ್​​ ಇದೇ ಮೊದಲ ಬಾರಿಗೆ ಪ್ರಕಣವೊಂದರ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದೆ. ನಿನ್ನೆ (ಡಿಸೆಂಬರ್ 11) ಭಾರತ ಭಾಷಾ ದಿನದ ಪ್ರಯುಕ್ತ ಸಾಂಕೇತಿಕವಾಗಿ ಇಂದು (ಡಿಸೆಂಬರ್ 12) ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್, ನ್ಯಾಯಮೂರ್ತಿ ಸಿ ಎಂ ಜೋಶಿ ಅವರಿದ್ದ ವಿಭಾಗೀಯ ಪೀಠ, ನಂಜಾವಧೂತ ಸ್ವಾಮಿ ವಿರುದ್ಧ ಎಸ್.ಲಿಂಗಣ್ಣ ಪ್ರಕರಣದಲ್ಲಿ ಕನ್ನಡದಲ್ಲೇ ತೀರ್ಪು ನೀಡಿದೆ.

ತುಮಕೂರಿನ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯಲ್ಲಿರುವ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ನಂಜಾವಧೂತ ಸ್ವಾಮೀಜಿ ವಿರುದ್ಧ ಎಸ್‌ ಲಿಂಗಣ್ಣ ಎನ್ನುವರು ಸಲ್ಲಿಸಿದ್ದ ಮೂಲ ಮೇಲ್ಮನವಿಯನ್ನು ಪೀಠ ಪುರಸ್ಕರಿಸಿದೆ. ಈ ಪ್ರಕರಣದ ತೀರ್ಪನ್ನು ಇಂಗ್ಲಿಷ್‌ ಮತ್ತು ಕನ್ನಡದಲ್ಲಿ ಪ್ರತ್ಯೇಕವಾಗಿ ನ್ಯಾಯಮೂರ್ತಿಗಳು ಬರೆದಿದ್ದಾರೆ. ತೀರ್ಪಿನ ಕಾರ್ಯಕಾರಿ ಭಾಗವನ್ನು ನ್ಯಾ. ದೀಕ್ಷಿತ್‌ ಅವರು ಕನ್ನಡದಲ್ಲಿ ಓದುವ ಮೂಲಕ ಗಮನಸೆಳೆದರು.

ಕನ್ನಡದಲ್ಲೇ ತೀರ್ಪನ್ನು ಓದಿದ ನಂತರ ನ್ಯಾ. ದೀಕ್ಷಿತ್‌ ಅವರು, ಇಂಗ್ಲೆಂಡ್​ನಲ್ಲಿ 1730ರವರೆಗೆ ಲ್ಯಾಟಿನ್ ಭಾಷೆಯಲ್ಲಿ ಕೋರ್ಟ್ ಕಲಾಪ ನಡೆಯುತ್ತಿತ್ತು. 1730ರಿಂದ ಅವರ ಮಾತೃಭಾಷೆ ಇಂಗ್ಲಿಷ್‌​ನಲ್ಲೇ ಕಲಾಪ ಆರಂಭಿಸಿದ್ದರು. ಆದರೆ, ಜನಸಾಮಾನ್ಯರಿಗೆ ಕೋರ್ಟ್​ಗಳ ತೀರ್ಪು ಏನಿದೆ ಎಂದು ತಿಳಿಯಬೇಕೆಂದು ಈ ಉಪಕ್ರಮ. ಕನ್ನಡ ಅವಸಾನವಾಗಬಾರದೆಂದರೆ ಕನ್ನಡಕ್ಕೆ ಮಾನ್ಯತೆ ಸಿಗಬೇಕು. ಸಾಂವಿಧಾನಿಕ ಸಂಸ್ಥೆಗಳು ಕನ್ನಡದಲ್ಲೇ ವ್ಯವಹರಿಸುವಂತಾಗಬೇಕು ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉತ್ತರ ಕರ್ನಾಟಕ ಜನತೆಯ ಆಶೋತ್ತರಗಳು ಈ ಬಾರಿಯಾದರೂ ಈಡೇರಲಿ

ಮೊದಲಿಗೆ ಇಂಗ್ಲಿಷ್‌ನಲ್ಲಿ ತೀರ್ಪು ಓದಿದ ನ್ಯಾ. ದೀಕ್ಷಿತ್‌ ಅವರು ಆನಂತರ ಕನ್ನಡದಲ್ಲಿ ಓದಿದರು. ಮೇಲ್ಕಾಣಿಸಿದ ಕಾರಣಗಳಿಂದಾಗಿ ಈ ಮೇಲ್ಮನವಿಯನ್ನು ಪುರಸ್ಕರಿಸಲಾಗಿದೆ. ಏಕಸದಸ್ಯ ನ್ಯಾಯಾಧೀಶರ ಪ್ರಶ್ನಿತ ತೀರ್ಪು ಮತ್ತು ಆದೇಶವನ್ನು ರದ್ದುಗೊಳಿಸಲಾಗಿದೆ. ಪ್ರತಿವಾದಿಗಳು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಲಾಗಿದೆ. ತತ್ಪರಿಣಾಮವಾಗಿ ಟಿಒಎಸ್‌ ಸಂಖ್ಯೆ 1/2023ರಲ್ಲಿ ಮೇಲ್ಮನವಿದಾರರ ದಾವೆಯನ್ನು ಪುನರುಜ್ಜೀವನಗೊಳಿಸಲಾಗಿದೆ. ಅದನ್ನು ಕಾನೂನು ರೀತ್ಯಾ ವಿಚಾರಣೆ ಮತ್ತು ವಿಲೇವಾರಿ ಮಾಡಬೇಕಾಗುತ್ತದೆ. ಯಾರೂ ವೆಚ್ಚವನ್ನು ಭರಿಸುವಂತಿಲ್ಲ ಎಂದರು.

ಆನಂತರ ವಕೀಲರೊಬ್ಬರು ಇದು ಸಾಮಾನ್ಯ ಜನರಿಗೆ ಅರ್ಥವಾಗುತ್ತದೆ. ನ್ಯಾಯಮೂರ್ತಿಗಳ ಈ ತೀರ್ಪು ಇತರ ನ್ಯಾಯಮೂರ್ತಿಗಳಿಗೂ ಉತ್ತಮ ಸಂದೇಶ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದಕ್ಕೆ ನ್ಯಾ. ದೀಕ್ಷಿತ್‌ ಅವರು ಹೌದು, ಸಾಮಾನ್ಯ ಜನರಿಗೆ ಅರ್ಥವಾಗಬೇಕು. ಇಂಗ್ಲಿಷ್‌ ಅಥವಾ ಅವರಿಗೆ ತಿಳಿಯದ ಭಾಷೆಯಲ್ಲಿ ಹೇಳಿದರೆ ಆಗದು. ನಾವು ನಮ್ಮ ಕೆಲಸ ಮಾಡಿದ್ದೇವೆ ಎಂದು ಹೇಳಿದರು.

ಈ ಹಿಂದೆ ನ್ಯಾ. ಅರಳಿ ನಾಗರಾಜ್‌ ಅವರು ಸಹ ಕನ್ನಡದಲ್ಲಿಯೇ ತೀರ್ಪು ನೀಡುವ ಮೂಲಕ ನಾಡಿನ ಗಮನ ಸೆಳೆದಿದ್ದರು. ಆದರೆ, ಅವರ ಕನ್ನಡ ತೀರ್ಪು ಇಂಗ್ಲಿಷ್‌ ತೀರ್ಪಿನ ಅನುವಾದವಾಗಿತ್ತು. ಎರಡೂ ತೀರ್ಪುಗಳನ್ನು ಮೂಲ ತೀರ್ಪೆಂದು ಪರಿಗಣಿಸಬೇಕೆಂದು ಅವರು ಆ ವೇಳೆ ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...