ಕೆರೆಗಳಲ್ಲೂ ಮೀನುಗಾರಿಕೆಗೆ ಅವಕಾಶ: ಡಿಸಿಎಂ ಡಿ ಕೆ ಶಿವಕುಮಾರ್

Date:

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುತ್ತಿದ್ದು, ಈ ಕೆರೆಗಳಲ್ಲಿ ಮೀನುಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ. ಮೀನುಗಾರರಿಗೆ ಅಗತ್ಯ ಪ್ರೋತ್ಸಾಹ ನೀಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರ ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯ ಮೇಳದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ 10 ಸಾವಿರಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದೇವೆ. ಈ ಕೆರೆಗಳಿಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ ವಿದ್ಯುತ್ ಇಲಾಖೆಗೆ 3 ಸಾವಿರ ಕೋಟಿಯಷ್ಟು ಮೊತ್ತ ಪಾವತಿಸಬೇಕಾಗಿದೆ. ಈ ಕೆರೆಗಳ ಪೈಕಿ ಸಣ್ಣ ಕೆರೆಗಳನ್ನು ಸೊಸೈಟಿಗಳಿಗೆ ಜವಾಬ್ದಾರಿ ನೀಡುತ್ತೇವೆ. ಉಳಿದ ಕೆರೆಗಳನ್ನು ಹರಾಜು ಪ್ರಕ್ರಿಯೆ ಮೂಲಕ ಮೀನುಗಾರಿಕೆ ಮಾಡಲು ಅವಕಾಶ ನೀಡಲಾಗುವುದು. ಇದನ್ನು ಬಳಸಿಕೊಂಡು ನೀವು ಮೀನುಗಾರಿಕೆ ವೃತ್ತಿ ಮಾಡಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ

“ಮೀನು ಎಂದರೆ ಲಕ್ಷ್ಮಿ. ರೈತರು ಭೂಮಿಯಲ್ಲಿ ಕೃಷಿ ಮಾಡಿದರೆ, ಮೀನುಗಾರರು ನೀರಿನಲ್ಲಿ ಕೃಷಿ ಮಾಡುತ್ತೀರಿ. ನಿಮ್ಮ ಪ್ರಾಣವನ್ನು ಪಣಕ್ಕಿಟ್ಟು ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತೀರಿ. ನಿಮಗೆ ಸೂರ್ಯ, ಚಂದ್ರ ಎರಡೇ ಕಾಣುವುದು. ಉಳಿದಂತೆ ನಿಮ್ಮ ಆತ್ಮಬಲದಿಂದ ಇದನ್ನು ಮಾಡಿಕೊಂಡು ಬರುತ್ತಿದ್ದೀರಿ. ಮೀನು ಹಿಡಿಯುವುದು ಬೇರೆ, ಮಾರಾಟ ಮಾಡುವುದು ಬೇರೆ. ನಾನು ಮುಖ್ಯಮಂತ್ರಿಗಳಿಗೆ ಮಶೀರ್ ಫಿಶ್ ತೋರಿಸಿದೆ. ನಾನು ಸಣ್ಣವನಿದ್ದಾಗ ಸಂಗಮಕ್ಕೆ ಹೋಗಿ ಮೀನು ಹಿಡಿಯುತ್ತಿದ್ದೆ. ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ. ಅದಕ್ಕೆ ಬಹಳ ತಾಳ್ಮೆ ಬೇಕು. ಈ ಮೀನು ವ್ಯವಹಾರ ಜಾತಿ ಮೇಲೆ ಇಲ್ಲ, ನೀತಿ, ಛಲ ಹಾಗೂ ಆಸಕ್ತಿ ಮೇಲಿದೆ. ಮೀನುಗಾರನಿಗೆ ನಿತ್ಯ ಮೀನು ಸಿಗುವುದಿಲ್ಲ. ಕೆಲವೊಮ್ಮೆ ವಾರವಾದರೂ ಒಂದು ಮೀನು ಸಿಗುವುದಿಲ್ಲ. ಅಂತಹ ತಾಳ್ಮೆ ವೃತ್ತಿ ನಡೆಸುತ್ತಿರುವ ನೀವು ಶ್ರಮಜೀವಿಗಳು” ಎಂದು ಬಣ್ಣಿಸಿದರು.

ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ

“ನಿಮಗೆ ವಿಶ್ವ ಮೀನುಗಾರಿಕೆ ದಿನದ ಶುಭಾಶಯಗಳು. ನಿಮಗೆ ಒಳ್ಳೆಯದಾಗಲಿ. ಮುಂದಿನ ದಿನಗಳಲ್ಲಿ ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು. ಮೀನುಗಾರಿಕೆಗೆ ಉತ್ತೇಜ ನೀಡಲು ಕಾರ್ಯಕ್ರಮ ರೂಪಿಸಲಾಗುವುದು. ನಾವು ನಿಮ್ಮ ಜೊತೆಗೆ ಇದ್ದೇವೆ” ಎಂದು ತಿಳಿಸಿದರು.

“ನೀವು ಗಂಗಾ ಪುತ್ರರು. ಇಂತಹ ಯೋಗ ಎಲ್ಲರಿಗೂ ಬರುವುದಿಲ್ಲ. ಗಂಗಾ ಪುತ್ರ ಭೀಷ್ಮನ ಪ್ರತಿಜ್ಞೆ ಎಂದರೆ ಅದಕ್ಕೆ ಆದ ಘನತೆ ಇದೆ. ನೀವು ನೀರಿನಲ್ಲಿ ಕೆಲಸ ಮಾಡಿ ಸಮಾಜಕ್ಕೆ ಸೇವೆ ಮಾಡುತ್ತಿದ್ದೀರಿ. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...