ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ನಿಧನ

Date:

ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ (79) ನಿಧನರಾಗಿದ್ದಾರೆ.

ಅನಾರೋಗ್ಯ ಕಾರಣದಿಂದ ಕಳೆದ ನಾಲ್ಕು ದಿನಗಳಿಂದ ತುಮಕೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇದೀಗ ಕೊನೆಯುಸಿರೆಳೆದಿದ್ದಾರೆ.

ಮೃತರಿಗೆ ಪತ್ನಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅರವಿಂದಗೌಡ ಪಾಟೀಲ್ ಸೇರಿದಂತೆ ಒಟ್ಟು ನಾಲ್ಕು ಜನ ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ. ಯಲಬುರ್ಗಾ ಪಟ್ಟಣದ ಅವರ ನಿವಾಸದಲ್ಲಿ ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಬೆಳಿಗ್ಗೆ 9ರ ತನಕ ಪಾರ್ಥಿವ ಶರೀರದ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ. ನಂತರ ಸ್ವಗ್ರಾಮ ಹುಣಸಿಹಾಳ ಗ್ರಾಮದಲ್ಲಿ ಗುರುವಾರ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಶಾಸಕ ಶಿವಶರಣಪ್ಪಗೌಡರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯಿಲಿ, ಧರ್ಮಸಿಂಗ್, ದೇವರಾಜು ಅರಸು, ಎಸ್.ಎಂ.ಕೃಷ್ಣ, ಮಾಜಿ ಸಂಸದ ಎಚ್.ಜಿ.ರಾಮುಲು ಜೊತೆ ನಿಕಟ ಭಾಂದವ್ಯ ಹೊಂದಿದ್ದರು.

ಶಿವಶರಣಗೌಡ ಪಾಟೀಲ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಮೊದಲು ಎರಡು ಸಲ ಪರಾಭಗೊಂಡಿದ್ದರು. ನಂತರ 1999ರಿಂದ 2004ರ ವರೆಗೆ ಶಾಸಕರಾಗಿದ್ದರು. ಇದಕ್ಕೂ ಮೊದಲು ಅವರು ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...