ಬೆಂ.ಗ್ರಾ | ಬಡ್ತಿಗಾಗಿ ಸುಳ್ಳು ಜಾತಿ ಪ್ರಮಾಣಪತ್ರ; ಸಿಕ್ಕಿಬಿದ್ದ ಮಾಜಿ ಶಾಸಕರ ಪತ್ನಿ

Date:

ಕಾಲೇಜಿನ ಬಡ್ತಿ ಪಡೆಯಲು ಮಾಜಿ ಶಾಸಕರ ಪತ್ನಿಯೊಬ್ಬರು ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ್ದು, ಇದೀಗ ಸಿಕ್ಕಿಬಿದ್ದಿದ್ದಾರೆ. ಅವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ಮಾಜಿ ಶಾಸಕ ಡಾ. ಕೆ ಶ್ರೀನಿವಾಸಮೂರ್ತಿ ಅವರ ಪತ್ನಿ ಡಾ. ಸುಜಾ ಕೆ ಶ್ರೀಧರ್‌ ಅವರು ಸುಳ್ಳು ಜಾತಿ ಪ್ರಮಾಣಪತ್ರ ನೀಡಿ ಸಿಕ್ಕಿಬಿದ್ದಿದ್ದಾರೆ.

ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಬಡ್ತಿ ಪಡೆಯಲು ಡಾ. ಸುಜಾ ಅವರು ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಅದೇ ಕಾಲೇಜಿನ ಮತ್ತೋರ್ವ ಉಪನ್ಯಾಸಕಿ ಡಾ. ಜಿ.ಎನ್‌ ಶಕುಂತಲಾ ಅವರಿಗೆ ಬಡ್ತಿ ದೊರೆತಿತ್ತು. ಆದರೆ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಡಾ. ಕೆ ಶ್ರೀನಿವಾಸಮೂರ್ತಿ ಅವರು ತಮ್ಮ ಪ್ರಭಾವ ಬಳಸಿ, ಶಕುಂತಲಾ ಅವರಿಗೆ ದೊರೆತಿದ್ದ ಬಡ್ತಿಯನ್ನು ತಪ್ಪಿಸಿ, ತಮ್ಮ ಪತ್ನಿಗೆ ಬಡ್ತಿ ಕೊಡಿಸಿದ್ದಾರೆ ಎಂದೂ ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡ್ತಿಯಿಂದ ವಂಚಿತರಾದ ಡಾ. ಶಕುಂತಲಾ ಅವರು ತಮಗೆ ನ್ಯಾಯ ಕೊಡಿಸಬೇಕೆಂದು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಅಧೀಕ್ಷಕ ಎಚ್.ಡಿ.ಆನಂದ್ ಕುಮಾರ್‌ ಅವರಿಗೆ ದೂರು ನೀಡಿದ್ದರು. ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ್ದ ಡಾ. ಸುಜಾ ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದರು.

ಮಾಜಿ ಶಾಸಕ ಶ್ರೀನಿವಾಸಮೂರ್ತಿ ಅವರು ದ್ರಾವಿಡ ಸಮುದಾಯಕ್ಕೆ ಸೇರಿದವರು. ಆದರೆ, ಅವರ ಪತ್ನಿ ಡಾ. ಸುಜಾ ಅವರು ಕೇರಳದ ಎಳವ ಜಾತಿಗೆ ಸೇರಿದವರು. ಮಗಳಿಗೆ ತಂದೆಯ ಜಾತಿ ಮಾತ್ರ ಅನ್ವಯಿಸುತ್ತದೆ. ಆದರೆ, ಅವರು ತಮ್ಮ ಪತಿಯ ದ್ರಾವಿಡ ಜಾತಿ (ಎಸ್‌ಸಿ) ಹೆಸರಿನಲ್ಲಿ ಜಾತಿ ಪ್ರಮಾಣಪತ್ರ ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಕರಣ ಸಂಬಂಧ ಸುಳ್ಳು ಜಾತಿ ಪ್ರಮಾಣಪತ್ರ ನೀಡಲು ಶಿಫಾರಸ್ಸು ಮಾಡಿದ ಕಂದಾಯ ನೀರೀಕ್ಷಕ, ಗ್ರಾಮ ಲೆಕ್ಕಿಗ ಹಾಗೂ ನೆಲಮಂಗಲ ತಹಶೀಲ್ದಾರ್ ವಿರುದ್ಧ ನೆಲಮಂಗಲ ಟೌನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...