ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌ ಪ್ರಯಾಣ: ಸರ್ಕಾರ ಆದೇಶ

Date:

ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಬಸ್‌ ಪ್ರಯಾಣ ಒದಗಿಸಲು ಸರ್ಕಾರ ಆದೇಶಿಸಿದೆ. ಸರ್ಕಾರದ ಅಡಿಯಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳೂ ಸರ್ಕಾರಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಒದಗಿಸಲಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ‘ಎಕ್ಸ್‌’ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಿ.ಕೆ ಶಿವಕುಮಾರ್, “ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧವಾಗಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ” ಎಂದು ಹೇಳಿದ್ದಾರೆ.

“ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅದಕ್ಕಾಗಿ ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಸರ್ಕಾರವು ಉಚಿತ ಬಸ್‌ ವ್ಯವಸ್ಥೆ ನೀಡಲಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯಾಭ್ಯಾಸ ಮಾಡುವ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಬಡವರ ಮಕ್ಕಳಿಗೆ ಶೈಕ್ಷಣಿಕವಾಗಿ, ಆರ್ಥಿಕವಾಗಿ ಬಲ ನೀಡಲು ಸರ್ಕಾರದ ಮಹತ್ವದ ಕ್ರಮ ಕೈಗೊಂಡಿದೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...