ತಾಯ್ನಾಡಿಗಾಗಿ ಸಂಗೊಳ್ಳಿ ರಾಯಣ್ಣ ನಡೆಸಿದ ಹೋರಾಟ ನಮಗೆಲ್ಲಾ ಮಾದರಿ: ಸಿಎಂ ಸಿದ್ದರಾಮಯ್ಯ

Date:

ಬ್ರಿಟೀಷರ ವಿರುದ್ಧ ಹೋರಾಡಿ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇಂದು ದೇಶಭಕ್ತರಂತೆ ಪೋಸು ಕೊಡುವವರು ಬ್ರಿಟೀಷರ ವಿರುದ್ಧ ಏಕೆ ಹೋರಾಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.

ಬೆಳಗಾವಿ ಜಿಲ್ಲೆಯ ಸಂಗೊಳ್ಳಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಬ್ರಿಟೀಷರು-ಫ್ರೆಂಚರು-ಮೊಘಲರು ನಮ್ಮ ದೇಶ ಆಳಿದ್ದು ನಮ್ಮ ನಮ್ಮನ್ನೇ ಒಡೆದು ಆಳುವ ನೀತಿಯಿಂದ ಮಾತ್ರ. ಬ್ರಿಟೀಷರ ವಿರುದ್ದ ವಿರೋಚಿತವಾಗಿ ಹೋರಾಡಿದ ಸಂಗೊಳ್ಳಿ ರಾಯಣ್ಣನನ್ನು ಬ್ರಿಟೀಷರಿಗೆ ಮೋಸದಿಂದ ಹಿಡಿದು ಕೊಟ್ಟವರು ಕೂಡ ನಮ್ಮವರೇ. ರಾಯಣ್ಣ ದೇಶಭಕ್ತಿಗೆ ಮಾದರಿಯಾದರೆ, ರಾಯಣ್ಣನನ್ನು ಮೋಸದಿಂದ ಬ್ರಿಟೀಷರಿಗೆ ಹಿಡಿದುಕೊಟ್ಟವರು ದೇಶದ್ರೋಹಿಗಳು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶಭಕ್ತಿ ಎಂದರೆ ದೇಶದ ಜನರನ್ನು ಪ್ರೀತಿಸುವುದು. ಜಾತಿ-ಧರ್ಮದ ಹೆಸರಲ್ಲಿ ದೇಶದ ಜನರನ್ನೇ ದ್ವೇಷಿಸುವವರು ದೇಶಭಕ್ತರಾಗಿರಲು ಸಾಧ್ಯವೇ ಇಲ್ಲ. ಶರಣಶ್ರೇಷ್ಠ ಬಸವಣ್ಣನವರು, ಸಂವಿಧಾನ ರಚಿಸಿದ ಅಂಬೇಡ್ಕರ್ ಅವರು ಕೂಡ ಜಾತಿ ತಾರತಮ್ಯ ಇಲ್ಲದ ಮನುಷ್ಯ ಪ್ರೇಮವನ್ನು ಸಾರಿದರು ಎಂದು ಸಿದ್ದರಾಮಯ್ಯ ವಿವರಿಸಿದರು.

ರೈತರು, ಶಿಕ್ಷಕರು, ಸೈನಿಕರು ಈ ದೇಶವನ್ನು ಒಳಗಿನಿಂದ ಮತ್ತು ಹೊರಗಿನಿಂದ ಕಾಯುತ್ತಿರುವ ಸೈನಿಕರು. ಅನ್ನ ಬೆಳೆಯುವ ರೈತ ಕೂಡ ದೇಶ ರಕ್ಷಣೆಯ ಸೈನಿಕ ಇದ್ದ ಹಾಗೆ. ರೈತರ ಏಳಿಗೆಗಾಗಿ ಹಸಿರು ಕ್ರಾಂತಿಯನ್ನು ಈ ದೇಶದಲ್ಲಿ ನಡೆಸಿದ್ದು ಕಾಂಗ್ರೆಸ್ ಪಕ್ಷ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಂಧಿ ಪ್ರಣೀತ ರಾಮನೇ ಬೇರೆ; ಮೋದಿ ರಾಮನೇ ಬೇರೆ

ಸಂಗೊಳ್ಳಿ ರಾಯಣ್ಣ ಹುಟ್ಟಿದ್ದು ಆಗಸ್ಟ್ 15. ಇದೇ ದಿನ ದೇಶಕ್ಕೆ ಸ್ವಾತಂತ್ರ್ಯ ಬಂತು. ರಾಯಣ್ಣ ಹುತಾತ್ಮ ಆಗಿದ್ದು ಜನವರಿ 26. ಇದು ಗಣರಾಜ್ಯೋತ್ಸವ ದಿನ ಎಂದು ಕಾಕತಾಳೀಯವನ್ನು ವಿವರಿಸಿದರು.

ಮನುಷ್ಯ ದ್ವೇಷ ಹರಡಿ, ಮಸೀದಿ ದ್ವಂಸ ಮಾಡಲು ಕರೆಕೊಟ್ಟ ಮೂರ್ಖರು ಈಗಲೂ ಇದ್ದಾರೆ. ಆ ಮೂರ್ಖರಿಗೆ ಚಪ್ಪಾಳೆ ತಟ್ಟಬೇಡಿ. ರಾಯಣ್ಣನ ತ್ಯಾಗ ಬಲಿದಾನಕ್ಕೆ ಚಪ್ಪಾಳೆ ತಟ್ಟೋಣ ಎಂದರು.

ಸಂಗೊಳ್ಳಿ ರಾಯಣ್ಣನ ದೇಶಭಕ್ತಿ ಮತ್ತು ಹೋರಾಟದ ಛಲ ಹಾಗೂ ತ್ಯಾಗವನ್ನು ಶಾಶ್ವತಗೊಳಿಸುವ ಕಾರಣದಿಂದ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ನಮ್ಮ ಸರ್ಕಾರದ ಅವಧಿಯಲ್ಲಿ ರಚಿಸಲಾಯಿತು. ಇದರಿಂದ ಇಡೀ ಕ್ಷೇತ್ರ ಹಲವು ದಿಕ್ಕುಗಳಿಂದ ಅಭಿವೃದ್ಧಿ ನಡೆಯುತ್ತಿದೆ. ಇಲ್ಲಿನ ಸೈನಿಕ ಶಾಲೆಗೆ ಶಂಕುಸ್ಥಾಪನೆ ನಾನೇ ನೆರವೇರಿಸಿದ್ದೆ. ಈಗ 250 ಮಕ್ಕಳು ಅಚ್ಚುಕಟ್ಟಾಗಿ ಸೈನಿಕ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕರಾದ ಮಹಂತೇಶ್ ಕೌಜಲಗಿ ಸಜ್ಜನ ಮತ್ತು ಮನುಷ್ಯ ಪ್ರೇಮದ ರಾಜಕಾರಣಿ. ಇಂಥವರು ಹೆಚ್ಚೆಚ್ಚು ರಾಜಕಾರಣಕ್ಕೆ ಬರಬೇಕು. ಮನುಷ್ಯ ದ್ವೇಷಿಗಳು ರಾಜಕಾರಣಕ್ಕೆ ಬರಬಾರದು. ಕೌಜಲಗಿ ಪ್ರತಿನಿಧಿಸುವ ಕ್ಷೇತ್ರ ಮತ್ತು ಸಂಗೊಳ್ಳಿಯ ಇಡಿ ಕ್ಷೇತ್ರ ಅಭಿವೃದ್ಧಿಗೆ ಅಗತ್ಯವಾದಷ್ಟು ಅನುದಾನವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಶಾಸಕರಾದ ಮಹಂತೇಶ್ ಕೌಜಲಗಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ಮತ್ತು ನಿರಂಜನಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು.

ಸಚಿವರಾದ ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್, ಶಿವರಾಜ್ ತಂಗಡಗಿ‌ ಜತೆಗೆ ಶಾಸಕರಾದ ಎಚ್.ವೈ.ಮೇಟಿ, ಅಶೋಕ್ ಪಟ್ಟಣ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಪ್ರಕಾಶ್ ಹುಕ್ಕೇರಿ, ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಮೋದಿ ವ್ಯಂಗ್ಯಕ್ಕೆ ಜನ ಚಪ್ಪಾಳೆ

ರಾಜ್ಯದಲ್ಲಿ ಕನ್ನಡಿಗರಿಗೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ಮೋದಿ ಅವರ ಮಾತನ್ನು ವ್ಯಂಗ್ಯವಾಡಿದ ಮುಖ್ಯಮಂತ್ರಿಗಳು ಐದಕ್ಕೆ ಐದೂ ಗ್ಯಾರಂಟಿ ಸರ್ಕಾರ ಬಂದು 7 ತಿಂಗಳಲ್ಲೇ ಜಾರಿ ಆಗಿದೆ. ರಾಜ್ಯ ಆರ್ಥಿಕವಾಗಿ ಇನ್ನಷ್ಟು ಸದೃಢವಾಗಿದೆ ಎಂದು ವಿವರಿಸಿದರು. ಮುಖ್ಯಮಂತ್ರಿಗಳ ಮಾತಿಗೆ ಸಾರ್ವಜನಿಕರು ಜೋರು ತಪ್ಪಾಳೆ ತಟ್ಟಿ ಸ್ವಾಗತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...