ಗಾಂಧಿ ಹತ್ಯೆ ದಿನ | ಮಹಾತ್ಮಾ ಗಾಂಧೀಜಿ ಮೌಲ್ಯಗಳನ್ನು ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಸಿದ್ದರಾಮಯ್ಯ

Date:

ಗಾಂಧೀಜಿಯವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ತನ್ನ ಜೀವನವೇ ಒಂದು ಸಂದೇಶ ಎಂದು ನುಡಿದಿದ್ದ ಮಹಾತ್ಮಾ ಗಾಂಧೀಜಿಯವರ ಹೋರಾಟದ ಬದುಕು ಪ್ರೇರಣಾದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದರು.

“ಜನವರಿ 30, 1948 ರಂದು ಮತಾಂಧನಾಗಿದ್ದ ನಾಥುರಾಮ್ ಗೋಡ್ಸೆ ಮಹಾತ್ಮಾ ಗಾಂಧೀಜಿಯವರನ್ನು ಹತ್ಯೆ ಮಾಡಿದ. ಗಾಂಧೀಜಿಯವರು ಇಹಲೋಕವನ್ನು ತ್ಯಜಿಸಿದ್ದರೂ, ಅವರ ಮೌಲ್ಯಗಳನ್ನು ಕೊನೆಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಸತ್ಯ, ಅಸಿಂಹೆಗಳ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ವ್ಯಕ್ತಿ. ಅಹಿಂಸಾ ಹೋರಾಟದ ನಾಯಕತ್ವ ವಹಿಸಿದ್ದರು. ಅವರು ಮೊದಲು ಭಾರತಕ್ಕೆ ಬಂದು ತಳಮಟ್ಟದಿಂದ ದೇಶವನ್ನು ಅರಿಯಲು ಪ್ರಯತ್ನಿಸಿ, ನಂತರ ದೇಶದ ಜನರನ್ನು ಬ್ರಿಟಿಷರ ದಾಸ್ಯದಿಂದ ಮುಕ್ತಗೊಳಿಸಿದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಂಧಿ ಭಾರತ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ

“1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ಈ ಅಧಿವೇಶನದ ಶತಮಾನೋತ್ಸವ ನೆನಪಿಗಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿ ಸಭೆ ನಡೆಸಿ, ಜನವರಿ 21 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣಗೊಳಿಸಿ, ನಂತರ ಜೈಬಾಪು, ಜೈಭೀಮ, ಜೈ ಸಂವಿಧಾನ ಘೋಷವಾಕ್ಯದೊಂದಿಗೆ ಸಾರ್ವಜನಿಕ ಸಭೆಯನ್ನು ನಡೆಸಲಾಯಿತು. ಭಾರತ ದೇಶ ಹಳ್ಳಿಗಳ ದೇಶ, ಹಳ್ಳಿಗಳ ಅಭಿವೃದ್ಧಿಗಳ ಮೂಲಕ ದೇಶ ಅಭಿವೃದ್ಧಿ ಸಾಧ್ಯವೆಂದು ಪ್ರತಿಪಾದಿಸಿದ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗೆ ಜೀವ ತುಂಬಿದ್ದರು. ಗ್ರಾಮಗಳ ಸ್ವಾವಲಂಬನೆಯಿಂದ , ದೇಶ ಸ್ವಾವಲಂಬನೆಯಾಗುತ್ತದೆ. ಗುಡಿಕೈಗಾರಿಕೆಗಳು ಗ್ರಾಮಗಳ ಆರ್ಥಿಕತೆಯ ತಳಹದಿಯಾಗಿದ್ದು, ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ. ಈ ನಿಟ್ಟಿನಲ್ಲಿ ಗಾಂಧಿ ಭಾರತ ವನ್ನು ನಿರ್ಮಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದು ತಿಳಿಸಿದರು.

ಕುಂಭಮೇಳದಲ್ಲಿ ಕನ್ನಡಿಗರ ರಕ್ಷಣೆಗೆ ಕ್ರಮ

ಪ್ರಯಾಗ್ ರಾಜ್‌ನ ಕುಂಭಮೇಳದ ಕಾಲ್ತುಳಿತದ ದುರಂತದಲ್ಲಿ ನಾಲ್ವರು ಕನ್ನಡಿಗರು ಮೃತಪಟ್ಟಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, “ಬೆಳಗಾವಿಯ ನಾಲ್ವರು ಮೃತಪಟ್ಟಿರುವ ಮಾಹಿತಿ ದೃಢಪಟ್ಟಿದೆ ಹಾಗೂ ಗಾಯಗೊಂಡವರನ್ನು ಕರೆತರಲು ಏರ್ ಆ್ಯಂಬುಲೆನ್ಸ್ ವ್ಯವಸ್ಥೆಗೊಳಿಸಲಾಗಿದ್ದು, ಬೆಳಗಾವಿಯ ಹಿರಿಯ ಅಧಿಕಾರಿಗಳು ಅವರನ್ನು ಕರೆತರಲಿದ್ದಾರೆ. ಜಿಲ್ಲಾ ಸಚಿವರು ತೆಗೆದುಕೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...