ಗಂಗಾವತಿ | ಗಣೇಶ ಮೂರ್ತಿ ಮೆರವಣಿಗೆ ವೇಳೆ ಮಸೀದಿಗೆ ಮಂಗಳಾರತಿ; ದೂರು ದಾಖಲು

Date:

  • ಸಂಘ ಪರಿವಾರದ ಕಾರ್ಯಕರ್ತರಿಂದ ಕೃತ್ಯ
  • ಧಾರ್ಮಿಕ ಸೌಹಾರ್ದಕ್ಕೆ ಧಕ್ಕೆ ಆರೋಪದಡಿ ದೂರು

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಮಸೀದಿಗೆ ಮಂಗಳಾರತಿ ಮಾಡಿದ್ದು, ಅವರ ವಿರುದ್ಧ ಠಾಣೆಯಲ್ಲಿ ದೂರು ದಾಖಲಾಗಿದೆ.

ಗಂಗಾವತಿ ನಗರ ಠಾಣೆ ಪೊಲೀಸರು, ಧಾರ್ಮಿಕ ಸೌಹಾರ್ದಕ್ಕೆ ಧಕ್ಕೆ ಆರೋಪದ ಅಡಿ ಸ್ವಯಂಪ್ರೇರಿತ ದೂರು ದಾಲಿಸಿಕೊಂಡಿದ್ದಾರೆ. ಶ್ರೀಕಾಂತ್ ಹೊಸಕೇರಿ, ಯಮನೂರು ರಾಠೋ‌ಡ್‌, ಕುಮಾರ್‌ ಹೂಗಾರ, ಚನ್ನಬಸವ ಹೂಗಾರ ಹಾಗೂ ಸಂಗಮೇಶ ಅಯೋಧ್ಯಾ ಎಂಬುವವರ ಮೇಲೆ ಪ್ರಕರಣ ದಾಖಲಾಗಿದೆ.

2023ರ ಸೆಪ್ಟೆಂಬರ್​ 28 ರಂದು ಗಂಗಾವತಿ ನಗರದಲ್ಲಿ ಹಿಂದೂ ಮಹಾ ಮಂಡಳಿಯ ಗಣೇಶ ವಿಸರ್ಜನಾ ಮೆರವಣಿಗೆ ನಡೆದಿತ್ತು. ಮೆರವಣಿಗೆಯು ಸಾಯಂಕಾಲ 4 ಗಂಟೆಗೆ ಗಂಗಾವತಿ ಬಸ್ ನಿಲ್ದಾಣದಿಂದ ಪ್ರಾರಂಭವಾಗಿದ್ದು, ಕೋರ್ಟಿ ಸರ್ಕಲ್, ಪಂಪಾನಗರ ಸರ್ಕಲ್, ಬಸವಣ್ಣ ಸರ್ಕಲ್‌ ಮೂಲಕ ಸಾಗಿ ರಾತ್ರಿ 9.45ರ ಸುಮಾರಿಗೆ ಗಾಂಧಿ ವೃತ್ತದ ಬಳಿ ಇದ್ದ ದೊಡ್ಡ ಜಾಮೀಯಾ ಮಸೀದಿ ಬಳಿ ಮೆರವಣಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ ಗಲಾಟೆ | ಪರಿಸ್ಥಿತಿ ನಿಯಂತ್ರಣದಲ್ಲಿದೆ: ಸಚಿವ ಪರಮೇಶ್ವರ್‌

ಈ ಸಂದರ್ಭದಲ್ಲಿ ಕಿಡಿಗೇಡಿಗಳು ಗಲಭೆಯನ್ನು ಸೃಷ್ಟಿ ಮಾಡುವ ಉದ್ದೇಶದಿಂದಲೇ ಜೈ ಶ್ರೀರಾಮ, ಜೈ ಶ್ರೀರಾಮ, ಭೋಲೋ ಭಾರತ ಮಾತಾಕಿ ಜೈ, ಗವಿ ಗಂಗಾಧರೇಶ್ವರ ಮಹಾರಾಜಕಿ ಜೈ ಅಂತಾ ಘೋಷಣೆ ಕೂಗಿ, ಮಂಗಳಾರತಿ ಮಾಡಿದ್ದಾರೆ. ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಯಮನೂರ ರಾಠೋಡ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಮಸೀದಿಗೆ ಮಂಗಳಾರತಿ ಮಾಡಿರುವ ವಿಡಿಯೋವನ್ನು ಹಂಚಿಕೊಂಡು ಧರ್ಮೋ ರಕ್ಷತಿ ರಕ್ಷಿತಃ ಅಂತ ಕ್ಯಾಪ್ಷನ್​ ಬರೆದು ವೈರಲ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...