ಜರ್ಮನಿಯಲ್ಲಿ ಕೆಲಸ ಮಾಡಲು ಬಯಸುವ ನರ್ಸ್‌ಗಳಿಗೆ ಜರ್ಮನ್‌ ಭಾಷಾ ಪರೀಕ್ಷಾ ಕೇಂದ್ರಕ್ಕೆ ಚಾಲನೆ

Date:

ವಿದೇಶದಲ್ಲಿ ವೃತ್ತಿ ಜೀವನ ಆರಂಭಿಸಬೇಕೆಂಬ ಕನಸು ಹೊಂದಿರುವ ಆಕಾಂಕ್ಷಿಗಳಿಗೆ ಅವಕಾಶ ಒದಗಿ ಬಂದಿದೆ. ಜರ್ಮನಿಯಲ್ಲಿ ನರ್ಸಿಂಗ್‌ ಹಾಗೂ ಆರೋಗ್ಯ ಸೇವಾ ಕ್ಷೇತ್ರದಲ್ಲಿ ವೃತ್ತಿ ಜೀವನ ಕಂಡುಕೊಳ್ಳಬೇಕೆನ್ನುವವರಿಗೆ ಕರ್ನಾಟಕ ಸರ್ಕಾರ ವಿಶೇಷ ಯೋಜನೆ ರೂಪಿಸಿದೆ.

ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ (ಕೆವಿಟಿಎಸ್‌ಡಿಸಿ) ನಿಗಮ ಈಗ ಜರ್ಮನ್‌ ಭಾಷಾ ಕಲಿಕಾ ಕೇಂದ್ರವನ್ನು ಆರಂಭಿಸಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಡೊಯಿಚೆ ಫಾಕ್‌ಕ್ರಾಪ್ಟ್‌ ಏಜೆಂಟುರ್‌ ಫರ್‌ ಎಸುಂಡ್‌ಟಾಯ್ಟ್‌ ಮತ್ತು ಫ್ಲೆಗೆಬುರುಫ್‌ ಜಿಎಂಬಿಹೆಚ್ (ಡಿಇಎಫ್‌ಎ) ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಜರ್ಮನಿ ಪರವಾಗಿ ಒಪ್ಪಂದಕ್ಕೆ ಸಹಿ ಹಾಕಿದ ಟೆಲ್ಕ್‌ನ ಗ್ಲೋಬಲ್ ಬ್ಯುಸಿನೆಸ್ ನಿರ್ದೇಶಕ ಬ್ರೂನೋ ಕಾರ್ಲೆಸ್ಸೊ ಒಪ್ಪಂದಕ್ಕೆ ಸಹಿ ಹಾಕಿದರು.

ಆರೋಗ್ಯ ಕ್ಷೇತ್ರದಲ್ಲಿ ಭಾರತ-ಜರ್ಮನಿ ಸಹಕಾರವನ್ನು ಬಲಪಡಿಸಲು ಪೀಣ್ಯದಲ್ಲಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯಲ್ಲಿ (ಕೆಜಿಟಿಟಿಐ) ಹೊಸ ಜರ್ಮನಿ ಭಾಷಾ ಪರೀಕ್ಷಾ ಕೇಂದ್ರವನ್ನು ಉದ್ಘಾಟಿಸಲಾಯಿತು. ಈಗಾಗಲೇ ಆಕಾಂಕ್ಷಿತ ಅಭ್ಯರ್ಥಿಗಳ ಆಯ್ಕೆ ಮಾಡಲು ಆರಂಭಿಸಿದೆ. ಮುಖ್ಯವಾಗಿ ನರ್ಸ್‌ಗಳಿಗೆ ವೃತ್ತಿಪರತೆ, ವಲಸೆ ಹಾಗೂ ಇತರೆ ವಿಷಯಗಳಿಗೆ ಅನುಕೂಲವಾಗಲೆಂದು ಜರ್ಮನ್ ಭಾಷಾ ಕಲಿಕೆ ತರಬೇತಿ ಆರಂಭಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್ ಪಾಟೀಲ್, “ಕರ್ನಾಟಕದಾದ್ಯಂತ ಆರೋಗ್ಯ ಮತ್ತು ನರ್ಸಿಂಗ್ ವೃತ್ತಿಪರರು ಜರ್ಮನಿಯಲ್ಲಿ ಉದ್ಯೋಗ ಅರಸಿ ಹೋದರೆ ಅವರಿಗೆ ಭಾಷಾ ಸಮಸ್ಯೆ ಬರಬಾರದು ಎಂದು ತರಬೇತಿ ನೀಡಲಾಗುತ್ತಿದೆ. ಅಲ್ಲಿ ನೋಂದಣಿಯಾಗಿರುವ ನರ್ಸ್‌ಗಳಿಗೆ ಜರ್ಮನ್ ಪ್ರಾವೀಣ್ಯತೆ ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ಇದು ನೆರವಾಗಲಿದೆ” ಎಂದರು.

Capture 33

ಜರ್ಮನ್ ಫೆಡರಲ್ ಆರೋಗ್ಯ ಸಚಿವಾಲಯದಿಂದ ಸ್ಥಾಪಿಸಲ್ಪಟ್ಟ ಡಿಇಎಫ್ಎ, ಅಂತಾರಾಷ್ಟ್ರೀಯ ಆರೋಗ್ಯ ಕಾರ್ಯಕರ್ತರ ನೇಮಕಾತಿ, ನೈತಿಕತೆ, ಪಾರದರ್ಶಕತೆ ಖಚಿತಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಯುರೋಪಿಯನ್ ಭಾಷಾ ಪ್ರಮಾಣಪತ್ರ (ಟೆಲ್ಕ್) ಪರೀಕ್ಷೆಗಳು, ಯುರೋಪಿಯನ್ ಫ್ರೇಮ್‌ವರ್ಕ್ ಆಫ್ ರೆಫರೆನ್ಸ್ ಫಾರ್ ಲ್ಯಾಂಗ್ವೇಜಸ್ (ಸಿಇಎಫ್‌ಆರ್) ಜೊತೆ ಹೊಂದಿಕೆಯಾಗಿದ್ದು ಇದರಿಂದ ಜರ್ಮನಿಯಲ್ಲಿ ಅಧ್ಯಯನ, ಕೆಲಸ ಮತ್ತು ವಾಸಕ್ಕೆ ಸೌಲಭ್ಯ ಒದಗಿಸುತ್ತದೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಟೆಲ್ಕ್‌ನ ಗ್ಲೋಬಲ್ ಬ್ಯುಸಿನೆಸ್ ನಿರ್ದೇಶಕ ಬ್ರೂನೋ ಕಾರ್ಲೆಸ್ಸೊ, ಈಗ ಸ್ಥಾಪನೆಯಾಗಿರುವ ತರಬೇತಿ ಕೇಂದ್ರವು ಮಹತ್ವಾಕಾಂಕ್ಷಿ ಆರೋಗ್ಯ ವೃತ್ತಿಪರರಿಗೆ ಉತ್ತಮ-ಗುಣಮಟ್ಟದ ಭಾಷಾ ಪ್ರಮಾಣೀಕರಣ ಮಾರ್ಗ ಒದಗಿಸಲು ಪ್ರಮುಖ ಪಾತ್ರ ವಹಿಸಲಿದೆ ಎಂದರು.

ಇದನ್ನು ಓದಿದ್ದೀರಾ? ಉಳ್ಳಾಲ | ಅನಧಿಕೃತ ಮದ್ಯದಂಗಡಿ ಕಾರ್ಯಾಚರಣೆ: ಅಮೃತ ಬಾರ್ ತೆರ‌ವುಗೊಳಿಸಲು ಅಧಿಕಾರಿಗಳು ವಿಫಲ

ಈ ಕಾರ್ಯಕ್ರಮದಲ್ಲಿ ಜರ್ಮನ್ ಡೆಪ್ಯೂಟಿ ಕಾನ್ಸುಲ್ ಜನರಲ್ ಅನೆಟ್ಟ ಬೇಸ್ಲರ್‌, ಭಾರತ ಮತ್ತು ಸೌಥ್‌ ಈಸ್ಟ್‌ ಏಷ್ಯಾ ನಿರ್ದೇಶಕ ಅನೂಪ್ ಅಚ್ಯುತನ್, ಕೆವಿಟಿಎಸ್‌ಡಿಸಿ ಅಧ್ಯಕ್ಷರಾದ ಶಿವಕಾಂತಮ್ಮ ನಾಯಕ್, ಆರ್. ರಾಗಪ್ರಿಯಾ ಮತ್ತು ಎನ್.ಎಂ. ನಾಗರಾಜ ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...